ಕೋವಿಡ್ ಪರಿಕರಗಳ ಖರೀದಿಯಲ್ಲಿ ಅಕ್ರಮ: ತನಿಖೆಗೆ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ ಖರ್ಗೆ ಒತ್ತಾಯ
ವೈಯಕ್ತಿಕ ರಕ್ಷಣಾ ಸಲಕರಣೆಗಳು (ಪಿಪಿಇ) ಮತ್ತು ಇತರ ಕೋವಿಡ್ ಪರಿಕರಗಳನ್ನು ಖರೀದಿಸುವಲ್ಲಿ ಅಕ್ರಮಗಳು ನಡೆದಿವೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ಮಲ್ಲಿಕರ್ಜುನ್ ಖರ್ಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ
Published: 06th July 2020 07:34 AM | Last Updated: 06th July 2020 12:37 PM | A+A A-

ಮಲ್ಲಿಕಾರ್ಜುನ್ ಖರ್ಗೆ
ಬೆಂಗಳೂರು: ವೈಯಕ್ತಿಕ ರಕ್ಷಣಾ ಸಲಕರಣೆಗಳು (ಪಿಪಿಇ) ಮತ್ತು ಇತರ ಕೋವಿಡ್ ಪರಿಕರಗಳನ್ನು ಖರೀದಿಸುವಲ್ಲಿ ಅಕ್ರಮಗಳು ನಡೆದಿವೆ ಎಂದು ಕಾಂಗ್ರೆಸ್ ಹಿರಿಯ ಮುಖಂಡ ಮತ್ತು ರಾಜ್ಯಸಭಾ ಸದಸ್ಯ ಮಲ್ಲಿಕರ್ಜುನ್ ಖರ್ಗೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಎಚ್ ಕೆ ಪಾಟೀಲ್ ನೇತೃತ್ವದ ಸಾರ್ವಜನಿಕ ಲೆಕ್ಕಪತ್ರ ಸಮಿತಿಯು ಈ ವಿಷಯವನ್ನು ಗಮನಿಸಿದೆ ಎಂದು ಹೇಳಿರುವ ಖರ್ಗೆ ಸರ್ಕಾರವು ಕೊರೋನಾವೈರಸ್ ವಿರುದ್ಧ ಹೋರಾಡಲು ಪಿಪಿಇ ಹಾಗೂ ಇತರೆ ಸಲಕರಣೆ ಖರೀದಿ ಬಗ್ಗೆ ತನಿಖೆ ಆಗಬೇಕು ಎಂದಿದ್ದಾರೆ.
ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಕೋವಿಡ್ ಸಲಕರಣಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ ಬಳಿಕ ಖರ್ಗೆಈ ಆರೋಪ ಮಾಡುದ್ದಾರೆ. ಈ ಹಿಂದೆ ಸಿದ್ದರಾಮಯ್ಯ ಕೋವಿಡ್ ಸಲಕರಣೆ ಖರೀದಿ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕೆಂದು ಒತ್ತಾಯಿಸಿದ್ದರು.
ವೆಂಟಿಲೇಟರ್‌ಗಳಂತಹ ಕೆಲವು ಉಪಕರಣಗಳಿಗೆ ಸರ್ಕಾರ ಎರಡು ಮೂರು ಪಟ್ಟು ಹೆಚ್ಚು ಹಣವನ್ನು ಪಾವತಿಸಿದೆ ಎಂದು ಅವರು ಆರೋಪಿಸಿದ್ದರು,
ಸಾರ್ವಜನಿಕ ಖಾತೆಗಳ ಸಮಿತಿಯು ಕಳೆದ ಕೆಲವು ಸಭೆಗಳಲ್ಲಿ ಈ ವಿಷಯವನ್ನು ಎತ್ತಿದೆ ಮತ್ತು ಮಂಗಳವಾರ ಸಮಿತಿ ಸಭೆ ಸೇರಿದಾಗಮತ್ತೆ ಈ ವಿಷಯ ಪ್ರಸ್ತಾಪವಾಗಲಿದೆ. ಖರೀದಿಗೆ ಸಂಬಂಧಿಸಿದ ಪ್ರಶ್ನೆಗಳಿಗೆ ಆರೋಗ್ಯ ಅಧಿಕಾರಿಗಳು ಉತ್ತರಿಸಬೇಕಾಗುತ್ತದೆ. ಕಳೆದ ಸಭೆಯಲ್ಲಿ ಆರೋಗ್ಯ ಇಲಾಖೆ ಅವರು ಜುಲೈ 6 ರಂದು ವಿವರಗಳನ್ನು ಸಲ್ಲಿಸುವುದಾಗಿ ಭರವಸೆ ನೀಡಿದ್ದರು.
ಇದೇ ವೇಳೆ ಭಾರತ-ಚೀನಾ ಗಡಿತಂಟೆ ಬಗ್ಗೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ ಭಾರತ-ಚೀನಾ ಗಡಿ ಬೆಳವಣಿಗೆಗಳಲ್ಲಿ ಪಾರದರ್ಶಕತೆಯ ಅಗತ್ಯತೆಯ ಬಗ್ಗೆ ಒತ್ತಿ ಹೇಳಿದರು ಮತ್ತು ನಾವು ನಮ್ಮ ಗಡಿಗಳನ್ನು ಕಾಪಾಡಿಕೊಳ್ಳಬೇಕು ಮತ್ತು ಒಂದು ಇಂಚು ಸಹ ಬಿಟ್ಟುಕೊಡುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು ಎಂದರು.