ಮುಗಿಯದ ಜಟಾಪಟಿ, ಮೂಡದ ಒಮ್ಮತ: ಬರಿಗೈಯ್ಯಲ್ಲಿ ವಾಪಸಾದ ಖರ್ಗೆ, ಸಿದ್ದರಾಮಯ್ಯ

ಕೆಪಿಸಿಸಿ ಅಧ್ಯಕ್ಷರ ಜತೆಗೆ ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವ ವಿಚಾರ ಕಗ್ಗಂಟಾಗಿದ್ದು, ವರಿಷ್ಠರಿಗೆ ಹೊಸ ತಲೆನೋವು ತಂದೊಡ್ಡಿದೆ.
ಮಲ್ಲಿಕಾರ್ಜುನ ಖರ್ಗೆ
ಮಲ್ಲಿಕಾರ್ಜುನ ಖರ್ಗೆ

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರ ಜತೆಗೆ ಕಾರ್ಯಾಧ್ಯಕ್ಷರನ್ನು ನೇಮಕ ಮಾಡುವ ವಿಚಾರ ಕಗ್ಗಂಟಾಗಿದ್ದು, ವರಿಷ್ಠರಿಗೆ ಹೊಸ ತಲೆನೋವು ತಂದೊಡ್ಡಿದೆ.

ಕಾರ್ಯಾಧ್ಯಕ್ಷರ ನೇಮಕ ವಿಚಾರ ಇತ್ಯರ್ಥವಾಗದೆ ಅಧ್ಯಕ್ಷರನ್ನು ನೇಮಿಸುವ ಬಗ್ಗೆ ಯಾವುದೇ ನಿಲುವು ತೆಗೆದುಕೊಳ್ಳಲು ವರಿಷ್ಠರಿಗೆ ಸಾಧ್ಯವಾಗುತ್ತಿಲ್ಲ ಕಾರ್ಯಾಧ್ಯಕ್ಷರ ನೇಮಿಸುವ ಸಂಬಂದ ಖರ್ಗೆ ಮತ್ತು ಸಿದ್ದರಾಮಯ್ಯ ನಡುವೆ ಒಮ್ಮತ ಮೂಡದ ಕಾರಣ ಕೆಪಿಸಿಸಿ ಅಧ್ಯಕ್ಷರ ಆಯ್ಕೆಯೂ ಕೂಡ ವಿಳಂಬವಾಗುತ್ತಿದೆ ಎಂದು ಮೂಲಗಳು ತಿಳಿಸಿವೆ.

‘ನಾಲ್ಕು ಕಾರ್ಯಾಧ್ಯಕ್ಷ ಹುದ್ದೆಗಳನ್ನು ಸೃಷ್ಟಿಸಿ, ಮುಂಬೈ ಕರ್ನಾಟಕ, ಕಲ್ಯಾಣ ಕರ್ನಾಟಕ ಭಾಗಕ್ಕೂ ಅವಕಾಶ ನೀಡಬೇಕು. ಜಾತಿವಾರು ಲೆಕ್ಕಾಚಾರದ ಮೇಲೆ ಈ ಸ್ಥಾನ ಹಂಚಿಕೆ ಮಾಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ.

ಲಿಂಗಾಯತ, ಅಲ್ಪಸಂಖ್ಯಾತ, ಎಸ್ ಸಿ ಮತ್ತು ಎಸ್ ಟಿ ಸಮುದಾಯಗಳಿಗೆ ಸೇರಿದ ನಾಯಕರನ್ನು ಕಾರ್ಯಾಧ್ಯಕ್ಷರನ್ನಾಗಿ ನೇಮಕ ಮಾಡಬೇಕೆಂದು ಹೇಳುವ ಮೂಲಕ ಖರ್ಗೆಗೆ ಟಾಂಗ್ ಕೊಟ್ಟಿದ್ದಾರೆ. ಆದರೆ ಸಿದ್ದರಾಮಯ್ಯ ಬೇಡಿಕೆಗೆ ಮಲ್ಲಿಕಾರ್ಜುನ ಖರ್ಗ ಸಮ್ಮತಿಸಿಲ್ಲವಾದ್ದರಿಂದ ಕೆಪಿಸಿಸಿ ಅಧ್ಯಕ್ಷ ಮತ್ತು ಕಾರ್ಯಾಧ್ಯಕ್ಷರ ನೇಮಕ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com