ಕೆಪಿಸಿಸಿ ಅಧ್ಯಕ್ಷಗಾದಿಗೆ ಹೈಕಮಾಂಡ್ ಅಳೆದು ತೂಗಿ ಸ್ಪಷ್ಟ ನಿರ್ಧಾರಕ್ಕೆ ಬರಲಿದೆ: ಎಂ.ಬಿ.ಪಾಟೀಲ್

ಕೆಪಿಸಿಸಿ ಅಧ್ಯಕ್ಷ ಸ್ಥಾನ ಹೈಕಮಾಂಡ್ ಅಂಗಳದಲ್ಲಿದ್ದು, ಆದಷ್ಟು ಬೇಗ ಹೈಕಮಾಂಡ್ ಅಳೆದು ತೂಗಿ ಒಂದು ಸ್ಪಷ್ಟ ತೀರ್ಮಾನ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸವಿದೆ. ಒಂದು ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ತಮಗೆ ಕೊಟ್ಟರೆ ಅದನ್ನು ನಿಭಾಯಿಸುವ ಸಾಮರ್ಥ್ಯ ಇದೆ ಎಂದು ಶಾಸಕ ಎಂ.ಬಿ.ಪಾಟೀಲ್ ಹೇಳಿದ್ದಾರೆ.
ಕೆಪಿಸಿಸಿ ಅಧ್ಯಕ್ಷಗಾದಿಗೆ ಹೈಕಮಾಂಡ್ ಅಳೆದು ತೂಗಿ ಸ್ಪಷ್ಟ ನಿರ್ಧಾರಕ್ಕೆ ಬರಲಿದೆ: ಎಂ.ಬಿ.ಪಾಟೀಲ್

ವಿಜಯಪುರ: ಕೆಪಿಸಿಸಿ ಅಧ್ಯಕ್ಷ ಸ್ಥಾನ ಹೈಕಮಾಂಡ್ ಅಂಗಳದಲ್ಲಿದ್ದು, ಆದಷ್ಟು ಬೇಗ ಹೈಕಮಾಂಡ್ ಅಳೆದು ತೂಗಿ ಒಂದು ಸ್ಪಷ್ಟ ತೀರ್ಮಾನ ತೆಗೆದುಕೊಳ್ಳಲಿದೆ ಎಂಬ ವಿಶ್ವಾಸವಿದೆ. ಒಂದು ವೇಳೆ ಕೆಪಿಸಿಸಿ ಅಧ್ಯಕ್ಷ ಸ್ಥಾನ ತಮಗೆ ಕೊಟ್ಟರೆ ಅದನ್ನು ನಿಭಾಯಿಸುವ ಸಾಮರ್ಥ್ಯ ಇದೆ ಎಂದು ಶಾಸಕ ಎಂ.ಬಿ.ಪಾಟೀಲ್ ಹೇಳಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾವು ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕಾಗಿ ಲಾಬಿ ಮಾಡಿಲ್ಲ. ಪಕ್ಷದ ಹಿರಿಯ ಮುಖಂಡ ಮಧುಸೂಧನ ಮಿಸ್ತ್ರಿ ಬಂದಾಗಲು ಹಾಗೂ ಎಐಸಿಸಿ ನಾಯಕಿ ಸೋನಿಯಾಗಾಂಧಿಯವರನ್ನು ಭೇಟಿ ಮಾಡಿದಾಗಲೂ ಪಕ್ಷ ಅಧಿಕಾರಕ್ಕೆ ಬರಲು ಏನು ಮಾಡಬೇಕು ಎನ್ನುವುದನ್ನಷ್ಟೇ ಹೇಳಿದ್ದೇನೆಯೇ ಹೊರತು ಎಲ್ಲಿಯೂ ತಮ್ಮ ಬಗ್ಗೆ ಪ್ರತಿಪಾದಿಸಿಲ್ಲ. ಪಕ್ಷದ ಅಭಿವೃದ್ಧಿ ಲೆಕ್ಕಾಚಾರದಲ್ಲಿ ನಾಯಕರು ತಮ್ಮನ್ನು ಪರಿಗಣಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಸ್ಥಾನ ನೀಡುವಂತೆ ಸ್ವತಃ ತಾವೆಲ್ಲಿಯೂ ಕೇಳಿಲ್ಲ. ಪಕ್ಷ ಜವಾಬ್ದಾರಿ ಕೊಟ್ಟರೆ ಅದನ್ನು ನಿಭಾಯಿಸುವ ಶಕ್ತಿ ತಮ್ಮ ಬಳಿ ಇದೆ ಎಂದರು.


ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ದಕ್ಷಿಣದವರು. ಹೀಗಾಗಿ ಕೆಪಿಸಿಸಿ ಸ್ಥಾನ ಉತ್ತರ ಕರ್ನಾಟಕಕ್ಕೆ ಕೊಡಬೇಕು. ಉತ್ತರ ಕರ್ನಾಟಕದಲ್ಲಿ ಯಾವ ಜಾತಿಗೆ ಕೊಡಬೇಕು ಎಂಬ ನಿರ್ಣಯ ಪಕ್ಷದ ಹೈಕಮಾಂಡ್ ಗೆ ಬಿಟ್ಟ ವಿಚಾರ. ಹೈಕಮಾಂಡ್ ಎದುರು ಸಿದ್ದರಾಮಯ್ಯ ಎಂ.ಬಿ. ಪಾಟೀಲ್ ಹೆಸರು ಪ್ರಸ್ತಾಪ ಮಾಡಿದ್ದಾರೆ ಎಂಬುದು ತಮಗೆ ತಿಳಿದುಬಂದಿದೆಯಾದರೂ ಹೈಕಮಾಂಡ್ ಎದುರು ತಮ್ಮ ಪರ ಲಾಬಿ ಮಾಡುವಂತೆ ಹೇಳಿಲ್ಲ. ಕೆಲ ಲೆಕ್ಕಾಚಾರದ ಪ್ರಕಾರ ಉತ್ತರಕ್ಕೆ ಕೊಡಬೇಕು ಎಂಬ ಸಂದರ್ಭ ಬಂದಾಗ ಸಿದ್ದರಾಮಯ್ಯ ತಮ್ಮ ಹೆಸರನ್ನು ಪ್ರಸ್ತಾಪಿದ್ದಾರೆ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com