ಬಜೆಟ್ ಅಧಿವೇಶನ ಸಂದರ್ಭ ಸಿಎಎ ವಿರುದ್ಧ ನಿರ್ಣಯ ಮಂಡಿಸಲು ಚಿಂತನೆ- ಸಿದ್ದರಾಮಯ್ಯ 

ಬಜೆಟ್ ಅಧಿವೇಶನ ಸಂದರ್ಭದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರ್ಣಯ ಮಂಡಿಸಲು ಕಾಂಗ್ರೆಸ್ ಪಕ್ಷ ಚಿಂತನೆ ನಡೆಸಿರುವುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ
ಸಿದ್ದರಾಮಯ್ಯ
ಸಿದ್ದರಾಮಯ್ಯ

ಹುಬ್ಬಳ್ಳಿ: ಬಜೆಟ್ ಅಧಿವೇಶನ ಸಂದರ್ಭದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ನಿರ್ಣಯ ಮಂಡಿಸಲು ಕಾಂಗ್ರೆಸ್ ಪಕ್ಷ ಚಿಂತನೆ ನಡೆಸಿರುವುದಾಗಿ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ

ಪ್ರತಿಪಕ್ಷಗಳು ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಸಿಎಎ ವಿರುದ್ಧ ನಿರ್ಣಯ ಅಂಗೀಕರಿಸಲಾಗಿದೆ. ಕೇರಳದಲ್ಲಿ ಎಡ ಸರ್ಕಾರ, ಪಂಜಾಬ್ ನಲ್ಲಿ ಕಾಂಗ್ರೆಸ್ ಸರ್ಕಾರ ನಿರ್ಣಯ ಕೈಗೊಂಡಿವೆ. ಕರ್ನಾಟಕದಲ್ಲಿ ಕಾಂಗ್ರೆಸ್ ಪ್ರತಿಪಕ್ಷ ಸ್ಥಾನದಲ್ಲಿದ್ದು, ನಿರ್ಣಯ ಕೈಗೊಳ್ಳಲು ಚಿಂತನೆ ನಡೆಸಲಾಗುವುದು ಎಂದು ಸುದ್ದಿಗಾರರಿಗೆ ತಿಳಿಸಿದರು.

ಸಿಎಎ ವಿರುದ್ಧದ ಪ್ರತಿಭಟನೆಗೆ ಪಿಎಫ್ ಐಗೆ ಹಣಕಾಸು ಪೂರೈಕೆ ಆರೋಪಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಆದಾಯ ತೆರಿಗೆ ಇಲಾಖೆ ಹಾಗೂ ಇಡಿ ಈ ಬಗ್ಗೆ ವಿಚಾರಣೆ ನಡೆಸಲಿದೆ. ಒಂದು ವೇಳೆ ವಿದೇಶಿ ರಾಷ್ಟ್ರಗಳಿಂದ ಹಣಕಾಸು ಪೂರೈಕೆ ಆಗಿದ್ದಲ್ಲಿ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದರು. 

ಹಿರಿಯ ಕಾಂಗ್ರೆಸ್ ನಾಯಕ ಮಲ್ಲಿಕಾರ್ಜುನ ಖರ್ಗೆ ಜೊತೆಗಿನ ಭೇಟಿ ಸಾಂಧರ್ಬಿಕವಾದದ್ದು, ಹೈಕಮಾಂಡ್ ಸದ್ಯದಲ್ಲಿಯೇ ಕೆಪಿಸಿಸಿ ಅಧ್ಯಕ್ಷರನ್ನು ನೇಮಕ ಮಾಡಲಿದೆ ಎಂದು ಹೇಳಿದರು. 

ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಬಿಜೆಪಿ ಪಕ್ಷದೊಳಗೆ ಸ್ವಾತಂತ್ರ್ಯ ಇಲ್ಲದಂತಾಗಿದೆ. ಕ್ಯಾಬಿನೆಟ್ ವಿಸ್ತರಣೆ ಸಂಬಂಧ ಮುಖ್ಯಮಂತ್ರಿ ನಿರ್ಧಾರ ಕೈಗೊಳ್ಳಲು ಹೈಕಮಾಂಡ್ ಬಿಟ್ಟಿಲ್ಲ ಎಂದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com