ಕೆಪಿಸಿಸಿ ಅಧ್ಯಕ್ಷಗಿರಿಗೆ ಎಂ.ಬಿ ಪಾಟೀಲ್ ಪರ ಸಿದ್ದರಾಮಯ್ಯ ಬ್ಯಾಟಿಂಗ್: ಹಿರಿಯ ನಾಯಕರ ವಿರೋಧ

ರಾಜ್ಯ ಕಾಂಗ್ರೆಸ್ ನಾಯಕತ್ವದ ಗೊಂದಲ ಅಂತಿಮ ಹಂತಕ್ಕೆ ತಲುಪಿದ್ದು, ಹೈಕಮಾಂಡ್ ಸಾಮಾಜಿಕ ನ್ಯಾಯದ ಲೆಕ್ಕಾಚಾರದಲ್ಲಿ, ಜಾತಿ ಮತ್ತು ಪ್ರಾದೇಶಿಕತೆ ಆಧಾರದಲ್ಲಿ ಕೆಪಿಸಿಸಿ ಅಧ್ಯಕ್ಷ, ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕನ ಹುದ್ದೆಗಳಿಗೆ ವಾರಾಂತ್ಯದೊಳಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.
ಎಂಬಿ ಪಾಟೀಲ್ ಮತ್ತು ಸಿದ್ದರಾಮಯ್ಯ
ಎಂಬಿ ಪಾಟೀಲ್ ಮತ್ತು ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಕಾಂಗ್ರೆಸ್ ನಾಯಕತ್ವದ ಗೊಂದಲ ಅಂತಿಮ ಹಂತಕ್ಕೆ ತಲುಪಿದ್ದು, ಹೈಕಮಾಂಡ್ ಸಾಮಾಜಿಕ ನ್ಯಾಯದ ಲೆಕ್ಕಾಚಾರದಲ್ಲಿ, ಜಾತಿ ಮತ್ತು ಪ್ರಾದೇಶಿಕತೆ ಆಧಾರದಲ್ಲಿ ಕೆಪಿಸಿಸಿ ಅಧ್ಯಕ್ಷ, ಶಾಸಕಾಂಗ ಪಕ್ಷದ ನಾಯಕ ಹಾಗೂ ಪ್ರತಿಪಕ್ಷದ ನಾಯಕನ ಹುದ್ದೆಗಳಿಗೆ ವಾರಾಂತ್ಯದೊಳಗೆ ಅಧಿಕೃತ ಆದೇಶ ಹೊರಡಿಸುವ ಸಾಧ್ಯತೆ ಇದೆ.

ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವರುಗಳಾದ ಡಿ.ಕೆ ಶಿವಕುಮಾರ್ ಮತ್ತು ಎಂಬಿ ಪಾಟೀಲ್ ನಡುವೆ  ಪೈಪೋಟಿ ನಡೆಯುತ್ತಿದೆ, ಹೈಕಮಾಂಡ್ ಒಲವು ಎಂಬಿ ಪಾಟೀಲ್ ಕಡೆಗಿದೆ ಎಂದು ಹೇಳಲಾಗುತ್ತಿದ.ೆ ಲಿಂಗಾಯತರಾದ ಪಾಟೀಲ್ ಅವರನ್ನು ಕೆಪಿಸಿಸಿ ಅಧ್ಯಕ್ಷರನ್ನಾಗಿ ನೇಮಿಸಿದರೆ ಲಿಂಗಾಯತ ಸಮುದಾವರನ್ನು ಸೆಳೆಯಬಹುದು ಎಂಬ ಲೆಕ್ಕಾಚಾರ ಇದಾಗಿದೆ ಎಂದು ಹಿರಿಯ ಕಾಂಗ್ರೆಸ್ ನಾಯಕರೊಬ್ಬರು ಅಭಿಪ್ರಾಯ ಪಟ್ಟಿದ್ದಾರೆ. 

ಮಾಜಿ ಸಿಎಂ ಸಿದ್ದರಾಮಯ್ಯ ಕೇಂದ್ರದ ಕಾಂಗ್ರೆಸ್ ನಾಯಕರನ್ನು ಭೇಟಿಯಾಗಿದ್ದು, ಪಾಟೀಲ್ ಹೆಸರನ್ನು ಪ್ರಸ್ತಾಪಿಸಿದ್ದಾರೆ. ಲಿಂಗಾಯತ ಸಮುದಯದ ಓಲೈಕೆಗೆ ಇದು ಸಹಕಾರಿಯಾಗಲಿದೆ ಎಂದು ಹೇಳಲಾಗುತ್ತಿದೆ. ಈ ಸಂಬಂಧ ನಿರ್ಧಾರ ತೆಗೆದುಕೊಂಡು ಶೀಘ್ರವೇ ತಿಳಿಸುವುದಾಗಿ ಹೈಕಮಾಂಡ್ ಹೇಳಿದಂತೆಯಂತೆ.

ಆದರೆ ಎರಡು ದಿನಗಳ ದೆಹಲಿ ಪ್ರವಾಸದಲ್ಲಿ ಸೋನಿಯಾಗಾಂಧಿ ಹಾಗೂ ರಾಹುಲ್ ಗಾಂಧಿ ಭೇಟಿಯಲ್ಲಿ ರಾಜ್ಯದಲ್ಲಿ ಪಕ್ಷದ ನಾಯಕತ್ವದ ಕುರಿತು ತಮ್ಮ ಅಭಿಪ್ರಾಯ ತಿಳಿಸಿದ್ದು, ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಎಂ.ಬಿ.ಪಾಟೀಲ್ ಅವರನ್ನೇ ನೇಮಿಸಬೇಕೆಂದು ಪಟ್ಟು ಹಿಡಿದ್ದಾರೆ ಎಂದು ತಿಳಿದು ಬಂದಿದೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com