ರಾಜ್ಯ ಬಿಜೆಪಿ ಪೂರ್ಣಾವಧಿ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಆಯ್ಕೆ

ರಾಜ್ಯ ಬಿಜೆಪಿ ಹಂಗಾಮಿ ಅಧ್ಯಕ್ಷರಾಗಿದ್ದ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಮೂರು ವರ್ಷಗಳ ಪೂರ್ಣಾವಧಿ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
 

Published: 16th January 2020 01:30 PM  |   Last Updated: 16th January 2020 01:30 PM   |  A+A-


ರಾಜ್ಯ ಬಿಜೆಪಿ ಪೂರ್ಣಾವಧಿ ಅಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಆಯ್ಕೆ

Posted By : Raghavendra Adiga
Source : UNI

ಬೆಂಗಳೂರು: ರಾಜ್ಯ ಬಿಜೆಪಿ ಹಂಗಾಮಿ ಅಧ್ಯಕ್ಷರಾಗಿದ್ದ ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲ್ ಅವರನ್ನು ಮೂರು ವರ್ಷಗಳ ಪೂರ್ಣಾವಧಿ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.

ಬೆಂಗಳೂರು ಬಿಜೆಪಿ ಕೇಂದ್ರ ಕಾರ್ಯಾಲಯದಲ್ಲಿ ಗುರುವಾರ ಪಕ್ಷದ ರಾಜ್ಯ ಚುನಾವಣಾ ವೀಕ್ಷಕ, ರಾಷ್ಟ್ರೀಯ ಚುನಾವಣಾ ಸಹ ಚುನಾವಣಾಧಿಕಾರಿ ಹಾಗೂ ಸಚಿವ ಸಿ.ಟಿ.ರವಿ, ರಾಜ್ಯ ಚುನಾವಣಾಧಿಕಾರಿ ಹಾಗೂ ಬಿಜೆಪಿ ವಕ್ತಾರ ಅಶ್ವಥ್ ನಾರಾಯಣ್, ಉಪಚುನಾವಣಾಧಿಕಾರಿ ಹಾಲಪ್ಪ ಆಚಾರ್ ಅವರು ನಳಿನ್ ಕುಮಾರ್ ಕಟೀಲ್ ಹೆಸರನ್ನು ಘೋಷಣೆ ಮಾಡಿ, ಅವರಿಗೆ ಪ್ರಮಾಣಪತ್ರ ನೀಡಿದರು.

 

 

ಈ ಸಂದರ್ಭದಲ್ಲಿ ಮಾತನಾಡಿದ ಸಚಿವ ಸಿ.ಟಿ. ರವಿ, ಮೂರು ವರ್ಷಗಳ ಅವಧಿಗೆ ಬಿಜೆಪಿ ರಾಜ್ಯಾಧ್ಯಕ್ಷರಾಗಿ ನಳಿನ್ ಕುಮಾರ್ ಕಟೀಲ್ ಅವರು ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಅಧ್ಯಕ್ಷರನ್ನು ಆಯ್ಕೆ ಮಾಡಲು 252 ಅರ್ಹ ಮತದಾರರ ಪಟ್ಟಿ ಸಿದ್ಧಪಡಿಸಲಾಗಿತ್ತು. ಇಂದು ಬೆಳಿಗ್ಗೆ ಇಪ್ಪತ್ತು ಸೂಚಕರು ಅವರ ಹೆಸರು ಸೂಚಿಸಿದ್ದರು. ಅಧ್ಯಕ್ಷರ ಸ್ಥಾನಕ್ಕೆ ಒಂದೇ ನಾಮಪತ್ರ ಸಲ್ಲಿಕೆಯಾದ್ದರಿಂದ ಮತ್ತು ನಾಮಪತ್ರ ಊರ್ಜಿಗೊಂಡಿರುವುದರಿಂದ ನಳಿನ್ ಕುಮಾರ್ ಕಟೀಲ್ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಹೇಳಿದರು. 

Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp