ಬಿಜೆಪಿ, ಸಂಘ ಪರಿವಾರದಿಂದ ಸಂವಿಧಾನ ಉಳಿಸಲು ಕಾಂಗ್ರೆಸ್ ಶಪಥ

ಕೆಪಿಸಿಸಿ ಕಚೇರಿಯಲ್ಲಿ 71ನೇ ಗಣರಾಜ್ಯೋತ್ಸವವನ್ನು ಸಂವಿಧಾನದ ಪ್ರಸ್ತಾವನೆಯ ಪ್ರಮಾಣವಚನ ಸ್ವೀಕರಿಸುವ ಮೂಲಕ ಆಚರಿಸಲಾಯಿತು.
ಕೆಪಿಸಿಸಿ ಕಚೇರಿ ಆವರಣದಲ್ಲಿ ಗಣರಾಜ್ಯೋತ್ಸವ ಆಚರಣೆ
ಕೆಪಿಸಿಸಿ ಕಚೇರಿ ಆವರಣದಲ್ಲಿ ಗಣರಾಜ್ಯೋತ್ಸವ ಆಚರಣೆ

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 71ನೇ ಗಣರಾಜ್ಯೋತ್ಸವವನ್ನು ಸಂವಿಧಾನದ ಪ್ರಸ್ತಾವನೆಯ ಪ್ರಮಾಣವಚನ ಸ್ವೀಕರಿಸುವ ಮೂಲಕ ಆಚರಿಸಲಾಯಿತು.


ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್, ವಿಪಕ್ಷ ನಾಯಕ ಸಿದ್ದರಾಮಯ್ಯ, ಮಾಜಿ ಕೇಂದ್ರ ಸಚಿವರಾದ ಮಲ್ಲಿಕಾರ್ಜುನ ಖರ್ಗೆ,ವೀರಪ್ಪ ಮೊಯ್ಲಿ, ಎಸ್. ಆರ್. ಪಾಟೀಲ್ ಸೇರಿದಂತೆ ಹಲವು ಮುಖಂಡರು ಭಾಗವಹಿಸಿದ್ದರು.


ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ದಿನೇಶ್ ಗುಂಡೂರಾವ್, ಪ್ರಸಕ್ತ ರಾಜಕೀಯ ದುರುದ್ದೇಶಗಳಿಗಾಗಿ ಬಿಜೆಪಿ ದೇಶದ ಸಂವಿಧಾನದ ಅಂಗಸಂಸ್ಥೆಗಳನ್ನು ಬಳಸಿಕೊಳ್ಳುತ್ತಿವೆ. ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ತನ್ನ ಪಟ್ಟಭದ್ರ ಹಿತಾಸಕ್ತಿಗಾಗಿ ದುರುಪಯೋಗ ಮಾಡಿಕೊಳ್ಳುತ್ತಿದೆ. ಬಿಜೆಪಿ ವಿಚಾರಧಾರೆಗಳ ವಿರುದ್ಧ ಮಾತನಾಡಿದವರಿಗೆ ದೇಶ ವಿರೋಧಿಗಳು ಎಂದು ಪಟ್ಟ ಕಟ್ಟಲಾಗುತ್ತಿದೆ ಎಂದು ಕಿಡಿಕಾರಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com