ಪಕ್ಷದ ಹಿತದೃಷ್ಟಿಯಿಂದ ಆದಷ್ಟು ಬೇಗ ಅಧ್ಯಕ್ಷರ ನೇಮಕ ಮಾಡಲಿ: ಜಿ.ಪರಮೇಶ್ವರ್

ಮುಂಬರುವ ಸ್ಥಳೀಯ ಸಂಸ್ಥೆ, ಸಾರ್ವತ್ರಿಕ ಚುನಾಚಣೆಗಳನ್ನು ಎದುರಿಸಲು ಈಗಿನಿಂದಲೇ ಪಕ್ಷ ಸಂಘಟಎ ಮಾಡುವ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಎದ್ದಿರುವ ಗೊಂದಲವನ್ನು ಸರಿಪಡಿಸಲು ಹೈಕಮಾಂಡ್ ಆದಷ್ಟು ಬೇಗ ಕೆಪಿಸಿಸಿಗೆ ಅಧ್ಯಕ್ಷರನ್ನು ನೇಮಕ ಮಾಡುವಂತೆ ಹಿರಿಯ ಮುಖಂಡ ಡಾ.ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ.
ಜಿ ಪರಮೇಶ್ವರ್-ಸೋನಿಯಾ ಗಾಂಧಿ
ಜಿ ಪರಮೇಶ್ವರ್-ಸೋನಿಯಾ ಗಾಂಧಿ

ಬೆಂಗಳೂರು: ಮುಂಬರುವ ಸ್ಥಳೀಯ ಸಂಸ್ಥೆ, ಸಾರ್ವತ್ರಿಕ ಚುನಾಚಣೆಗಳನ್ನು ಎದುರಿಸಲು ಈಗಿನಿಂದಲೇ ಪಕ್ಷ ಸಂಘಟಎ ಮಾಡುವ ಅಗತ್ಯವಿದ್ದು, ಈ ಹಿನ್ನೆಲೆಯಲ್ಲಿ ಪಕ್ಷದಲ್ಲಿ ಎದ್ದಿರುವ ಗೊಂದಲವನ್ನು ಸರಿಪಡಿಸಲು ಹೈಕಮಾಂಡ್ ಆದಷ್ಟು ಬೇಗ ಕೆಪಿಸಿಸಿಗೆ ಅಧ್ಯಕ್ಷರನ್ನು ನೇಮಕ ಮಾಡುವಂತೆ ಹಿರಿಯ ಮುಖಂಡ ಡಾ.ಜಿ.ಪರಮೇಶ್ವರ್ ಒತ್ತಾಯಿಸಿದ್ದಾರೆ.

ಸದಾಶಿವನಗರ ನಿವಾಸದ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಆದಷ್ಟು ಬೇಗ ಪಕ್ಷಕ್ಕೆ ನೂತನ ಸಾರಥಿ ನೇಮಿಸಬೇಕಿದೆ. ಆದರೆ ಕೆಪಿಸಿಸಿ ಆಯ್ಕೆ ಗೊಂದಲ ಸಂಬಂಧ ತಾವು ಹೈಕಮಾಂಡ್‌ಗೆ ಯಾವುದೇ ಪತ್ರವನ್ನಾಗಲೀ ಈಮೇಲ್ ಆಗಲೀ ಮಾಡಿಲ್ಲ. ತಮ್ಮ ನಿವಾಸದಲ್ಲಿ ಹಿರಿಯ ನಾಯಕರೊಂದಿಗೆ ನಡೆದ ಸಭೆ ಬಗ್ಗೆ ಪ್ರಧಾನ ಕಾರ್ಯದರ್ಶಿಯವರಿಗೆ ಮಾಹಿತಿ ನೀಡಿದ್ದೆ. ಈ ಕುರಿತು ಹೈಕಮಾಂಡ್ ನಾಯಕರು ಸಭೆ ಕರೆದು ಚರ್ಚಿಸುತ್ತಾರೆ ಎಂದು ಭಾವಿಸಿದ್ದೆ. ಆದರೆ ಅದು ಆಗಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

'2013ರ ಮಾದರಿಯಲ್ಲಿ ಕಾಂಗ್ರೆಸ್ ಪುನರುತ್ಥಾನ ಮಾಡಬೇಕು. ಹೀಗಾಗಿ ಸಾಮಾಜಿಕ ನ್ಯಾಯ ಪರಿಗಣಿಸಿ ಅಧ್ಯಕ್ಷರನ್ನ ನೇಮಿಸಿ. ಕೆಪಿಸಿಸಿ ಕಾರ್ಯಾಧ್ಯಕ್ಷರ ನೇಮಕದ ಅವಶ್ಯಕತೆ ಸದ್ಯಕ್ಕಿಲ್ಲ. ಖರ್ಗೆ ಎಐಸಿಸಿಯ ಪ್ರಧಾನ ಕಾರ್ಯದರ್ಶಿಯಾಗಿದ್ದಾರೆ. ಖಂಡ್ರೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿ ಕೆಲಸ ಮಾಡಿದ್ದಾರೆ. ಎಸ್.ಆರ್.ಪಾಟೀಲ್ ಬೆಳಗಾವಿ ಕರ್ನಾಟಕ ಪ್ರತಿನಿಧಿಸುತ್ತಿದ್ದಾರೆ. ಹಿಂದುಳಿದ ವರ್ಗಕ್ಕೆ ಮಾಜಿ ಸಿಎಂ ಸಿದ್ದರಾಮಯ್ಯ ಇದ್ದಾರೆ. ಸಿದ್ದರಾಮಯ್ಯ ಮೈಸೂರು ಭಾಗವನ್ನು ಪ್ರತಿನಿಧಿಸುತ್ತಿದ್ದಾರೆ. ಡಿಕೆಶಿ ಅಧ್ಯಕ್ಷರಾದ್ರೆ ಬೆಂಗಳೂರು ವಿಭಾಗದವರಾಗುತ್ತಾರೆ. ಕೆಪಿಸಿಸಿಗೆ ಡಿ.ಕೆ ಶಿವಕುಮಾರ್  ಹಾಗೂ ಎಂ ಬಿ ಪಾಟೀಲ್ ಅವರ ಹೆಸರುಗಳು ಮಾಧ್ಯಮಗಳಲ್ಲಿ ಓಡಾಡುತ್ತಿರುವುದು ಪಕ್ಷದ ಹಿತ ದೃಷ್ಟಿಯಿಂದ ಒಳ್ಳೆಯದಲ್ಲ. ಪಕ್ಷದಲ್ಲಿ ಒಬ್ಬರೇ ಅಧ್ಯಕ್ಷರಿರಬೇಕು. ವಿಭಾಗವಾರು ನಾಲ್ಕು ಕಾರ್ಯಾಧ್ಯಕ್ಷರಿರುವುದಾಗಲೀ ಉಪಾಧ್ಯಕ್ಷರಿರುವುದಾಗಲಿ ಒಳ್ಳೆಯದಲ್ಲ‌. ಹೀಗಾದರೆ ಪಕ್ಷದಲ್ಲಿ ಗುಂಪುಗಾರಿಗೆ ಪ್ರಾರಂಭವಾಗುತ್ತದೆ ಎಂದು ಪರಮೇಶ್ವರ್ ಆತಂಕ ವ್ಯಕ್ತಪಡಿಸಿದರು.

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಬಗ್ಗೆ ಗೊಂದಲ ಇರುವುದಂತೂ ನಿಜ. ದಿನೇಶ್ ಗುಂಡೂರಾವ್ ಅವರು ರಾಜೀನಾಮೆ ನೀಡಿದ ಬಳಿಕ ಪಕ್ಷದ ಯಾವುದೇ ಕಾರ್ಯಕ್ರಮಕ್ಕೆ ಹೋಗದೆ ತಟಸ್ಥವಾಗಿಯೇ ಉಳಿದಿದ್ದಾರೆ. ಹೈಕಮಾಂಡ್ ಕೆಪಿಸಿಸಿಗೆ ಅಧ್ಯಕ್ಷರನ್ನು ನೇಮಕ ಮಾಡುವುದೇ ಆದರೆ ಆದಷ್ಟು ಬೇಗ ಮಾಡಿದರೆ ಒಳ್ಳೆಯದು ಎಂದು ಸಲಹೆ ನೀಡಿದರು. ಅಲ್ಲದೆ ಕಾರ್ಯಾಧ್ಯಕ್ಷರ ನೇಮಕದ ಬಗ್ಗೆ ಗೊಂದಲಬೇಡ. ಜಾತಿ ಆಧಾರದ ಮೇಲೆ ಕೆಪಿಸಿಸಿಗೆ ಅಧ್ಯಕ್ಷರ ಆಯ್ಕೆ ಬೇಡ ಎಂದು ಇಮೇಲ್ ಮೂಲಕ ಸೋನಿಯಾಗೆ ಮನವಿ ಮಾಡಿದ ಪರಮೇಶ್ವರ್ ಅವರು, ಮಲ್ಲಿಕಾರ್ಜುನ ಖರ್ಗೆ, ಬಿಕೆ ಹರಿಪ್ರಸಾದ್, ಕೆ.ಹೆಚ್.ಮುನಿಯಪ್ಪ ಸಲಹೆಯನ್ನು ಕೂಡ  ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com