'ನಾನು ಕೆಪಿಸಿಸಿ ಅಧ್ಯಕ್ಷ ಹುದ್ದೆ ಆಕಾಂಕ್ಷಿಯಲ್ಲ: ಯಾರೂ ಅಡ್ಡಗಾಲು ಹಾಕುತ್ತಿಲ್ಲ'

ಡಿ.ಕೆ ಶಿವಕುಮಾರ್
ಡಿ.ಕೆ ಶಿವಕುಮಾರ್

ಕಲಬುರಗಿ:  ನಾನು ಕೆಪಿಸಿಸಿ ಹುದ್ದೆ ಆಕಾಂಕ್ಷಿಯೇ ಇಲ್ಲದಿರುವಾಗ ನನಗೆ ಬೇರೆಯವರು ಅಡ್ಡಗಾಲು ಹಾಕುವ ಪ್ರಶ್ನೆಯೇ ಬರುವುದಿಲ್ಲ ಎಂದು ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅಭಿಪ್ರಾಯಪಟ್ಟಿದ್ದಾರೆ.

ಕೆಪಿಸಿಸಿ ಹುದ್ದೆಗೆ ನಾನು ಅರ್ಜಿಯನ್ನೇ ಹಾಕಿಲ್ಲ. ಹೀಗಿರಬೇಕಾದರೆ ಕೆಪಿಸಿಸಿ ಗಾದಿಗೆ ಲಾಬಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಕೆಪಿಸಿಸಿ ಅಧ್ಯಕ್ಷರ ಹುದ್ದೆ ಖಾಲಿಯೇ ಇಲ್ಲದಿರುವಾಗ, ಹೊಸ ಅಧ್ಯಕ್ಷರ ಆಯ್ಕೆಯ ವಿಳಂಬದ ಪ್ರಶ್ನೆಯೇ ಇಲ್ಲ. ಸದ್ಯ ದಿನೇಶ್ ಗುಂಡೂರಾವ್ ಅವರೇ ಕೆಪಿಸಿಸಿ ಅಧ್ಯಕ್ಷರಾಗಿದ್ದಾರೆ. ಹಾಗೆಯೇ ಸಿದ್ಧರಾಮಯ್ಯ ಅವರು ವಿರೋಧ ಪಕ್ಷದ ನಾಯಕರಾಗಿದ್ದು, ಅವರಿಬ್ಬರ ಕೆಳಗೆ ನಾವೆಲ್ಲ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ ಎಂದು ಡಿಕೆಶಿ ಹೇಳಿದರು.

ಡಿ.ಕೆ. ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾಗಲು ಕೆಲ ನಾಯಕರು ಅಡ್ಡಗಾಲು ಹಾಕುತ್ತಿದ್ದಾರೆ ಎಂಬುದರ ಕುರಿತು ಪ್ರತಿಕ್ರಿಯಿಸಿದ ಶಿವಕುಮಾರ್, ನಾನು ಕೆಪಿಸಿಸಿ ಅಧ್ಯಕ್ಷ ಗಾದಿಯನ್ನೇ ಕೇಳಿಲ್ಲ ಕೇಳಿದಾಗ ಮಾತ್ರ ಯಾರಾದರೂ ಅಡ್ಡಗಾಲು ಹಾಕೋದು ಎಂದು ಡಿಕೆಶಿ ಪ್ರಶ್ನಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com