ಫ್ರೀ ಕಾಶ್ಮೀರ ಫಲಕ ಹಿಡಿದ ಯುವತಿ ಪರ ವಕಾಲತ್ತು ವಹಿಸುವುದಿಲ್ಲ- ಸಿದ್ದರಾಮಯ್ಯ ಸ್ಪಷ್ಟನೆ 

ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ವಿಶ್ವವಿದ್ಯಾನಿಲಯದಲ್ಲಿ ಫ್ರೀ ಕಾಶ್ಮೀರ' ನಾಮಫಲಕ ಹಿಡಿದು ಪ್ರತಿಭಟನೆ ನಡೆಸಿದ್ದ ನಳಿನಿ ಪರ ವಕಾಲತ್ತು ವಹಿಸುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಪಪಡಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮೈಸೂರಿನಲ್ಲಿ ವಿಶ್ವವಿದ್ಯಾನಿಲಯದಲ್ಲಿ ಫ್ರೀ ಕಾಶ್ಮೀರ' ನಾಮಫಲಕ ಹಿಡಿದು ಪ್ರತಿಭಟನೆ ನಡೆಸಿದ್ದ ನಳಿನಿ ಪರ ವಕಾಲತ್ತು ವಹಿಸುವುದಿಲ್ಲ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸ್ಪಷ್ಪಪಡಿಸಿದ್ದಾರೆ.

ನಳಿನಿ ಪರ ಬ್ಯಾಟಿಂಗ್​ ನಡೆಸುವ ಬದಲು, ಅವಳ ಪರ ವಕಾಲತ್ತು ವಹಿಸುವಂತೆ ಮೈಸೂರಿನ ವಕೀಲರ ತಂಡ ಸಿದ್ದರಾಮಯ್ಯ ಅವರಿಗೆ ಬಹಿರಂಗ ಸವಾಲ್​ ಹಾಕಿತ್ತು. ವಕೀಲರ ಸವಾಲಿನ ಬೆನ್ನಲ್ಲೇ ಸಿದ್ದರಾಮಯ್ಯ ಮೈಸೂರು ಬಾರ್​ ಕೌನ್ಸಿಲ್​ನಲ್ಲಿ ತಮ್ಮ ಸದಸ್ಯತ್ವ ನವೀಕರಣಕ್ಕೆ ಮುಂದಾಗಿದ್ದರು.ಈ ಹಿನ್ನೆಲೆ ಅವರು ಮತ್ತೆ ವಕೀಲಿ ವೃತ್ತಿ ಆರಂಭಿಸಲಿದ್ದಾರೆ ಎಂಬ ಸುದ್ದಿ ಬಗ್ಗೆ ಸ್ವತಃ ಸಿದ್ದರಾಮಯ್ಯ ಸ್ವಷ್ಟೀಕರಣ ನೀಡಿದ್ದಾರೆ.

ಮೈಸೂರಿನಲ್ಲಿ 'ಫ್ರೀ ಕಾಶ್ಮೀರ' ಫಲಕ ಹಿಡಿದಿದ್ದ ಯುವತಿಯ ಪರ ನಾನು ವಕಾಲತ್ತು ವಹಿಸುತ್ತಿಲ್ಲ.ನನ್ನ ಲೈಸೆನ್ಸ್‌ ಅನ್ನು ಹಿಂದೆ ಅಮಾನತು ಮಾಡಿದ್ದರು. ಈ ಅಮಾನತು ತೆಗೆಯುವಂತೆ ಅರ್ಜಿ ಸಲ್ಲಿಸಿದ್ದೇನೆ. ಯುವತಿಯ ಪರ ಯಾರೇ ವಕಾಲತ್ತು ವಹಿಸಿದರೂ ಅವರಿಗೆ ಬೆಂಬಲ ನೀಡುತ್ತೇನೆ. ಈ ಬಗ್ಗೆ ಗೊಂದಲ ಬೇಡ ಎಂದು ಸಿದ್ದರಾಮಯ್ಯ ತಮ್ಮ ಟ್ವೀಟರ್ ಖಾತೆಯಲ್ಲಿ  ಸ್ಪಷ್ಟಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com