ಮುಸ್ಲಿಮರ ಮೇಲೆ ದೌರ್ಜನ್ಯ ನಡೆದಿದ್ದರೆ ಜನಸಂಖ್ಯೆ ಶೇ.19ರಷ್ಟು ಹೆಚ್ಚಾಗುತ್ತಿರಲಿಲ್ಲ: ಸಚಿವ ಸಿ.ಟಿ.ರವಿ

ಭಾರತದಲ್ಲಿ ಧಾರ್ಮಿಕ ದೌರ್ಜನ್ಯ ನಡೆದಿದ್ದರೆ ದೇಶದ ಲ್ಲಿನ ಮುಸ್ಲಿಮರ ಸಂಖ್ಯೆ ಹೆಚ್ಚಾಗುತ್ತಿರಲಿಲ್ಲ. 1.5ರಷ್ಟು ಇದ್ದ ಮುಸ್ಲಿಮರ ಸಂಖ್ಯೆ 19 ರಷ್ಟು ಹೆಚ್ಚಾಗಿದೆ. 
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಚಿತ್ರದುರ್ಗ: ಭಾರತದಲ್ಲಿ ಧಾರ್ಮಿಕ ದೌರ್ಜನ್ಯ ನಡೆದಿದ್ದರೆ ದೇಶದ ಲ್ಲಿನ ಮುಸ್ಲಿಮರ ಸಂಖ್ಯೆ ಹೆಚ್ಚಾಗುತ್ತಿರಲಿಲ್ಲ. 1.5ರಷ್ಟು ಇದ್ದ ಮುಸ್ಲಿಮರ ಸಂಖ್ಯೆ 19 ರಷ್ಟು ಹೆಚ್ಚಾಗಿದೆ. ಭಾರತದಲ್ಲಿ ಮುಸ್ಲಿಮರಿಗೆ ಹೆಚ್ಚು ಅಧಿಕಾರ, ಸವಲತ್ತು ನೀಡಲಾಗಿದೆ ಸಚಿವ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಲ್ಪ ಸಂಖ್ಯಾತರಲ್ಲಿ ಭೀತಿ ಸೃಷ್ಟಿಸುವ ಕೆಲಸ ಕಾಂಗ್ರೆಸ್ ಮಾಡುತ್ತಿದ್ದೆ. ಮೂರು ದೇಶಗಳ ಆರು ಸಮುದಾಯದ ಅಲ್ಪಸಂಖ್ಯಾತರಿಗೆ ಪೌರತ್ವ ಕೊಡುವ ಕಾಯ್ದೆ, ಆಫ್ಘಾನಿಸ್ತಾನ, ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಮುಸಲ್ಮಾನರು ಬಹುಸಂಖ್ಯಾತರು. 

ಹೀಗಾಗಿ ಅವರಿಗೆ ಪೌರತ್ವ ನೀಡುವ ವಿಚಾರ ನಮ್ಮ ಮುಂದೆ ಇಲ್ಲ, ಭಾರತ ಧರ್ಮದ ಆಧಾರದ ಮೇಲೆ ವಿಭಜನೆಯಾದಾಗ ಮುಸ್ಲಿಮರು ಪ್ರತ್ಯೇಕ ರಾಷ್ಟ್ರ ಮಾಡಿಕೊಂಡು ಹೋದರು ಎಂದು ಪರೋಕ್ಷವಾಗಿ ರವಿ ಕಾಂಗ್ರೆಸ್ ವಿರುದ್ಧ ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com