ರಮೇಶ್ ಜಾರಕಿಹೊಳಿ, ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ಮತ್ತೆ ಕುಕ್ಕರ್ ಜಟಾಪಟಿ!

ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ತಿಕ್ಕಾಟ ಈಗ ಮತ್ತಷ್ಟು ತಾರಕಕ್ಕೇರಿದೆ. 
ರಮೇಶ್ ಜಾರಕಿಹೊಳಿ
ರಮೇಶ್ ಜಾರಕಿಹೊಳಿ

ಬೆಳಗಾವಿ: ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಮತ್ತು ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ನಡುವೆ ತಿಕ್ಕಾಟ ಈಗ ಮತ್ತಷ್ಟು ತಾರಕಕ್ಕೇರಿದೆ. 

ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದಲ್ಲಿ ಕುಕ್ಕರ್ ಹಂಚಿದ್ದು ನನ್ನ ಹಣದಿಂದ. ಅದು ಅಕೀ ದುಡ್ಡಲ್ಲ ಎಂದು ಜಲ ಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಅವರು ಪರೋಕ್ಷವಾಗಿ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಹರಿಹಾಯ್ದಿದ್ದಾರೆ. 

ತಾಲೂಕಿನ ಹಿಂಡಲ ಗ್ರಾಮದಲ್ಲಿ ಮಂಗಳವಾರ ಬಿಜೆಪಿ ಗ್ರಾಮೀಣ ಕಾರ್ಯಾಲಯ ಉದ್ಘಾಟಿಸಿ ಮಾತನಾಡಿದ ಅವರು, ಲಕ್ಷ್ಮೀ ಹೆಬ್ಬಾಳ್ಕರ್ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ದುಡ್ಡು ಹಂಚುತ್ತಿರುವುದು ನನ್ನ ಗಮನಕ್ಕೆ ಬಂದಿದ್ದು, ಅವರಿಗಿಂತ ಡಬಲ್ ದುಡ್ಡು ಖರ್ಚು ಮಾಡಲು ನಾನು ರೆಡಿ ಎಂದು ಹೇಳಿದ್ದಾರೆ. 

ಈ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಶಾಸಕಿ ಲಕ್ಷ್ಮೀ ಹೆಬ್ಬಾಳ್ಕರ್, ರಮೇಶ್ ಜಾರಕಿಹೊಳಿ ಕುಕ್ಕರ್ ಹಂಚಿರುವ ಬಗ್ಗೆ ಲೆಕ್ಕ ಕೊಡಲಿ ಎಂದು ಸವಾಲು ಹಾಕಿದ್ದಾರೆ. 

ಸಾರ್ವಜನಿಕವಾಗಿ ನನ್ನ ವಿರುದ್ಧ ಮಾನಹಾನಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಚುನಾವಣಾ ಆಯೋಗದ ಬಳಿ ಜಾರಕಿಹೊಳಿ ವಿರುದ್ಧ ದೂರು ದಾಖಲಿಸುತ್ತೇನೆ. ಹರ್ಷ ಶುಗರ್ ಕಾರ್ಖಾನೆ ಉದ್ಘಾಟನೆ ವೇಳೆ ನಾನು ಜನರಿಗೆ ಕುಕ್ಕರ್ ವಿತರಿಸಿದ್ದೆ. ಚುನಾವಣಾ ಸಂದರ್ಭದಲ್ಲಿ ಅಲ್ಲ. ಕಾನೂನಾತ್ಮಕವಾಗಿ ತೆರಿಗೆಯನ್ನೂ ಕಟ್ಟುವುದರ ಜೊತೆಗೆ ನಾವು ಕುಕ್ಕರ್ ಖರೀದಿ ಮಾಡಿದ್ದೇವೆ. ನನ್ನ ಬಳಿ ಈ ಕುರಿತು ದಾಖಲೆಗಳಿವೆ. ಹಣ ನೀಡಿದ್ದೆ ಎಂದು ಹೇಳುತ್ತಿರುವ ಜಾರಕಿಹೊಳಿಯವರು ದಾಖಲೆಗಳನ್ನು ತೋರಿಸಲಿ ಎಂದು ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com