ಲೋಕಸಭೆ ಚುನಾವಣೆಯಲ್ಲಿ ಹೀನಾಯ ಸೋಲು: ರಾಜ್ಯಸಭೆಗೆ ದೇವೇಗೌಡ, ಖರ್ಗೆ

ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋತು ನಿರಾಸೆ ಅನುಭವಿಸಿರುವ  ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತೊಮ್ಮೆ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದ್ದಾರೆ. 
ಖರ್ಗೆ ಮತ್ತು ದೇವೇಗೌಡ
ಖರ್ಗೆ ಮತ್ತು ದೇವೇಗೌಡ

ಬೆಂಗಳೂರು:  ಕಳೆದ ಲೋಕಸಭೆ ಚುನಾವಣೆಯಲ್ಲಿ ಸೋತು ನಿರಾಸೆ ಅನುಭವಿಸಿರುವ  ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಮತ್ತು ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಮತ್ತೊಮ್ಮೆ ಚುನಾವಣೆ ಎದುರಿಸಲು ಸಿದ್ಧತೆ ನಡೆಸಿದ್ದಾರೆ. 

ಅನುಭವಿ ರಾಜಕಾರಣಿ ಮಲ್ಲಿಕಾರ್ಜುನ ಖರ್ಗೆ ಅವರ ಅವಶ್ಯಕತೆ ಸಂಸತ್‌ನಲ್ಲಿ ಇದೆ ಎಂದು ಕಾಂಗ್ರೆಸ್ ಹೈಕಮಾಂಡ್ ನಿಶ್ಚಯಿಸಿರುವ ಕಾರಣ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಮತ್ತೊಂದು ಅವಕಾಶ ನೀಡಲು ಚರ್ಚೆ ನಡೆದಿದೆ

ಜೂನ್ ನಲ್ಲಿ ನಾಲ್ಕು ರಾಜ್ಯಸಭೆ ಸ್ಥಾನಗಳಿಗೆ ಚುನಾವಣೆ ನಡೆಸಲಿದ್ದು, ಮಲ್ಲಿಕಾರ್ಜುನ ಖರ್ಗೆ ಅವರನ್ನು ಆಯ್ಕೆ ಮಾಡಿ ರಾಜ್ಯಸಭೆಗೆ ಕಳಿಸಲು ಮಾತುಕತೆಗಳು ಹೈಕಮಾಂಡ್ ಮಟ್ಟದಲ್ಲಿ ನಡೆದಿವೆ. 

ಈಗಿರುವ ಸಂಖ್ಯಾಬಲದ ಅನುಸಾರ ಕಾಂಗ್ರೆಸ್ ಒಂದು ಮತ್ತು ಬಿಜೆಪಿ ಎರಡು ಸ್ಥಾನಗಳಲ್ಲಿ ಗೆಲ್ಲಬಹುದಾಗಿದೆ. ಜೆಡಿಎಸ್‌ ಸಂಖ್ಯಾಬಲ ಕಡಿಮೆ ಇರುವ ಕಾರಣ ಕಾಂಗ್ರೆಸ್‌-ಬಿಜೆಪಿಯ ನೆರವಿನೊಂದಿಗೆ ಒಂದು ಸ್ಥಾನ ಗೆಲ್ಲಬಹುದಾಗಿದೆ. ಜೆಡಿಎಸ್‌ ಪಕ್ಷವು ದೇವೇಗೌಡ ಅವರನ್ನು ಕಣಕ್ಕೆ ಇಳಿಸುವ ಯೋಜನೆ ಹಾಕಿದೆ. 

ದೇವೇಗೌಡ ಅವರನ್ನು ಕಣಕ್ಕಿಳಿಸಿದರೆ ಕಾಂಗ್ರೆಸ್-ಬಿಜೆಪಿ ನೆರವು ನೀಡುವ ಸಾಧ್ಯತೆ ಇದೆ. ಜೂನ್ ತಿಂಗಳಲ್ಲಿ ಕಾಂಗ್ರೆಸ್‌ನ ರಾಜೀವ್‌ ಗೌಡ, ಬಿ.ಕೆ.ಹರಿಪ್ರಸಾದ್, ಬಿಜೆಪಿಯ ಪ್ರಭಾಕರ್ ಕೋರೆ, ಜೆಡಿಎಸ್‌ನ ಕುಪೇಂದ್ರರೆಡ್ಡಿ ಅವರು ನಿವೃತ್ತರಾಗುತ್ತಿದ್ದಾರೆ. 

ಆ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ. ಮಲ್ಲಿಕಾರ್ಜುನ ಖರ್ಗೆ ಹಾಗೂ ದೇವೇಗೌಡ ಇಬ್ಬರೂ ಸಹ ಕಳೆದ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿ ಸೋಲನುಭವಿಸಿದ್ದಾರೆ. ಹಾಗಾಗಿ ಈಗ ಮತ್ತೊಮ್ಮೆ ಅದೃಷ್ಟ ಪರೀಕ್ಷೆಗೆ ಇಳಿಯುವ ಸಾಧ್ಯತೆ ಇದೆ.

ರಾಜ್ಯಸಭಾ ಚುನಾವಣೆಗೆ ಸ್ಫರ್ಧೆ ಮಾಡುವ ಕುರಿತು ಪಕ್ಷದ ಹೈಕಮಾಂಡ್ ತೀರ್ಮಾನವನ್ನು ಕೈಗೊಳ್ಳಬೇಕಿದೆ" ಎಂದು ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ರಾಷ್ಟ್ರೀಯ ಮಟ್ಟದಲ್ಲಿ ಹೆಚ್ಚಿನ ಪ್ರಭಾವವನ್ನು ಖರ್ಗೆ ಹೊಂದಿದ್ದು, ಆಯ್ಕೆಗೆ ಒಪ್ಪಿಗೆ ಸಿಗುವ ಸಾಧ್ಯತೆ ಇದೆ. 

ಮತ್ತೆ ಚುನಾವಣಾ ಕಣಕ್ಕೆ ಮಲ್ಲಿಕಾರ್ಜುನ ಖರ್ಗೆ, ದೇವೇಗೌಡ "ನಾನು ಪಕ್ಷದ ಶಿಸ್ತಿನ ಸಿಪಾಯಿ. ನಾನು ಏನನ್ನೂ ಕೇಳುವುದಿಲ್ಲ. ಪಕ್ಷದ ಹೈಕಮಾಂಡ್ ತೆಗೆದುಕೊಳ್ಳುವ ತೀರ್ಮಾನಕ್ಕೆ ಬದ್ಧನಾಗಿರುವೆ" ಎಂದು ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದರು.

ಇನ್ನು ರಾಜ್ಯ ಸಭೆ ಚುನಾವಣೆಗೆ ಸ್ಪರ್ಧಿಸುವಂತೆ ಮಾಜಿ ಪ್ರಧಾನಿ ದೇವೇಗೌಡರಲ್ಲಿ ಮನವಿ ಮಾಡಿದ್ದೇವೆ,  ಆದರೆ ಅವರು ಅದಕ್ಕೆ ಇನ್ನೂ ಒಪ್ಪಿಗೆ ನೀಡಿಲ್ಲ ಎಂದು ಜೆಡಿಎಸ್ ಎಂಎಲ್ ಸಿ ಟಿ.ಎ ಶರವಣ ತಿಳಿಸಿದ್ದಾರೆ.

ಆರು ಬಾರಿ ಸಂಸದರಾಗಿದ್ದ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ 1996ರಿಂದ 1998 ರಲ್ಲಿ ರಾಜ್ಯಸಭೆ ಸದಸ್ಯರಾಗಿದ್ದರು.  2019ರಲ್ಲಿ ತುಮಕೂರು  ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಪರಾಭವಗೊಂಡಿದ್ದರು. ಜೆಡಿಎಸ್ ಬಳಿ 34 ಸದಸ್ಯರಿದ್ದು, ರಾಜ್ಯಸಭೆಗೆ ಸದಸ್ಯರನ್ನ ಆಯ್ಕೆ ಮಾಡಲು 45 ಶಾಸಕರ ಅವಶ್ಯಕತೆಯಿದೆ, ಹೀಗಾಗಿ ಕಾಂಗ್ರೆಸ್ ಜೊತೆ ಚರ್ಚಿಸಿ ಮುಂದಿನ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಜೆಡಿಎಸ್ ಮೂಲಗಳು ತಿಳಿಸಿವೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com