ಜಾತ್ಯಾತೀತತೆ, ರಾಷ್ಟ್ರೀಯತೆ ತತ್ವಗಳ ಮೇಲೆ ಬಿಜೆಪಿಗೆ ನಂಬಿಕೆಯಿಲ್ಲ: ಸಿದ್ದರಾಮಯ್ಯ

ಸಿಬಿಎಸ್ಇ ಪಠ್ಯಕ್ರಮದಲ್ಲಿ ಪೌರತ್ವ, ಜಾತ್ಯತೀತತೆ, ರಾಷ್ಟ್ರೀಯತೆ ಮತ್ತು ಫೆಡರಲಿಸಂ ಕುರಿತ ಪಾಠಗಳನ್ನು ಕೈಬಿಟ್ಟಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಕ್ರಮವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಬೆಂಗಳೂರು: ಸಿಬಿಎಸ್ಇ ಪಠ್ಯಕ್ರಮದಲ್ಲಿ ಪೌರತ್ವ, ಜಾತ್ಯತೀತತೆ, ರಾಷ್ಟ್ರೀಯತೆ ಮತ್ತು ಫೆಡರಲಿಸಂ ಕುರಿತ ಪಾಠಗಳನ್ನು ಕೈಬಿಟ್ಟಿರುವ ಕೇಂದ್ರ ಮಾನವ ಸಂಪನ್ಮೂಲ ಸಚಿವಾಲಯ ಕ್ರಮವನ್ನು ವಿಧಾನಸಭೆ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಎಲ್ಲಾ ಅಂಶಗಳು ಭಾರತೀಯ ಪ್ರಜಾಪ್ರಭುತ್ವದ ಆಧಾರಸ್ತಂಭಗಳಾಗಿದ್ದು ಇವುಗಳನ್ನು ಪಠ್ಯಕ್ರಮದಿಂದ ಕೈಬಿಟ್ಟರೆ ಇವುಗಳನ್ನು ಅರ್ಥಮಾಡಿಕೊಳ್ಳುವುದರಿಂದ ಇಂದಿನ ಮಕ್ಕಳನ್ನು ವಂಚಿತರನ್ನಾಗಿ ಮಾಡಿದಂತೆ ಆಗುತ್ತದೆ. ಪ್ರಜಾಪ್ರಭುತ್ವದಲ್ಲಿ ಇವುಗಳನ್ನು ಇಂದಿನ ಮಕ್ಕಳು ತಿಳಿದಿರಬೇಕಾಗಿರುವುದು ಅತ್ಯಗತ್ಯ ಎಂದು ಹೇಳಿದ್ದಾರೆ.

ಸಿಬಿಎಸ್ ಇ ಪಠ್ಯಕ್ರಮದಿಂದ ಇವುಗಳನ್ನು ಕೈಬಿಡಲು ಕಾರಣವೇನು ಎಂಬುದಕ್ಕೆ ಬಿಜೆಪಿ ವಿವರಣೆ ಕೊಡಬಲ್ಲದೇ, ಈ ತತ್ವಗಳಲ್ಲಿ ಅದಕ್ಕೆ ನಂಬಿಕೆಯಿಲ್ಲ ಎಂದರ್ಥವಲ್ಲವೇ, ಶಿಕ್ಷಣವನ್ನು ಕೂಡ ಕೇಸರಿಮಯ ಮಾಡುವ ದುರುದ್ದೇಶವನ್ನು ಬಿಜೆಪಿ ಕೈಬಿಡಬೇಕು ಎಂದು ಕಠುವಾಗಿ ಟ್ವೀಟ್ ಮೂಲಕ ಸಿದ್ದರಾಮಯ್ಯ ವಿರೋಧಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com