ನಾಲ್ಕೈದು ದಿನಗಳಲ್ಲಿ ಕೆಪಿಸಿಸಿ ಅಧ್ಯಕ್ಷರ ನೇಮಕ: ಈಶ್ವರ ಖಂಡ್ರೆ

ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಸಂಬಂಧ ಕಾಂಗ್ರೆಸ್  ಹೈಕಮಾಂಡ್ ಇನ್ನು ನಾಲ್ಕೈದು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದೆ  ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಈಶ್ವರ್ ಖಂಡ್ರೆ
ಈಶ್ವರ್ ಖಂಡ್ರೆ

ತುಮಕೂರು: ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಸಂಬಂಧ ಕಾಂಗ್ರೆಸ್  ಹೈಕಮಾಂಡ್ ಇನ್ನು ನಾಲ್ಕೈದು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದೆ  ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ತುಮಕೂರಿನ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದ ವೇಳೆ ಮಾತನಾಡಿದ ಅವರು ರಾಜ್ಯ ಕಾಂಗ್ರೆಸ್ ನಲ್ಲಿ ನಡೆಯುತ್ತಿರುವ ಎಲ್ಲಾ ಬೆಳವಣಿಗೆಗಳನ್ನು  ಹೈಕಮಾಂಡ್ ಗಮನಿಸುತ್ತಿದ್ದು, ಸೂಕ್ತ ನಿರ್ಧಾರ ಕೈಗೊಳ್ಳುತ್ತದೆ ಎಂದು ಹೇಳಿದ್ದಾರೆ.

ನಿಮಗೆ ಆ ಹುದ್ದೆ ನೀಡಿದರೇ ನಿಭಾಯಿಸುವಿರಾ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,  ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತ, ಯಾವುದೇ ಹುದ್ದೆ ನೀಡಿದರು ನಿರ್ವಹಿಸುವುದಾಗಿ ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com