ಡಿಕೆಶಿ ಜೊತೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ: ಸತೀಶ್ ಜಾರಕಿಹೊಳಿ
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿರುವುದಕ್ಕೆ ಯಾವುದೇ ವಿಶೇಷತೆ ಇಲ್ಲ. ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ಹೇಳಿದ್ದಾರೆ.
Published: 03rd July 2020 07:55 PM | Last Updated: 03rd July 2020 07:55 PM | A+A A-

ಸತೀಶ್ ಜಾರಕಿಹೊಳಿ
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಅವರ ಮನೆಯಲ್ಲಿ ಭೇಟಿ ಮಾಡಿರುವುದಕ್ಕೆ ಯಾವುದೇ ವಿಶೇಷತೆ ಇಲ್ಲ. ಅವರೊಂದಿಗೆ ಯಾವುದೇ ಭಿನ್ನಾಭಿಪ್ರಾಯವೂ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಅವರು ಶುಕ್ರವಾರ ಹೇಳಿದ್ದಾರೆ.
ಇಂದು ಸದಾಶಿವ ನಗರದ ಪಕ್ಷದ ಅಧ್ಯಕ್ಷರ ಮನೆಗೆ ತೆರಳಿ ಮಾತುಕತೆ ನಡೆಸಿದ್ದ ಸತೀಶ್ ಜಾರಕಿಹೊಳಿ, ಡಿ.ಕೆ.ಶಿವಕುಮಾರ್ ಅವರನ್ನು ಭೇಟಿ ಮಾಡಿರುವುದು ಅಚ್ಚರಿಯ ಭೇಟಿಯೇನು ಅಲ್ಲ. ಅವರು ನಮ್ಮ ಅಧ್ಯಕ್ಷರು, ನಾವು ಸೆಕೆಂಡ್ ಲೆಫ್ಟಿನೆಂಟ್, ಪಕ್ಷ ಸಂಘಟನೆ ಬಗ್ಗೆ ಮಾತುಕತೆ ನಡೆಸಿದ್ದೇವೆ ಎಂದರು.
ಇದುವರೆಗೂ ಅವರ ಮನೆಗೆ ಭೇಟಿ ನೀಡದಿರಬಹುದು, ಆದರೆ, ಕಾಂಗ್ರೆಸ್ ಕಚೇರಿಯಲ್ಲಿ ಭೇಟಿಯಾಗಿ ಸಾಕಷ್ಟು ಭಾರಿ ಸಭೆಗಳನ್ನೂ ನಡೆಸಿದ್ದೇವೆ ಎಂದು ಸ್ಪಷ್ಟನೆ ನೀಡಿದರು.
ತಾವು ಈಗಾಗಲೇ ಆರು ಜಿಲ್ಲೆ ಪ್ರವಾಸ ಮುಗಿಸಿದ್ದೇನೆ. ಬೇರೆ ಬೇರೆ ಭಾಗಗಳಿಗೂ ಹೋಗುತ್ತೇನೆ. ಬೇರೆ ಪಕ್ಷದ ನಾಯಕರನ್ನು ವಾಪಸ್ ಕರೆತರುವ ವಿಚಾರದಲ್ಲಿ ಸಮಿತಿ ರಚನೆಯಾಗಿದೆ. ಆ ಸಮಿತಿ ಪ್ರತಿ ಜಿಲ್ಲೆಗೆ ಭೇಟಿ ನೀಡಲಿದೆ. ಆ ಸಮಿತಿ ವರದಿ ನೀಡಿದ ನಂತರ ನಾವು ಮುಂದಿನ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದರು.