ಎಸ್ ಡಿಪಿಐ ಮತ್ತು ಕೆಎಫ್ ಡಿ ಸಂಘಟನೆ ನಿಷೇಧಿಸಲು ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಬಿಜೆಪಿ ನಾಯಕರು, ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ, ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿದ ಆಪಾದನೆ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ ಮತ್ತು ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಎಸ್ ಡಿಪಿಐ, ಬಸವರಾಜ್ ಬೊಮ್ಮಾಯಿ ಚಿತ್ರ
ಎಸ್ ಡಿಪಿಐ, ಬಸವರಾಜ್ ಬೊಮ್ಮಾಯಿ ಚಿತ್ರ

ಬೆಂಗಳೂರು: ಬಿಜೆಪಿ ನಾಯಕರು, ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸಿದ, ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿದ ಆಪಾದನೆ ಹಿನ್ನೆಲೆಯಲ್ಲಿ ಎಸ್.ಡಿ.ಪಿ.ಐ ಮತ್ತು ಕೆ.ಎಫ್.ಡಿ ಸಂಘಟನೆಗಳನ್ನು ನಿಷೇಧಿಸಲು ನಿರ್ಧರಿಸಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ನಿಷೇಧಕ್ಕೆ ಈಗಾಗಲೇ ಕ್ರಮಗಳನ್ನು ಆರಂಭಿಸಿದ್ದು, ಇವರೆಡೂ ಸಂಘಟನೆಗಳ ಬಗ್ಗೆ ಪೊಲೀಸರಿಂದ ವಿವರವಾದ ವರದಿ ಕೇಳಲಾಗಿದೆ. ವರದಿ ಸಲ್ಲಿಕೆಯಾದ ತಕ್ಷಣ ಕಾನೂನು ಇಲಾಖೆ ಜೊತೆ ಚರ್ಚಿಸಿ ಕೇಂದ್ರಕ್ಕೆ ಸಲ್ಲಿಸಲಾಗುವುದು ಎಂದು ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರಿಗೆ ತಿಳಿಸಿದರು.

ರಾಜ್ಯದ ಹಲವೆಡೆ ಹಿಂದೂ ಸಂಘಟನೆಗಳ ಕಾರ್ಯಕರ್ತರ ಹತ್ಯೆ, ಮಂಗಳೂರಿನಲ್ಲಿ ಹಿಂಸಾಚಾರಕ್ಕೆ ಈ ಸಂಘಟನೆಗಳೇ ಕಾರಣವಾಗಿದ್ದು, ಇವುಗಳು ನಡೆಸುತ್ತಿರುವ ಭಯೋತ್ಪಾದಕ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿ ಕಲೆ ಹಾಕಲಾಗಿದ್ದು, ಈ ಸಂಘಟನೆಗಳನ್ನು ನಿಷೇಧಿಸುವ ಸಂಬಂಧ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ, ಗೃಹ ಸಚಿವ ಅಮಿತ್ ಷಾ ರಾಜ್ಯಕ್ಕೆ ಭೇಟಿ ನೀಡುತ್ತಿರುವ ಸಂದರ್ಭದಲ್ಲೇ ರಾಜ್ಯ ಬಿಜೆಪಿ ಸರ್ಕಾರ ಈ ತೀರ್ಮಾನ ಕೈಗೊಂಡಿದ್ದು, ರಾಜಕೀಯ ವಲಯದಲ್ಲಿ ಇದು ಭಾರೀ ಚರ್ಚೆಗೆ ಕಾರಣವಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com