ನುಡಿದಂತೆ ನಡೆಯದಿದ್ದರೇ ಪರಿಣಾಮ ಬೇರೆಯಾಗಿರುತ್ತದೆ: 'ಹಳ್ಳಿಹಕ್ಕಿ' ಎಚ್ಚರಿಕೆ

17 ಶಾಸಕರೂ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದು, ಈ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸಬೇಕು ಎಂದು ಹೇಳಿದ್ದಾರೆ, ಒಂದು ವೇಳೆ ಸಚಿವ ಸ್ಥಾನ ನೀಡದೇ ಇದ್ದರೇ ಏನಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,  ನೋಡೋಣ ಏನಾಗುತ್ತೆ ಅಂತಾ ಎಂದು ಹೇಳಿದ್ದಾರೆ
ಎಚ್.ವಿಶ್ವನಾಥ್
ಎಚ್.ವಿಶ್ವನಾಥ್

ಬೆಂಗಳೂರು: ಸಚಿವ ಸಂಪುಟ ವಿಸ್ತರಣೆ ವಿಳಂಭವಾಗುತ್ತಿರುವುದಕ್ಕೆ ಮಾಜಿ ಸಚಿವ ಎಚ್. ವಿಶ್ವನಾಥ್ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

17 ಶಾಸಕರೂ ಸಚಿವ ಸ್ಥಾನದ ನಿರೀಕ್ಷೆಯಲ್ಲಿದ್ದು, ಈ ಹಿಂದೆ ನೀಡಿದ್ದ ಭರವಸೆಯನ್ನು ಈಡೇರಿಸಬೇಕು ಎಂದು ಹೇಳಿದ್ದಾರೆ, ಒಂದು ವೇಳೆ ಸಚಿವ ಸ್ಥಾನ ನೀಡದೇ ಇದ್ದರೇ ಏನಾಗುತ್ತದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು,  ನೋಡೋಣ ಏನಾಗುತ್ತೆ ಅಂತಾ ಎಂದು ಹೇಳಿದ್ದಾರೆ.

ಅಮಿತ್ ಶಾ ಬಂದು ಹೋಗಿದ್ದಾರೆ. ಆದರೆ ಏನೂ ಆಗಿಲ್ಲ. ಆದರೆ ನಮ್ಮ ನಿರೀಕ್ಷೆಗಳು ಹುಸಿ ಆಗಿಲ್ಲ. ಹುಸಿಯಾದರೆ ಅದರ ಪರಿಣಾಮ ಏನಾಗುತ್ತೆ ಎಂಬುದನ್ನು ನೋಡೋಣ. ಬಿಜೆಪಿ ರಾಷ್ಟ್ರೀಯ ಪಕ್ಷ, ದೊಡ್ಡ ಪಕ್ಷ. ಆದ್ದರಿಂದ ಒಡಕು ಧ್ವನಿಗಳು ಸಹಜ ಎಂದು ಹೇಳಿದ್ದಾರೆ.
 
ಯಾರು ಏನೇ ಮಾತನಾಡಿದರೂ ಸಂಪುಟ ವಿಸ್ತರಣೆ ಸಿಎಂ ವಿವೇಚನೆಗೆ ಬಿಟ್ಟ ವಿಚಾರ. ಆದರೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ನಾವೆಲ್ಲರೂ ಕಾರಣ. ಆದ್ದರಿಂದ ಎಲ್ಲ 17 ಜನರಿಗೂ ಸಚಿವ ಸ್ಥಾನ ನೀಡಬೇಕು ಎಂದು ಸಚಿವ ಸ್ಥಾನದ ಆಕಾಂಕ್ಷಿ ಎಚ್.ವಿಶ್ವನಾಥ್ ಆಗ್ರಹಿಸಿದ್ದಾರೆ.

ರಾಷ್ಟ್ರೀಯ ಪಕ್ಷ ಬಿಜೆಪಿಯಲ್ಲಿಯೂ ಭಿನ್ನಾಭಿಪ್ರಾಯಗಳಿವೆ. ಇದರಿಂದ ಸಚಿವ ಸಂಪುಟ ವಿಸ್ತರಣೆ ವಿಳಂಬವಾಗುತ್ತಿದೆ.  ಬಿಜೆಪಿ ಸರ್ಕಾರ ಹೇಗೆ ಅದಿಕಾರಕ್ಕೆ ಬಂತು ಎಂಬುದನ್ನು ಮರೆಯಬಾರದು.

ಉಪಚುನಾವಣೆಯಲ್ಲಿ ಗೆದ್ದಿರುವ ಹಾಗೂ ಸೋತಿರುವ ಬಿಜೆಪಿಯ 17 ಮಂದಿಗೆ ಸಚಿವ ಸ್ಥಾನ ಕೊಡುತ್ತಾರೆ ಎಂಬ ನಂಬಿಕೆ ಹೈಕಮಾಂಡ್, ಅಮಿತ್ ಶಾ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮೇಲಿದೆ. ಒಂದು ವೇಳೆ ಅದು ಬದಲಾದರೆ ಮುಂದೆ ಕಾದು ನೋಡುತ್ತೇವೆ ಎಂದು ಬಿಜೆಪಿಗೆ ಪರೋಕ್ಷ ಎಚ್ಚರಿಕೆ ನೀಡಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com