ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ. ಶಿವಕುಮಾರ್ ಅಧಿಕಾರ ಸ್ವೀಕಾರ; ಒಗ್ಗಟ್ಟಿನ ಮಂತ್ರ ಘೋಷಣೆ

ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿಯ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್​ ಗುರುವಾರ ಪದಗ್ರಹಣ ಸ್ವೀಕರಿಸಿದ್ದಾರೆ. ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಡಿ ಕೆ ಶಿವಕುಮಾರ್ ಅವರಿಗೆ ಅಧ್ಯಕ್ಷ ಸ್ಥಾನದ ಅಧಿಕಾರ ಹಸ್ತಾಂತರಿಸುವ ಮೂಲಕ ಪದಗ್ರಹಣ ಸಮಾರಂಭ ನಡೆಯುತ್ತಿದೆ.

Published: 02nd July 2020 12:15 PM  |   Last Updated: 02nd July 2020 06:55 PM   |  A+A-


Dinesh Gundu Rao handover congress flag to D K Shivakumar

ಡಿ ಕೆ ಶಿವಕುಮಾರ್ ಅವರಿಗೆ ಕಾಂಗ್ರೆಸ್ ಧ್ವಜವನ್ನು ಹಸ್ತಾಂತರಿಸಿದ ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್

Posted By : Sumana Upadhyaya
Source : Online Desk

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ.ಶಿವಕುಮಾರ್ ‘ಪ್ರತಿಜ್ಞಾ ದಿನ’ ವಿಶೇಷ ಕಾರ್ಯಕ್ರಮದ ಮೂಲಕ ಪದಗ್ರಹಣ ಸ್ವೀಕರಿಸಿದರು. 

ನಿಕಟಪೂರ್ವ ಅಧ್ಯಕ್ಷ ದಿನೇಶ್ ಗುಂಡೂರಾವ್ ಕಾಂಗ್ರೆಸ್ ಧ್ವಜವನ್ನು ಶಿವಕುಮಾರ್ ಗೆ ಹಸ್ತಾಂತರ ಮಾಡಿದರು. ಕಾರ್ಯಾದ್ಯಕ್ಷರಾದ ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ ಹಾಗೂ ಸಲೀಂ ಅಹಮದ್ ಸಹ ಪದಗ್ರಹಣ ಮಾಡಿದರು.

ಇದೇ ವೇಳೆ ರಾಜ್ಯದ ಗ್ರಾಮ ಪಂಚಾಯ್ತಿ, ನಗರ ಸಭೆ ಹಾಗೂ ಪುರಸಭೆ ಸೇರಿದಂತೆ ಸುಮಾರು 10 ಸಾವಿರಕ್ಕೂ ಅಧಿಕ ಸ್ಥಳಗಳಲ್ಲಿ ವಿಡಿಯೋ ಕಾನ್ಫರೆನ್ಸ್ ಮೂಲಕ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರತಿಜ್ಞಾ ದಿನ ಕಾರ್ಯಕ್ರಮದಲ್ಲಿ ಭಾಗಿ, ಪ್ರತಿಜ್ಞೆ ಸ್ವೀಕರಿಸಿದರು.

ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಜ್ಯೋತಿ ಬೆಳಗಿಸುವ ಮೂಲಕ ಉದ್ಘಾಟನೆ ನೆರವೇರಿಸಿದರು. ಸಂಗೀತ ನಿರ್ದೇಶಕ ಸಾಧುಕೋಕಿಲ ಸಂಗೀತ ಸುಧೆಯೊಂದಿಗೆ ಜ್ಯೋತಿ ಬೆಳಗಿ ಕಾರ್ಯಕ್ರಮಕ್ಕೆ ರಂಗು ತಂದಿತು. ಕೆಪಿಸಿಸಿ ಅಧ್ಯಕ್ಷರ ಪ್ರಮಾಣ ವಚನ ಕಾರ್ಯಕ್ರಮದ ಆರಂಭದಲ್ಲಿ ಹುತಾತ್ಮ ಯೋಧರಿಗೆ ಗೌರವ ನಮನ ಸಲ್ಲಿಸಲಾಯಿತು. 

ಸೇವಾದಳ ಘಟಕದಿಂದ ವಂದೇ ಮಾತರಂ ಗೀತೆ ಮೊಳಗಿದ್ದು, ಕೆಪಿಸಿಸಿ ವಿವಿಧ ಘಟಕಗಳು, ಮುಖಂಡರಿಂದ ಜ್ಯೋತಿ ಬೆಳಗಿಸಲಾಯಿತು. ವೇದಿಕೆಯಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ, ರಾಜ್ಯಸಭಾ ಸದಸ್ಯ ಮಲ್ಲಿಕಾರ್ಜುನ ಖರ್ಗೆ ವಿಧಾನಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ರಹ್ಮಾನ್ ಖಾನ್ ಮತ್ತಿತರರು ಉಪಸ್ಥಿತರಿದ್ದರು.

ಉದ್ಘಾಟನಾ ಭಾಷಣದಲ್ಲಿ ಪದಗ್ರಹಣ ಕಾರ್ಯಕ್ರಮ ಕುರಿತು ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಸಂದೇಶವನ್ನು ವೇಣುಗೋಪಾಲ್ ವಾಚಿಸಿದರು. “ಎನ್ ಎಸ್ ಯು ಐ ನಿಂದಲೂ ನಾನು ಡಿಕೆ ಶಿವಕುಮಾರ್ ರನ್ನುಬಲ್ಲೆ. ತಳ ಮಟ್ಟದಿಂದ ಬೆಳೆದು ಬಂದು ಇಂದು ಈ ಮಟ್ಟಕ್ಕೇರಿದ್ದಾರೆ. ಸವಾಲುಗಳು ಅವಕಾಶಗಳನ್ನು ಸೃಷ್ಟಿ ಮಾಡುತ್ತವೆ. ಅಂತಹ ಅವಕಾಶಗಳನ್ನು ಶಿವಕುಮಾರ್ ಚೆನ್ನಾಗಿ ಬಳಸಿಕೊಂಡಿದ್ದಾರೆ. ಇಂದು ಬಂಡೆ ತರಹ ಸವಾಲುಗಳನ್ನೆಲ್ಲ ಗೆದ್ದು ನಮ್ಮ ಮುಂದೆ ನಿಂತಿದ್ದಾರೆ ಎಂದರು.
ಗುಜರಾತ್ ಕಾಂಗ್ರೆಸ್ ಶಾಸಕರ ರಕ್ಷಣೆ ವಿಚಾರದಲ್ಲಿ ಡಿ.ಕೆ ಶಿವಕುಮಾರ್ ನಿರ್ವಹಿಸಿದ ಸೇವೆ ಎದುರಿಸಿದ್ದ ಸಂಕಷ್ಟಗಳನ್ನು ವೇಣುಗೋಪಾಲ್ ಭಾಷಣದಲ್ಲಿ ಸ್ಮರಿಸಿದರು.

ಕರ್ನಾಟಕದಲ್ಲಿ ಪಕ್ಷಕ್ಕೆ ಒಳ್ಳೆಯ ತಳಹದಿ ಇದೆ. ಒಳ್ಳೆಯ ಪಥದಲ್ಲಿ ಡಿ.ಕೆ.ಶಿವಕುಮಾರ್ ಪಕ್ಷವನ್ನು ಮುನ್ನಡೆಸಿಕೊಂಡು ಹೋಗಲಿದ್ದಾರೆ. ಕೋವಿಡ್ 19, ಆರ್ಥಿಕ ಪರಿಸ್ಥಿತಿಯ ಸಂಕಷ್ಟದ ನಡುವೆ ರಾಷ್ಟ್ರದ ಜನ ತೊಂದರೆಗೆ ಒಳಗಾಗಿದ್ದಾರೆ. ಇಂತಹ ಸಂದರ್ಭದಲ್ಲಿ ಸಾಮಾಜಿಕ ಅಂತರ ಕಾಯ್ದುಕೊಂಡು ಕಾರ್ಯಕ್ರಮ ಆಯೋಜಿಸಿರುವ ಡಿಕೆ ಶಿವಕುಮಾರ್ ರನ್ನು ಅಭಿನಂದಿಸುವುದಾಗಿ ವೇಣುಗೋಪಾಲ್ ಹೇಳಿದರು.

Preceding the 'Pratijna Dina' event hoisted the national flag at KPCC office in Bengaluru. Jai Hind.#PratijnaDina pic.twitter.com/zNEVq7TEK9

ಕಾಂಗ್ರೆಸ್ ಪ್ರತಿಜ್ಞೆ ಬೋಧನೆ ಬಳಿಕ ಮಾತನಾಡಿದ ಡಿ.ಕೆ.ಶಿವಕುಮಾರ್, ತಮಗೆ ಜಾತಿ, ಮತ, ಧರ್ಮದಲ್ಲಿ ನಂಬಿಕೆ ಇಲ್ಲ. ನನಗೆ ಕಾಂಗ್ರೆಸ್ ಪಕ್ಷವೇ ಧರ್ಮ, ಕಾಂಗ್ರೆಸ್ ಪಕ್ಷವೇ ಜಾತಿ, ಕಾಂಗ್ರೆಸ್ ಗುಂಪಿನ ಮೇಲೆ ಮಾತ್ರ ನಂಬಿಕೆ ಇದೆ. ವ್ಯಕ್ತಿ ಪೂಜೆ ಬಿಟ್ಟು ಪಕ್ಷ ಪೂಜೆ ಮಾಡೋಣ, ನಮಗೆ ಯಾವುದೇ ಹಿಂಬಾಲಕರು ಬೇಡ. ಪಕ್ಷವನ್ನು ಸಮೂಹ ನೆಲೆಯಿಂದ ಕೇಡರ್ ಆಧಾರಿತ ಪಕ್ಷವನ್ನಾಗಿ ಮಾಡೋಣ ಎಂದು ಹೇಳಿದರು.

Stay up to date on all the latest ರಾಜಕೀಯ news
Poll
Covid-_Vaccine1

ರಾಜಕಾರಣಿಗಳಿಗೆ ಮೊದಲು ಕೋವಿಡ್-19 ಲಸಿಕೆ ನೀಡಬೇಕೇ?


Result
ಇಲ್ಲ, ಸಾಮಾನ್ಯ ಜನರಿಗೆ ಮೊದಲು
ಹೌದು, ಅವರು ನಮ್ಮ ನಾಯಕರು
flipboard facebook twitter whatsapp