ಕೆಪಿಎಸ್ ಸಿ ಪರೀಕ್ಷೆ ಉತ್ತರ ಪತ್ರಿಕೆಗಳ ಪ್ರತಿ ನೀಡುವಂತೆ ಸಿಎಂಗೆ ಸಿದ್ದರಾಮಯ್ಯ ಒತ್ತಾಯ

ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿ ನೀಡಲು ನಿರಾಕರಿಸುತ್ತಿರುವ ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಸಿದ್ದರಾಮಯ್ಯ
ಸಿದ್ದರಾಮಯ್ಯ

ಮೈಸೂರು: ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಮುಖ್ಯ ಪರೀಕ್ಷೆ ಬರೆದಿರುವ ಅಭ್ಯರ್ಥಿಗಳಿಗೆ ಉತ್ತರ ಪತ್ರಿಕೆಗಳ ದೃಢೀಕೃತ ಪ್ರತಿ ನೀಡಲು ನಿರಾಕರಿಸುತ್ತಿರುವ ಕೆಪಿಎಸ್‌ಸಿ (ಕರ್ನಾಟಕ ಲೋಕಸೇವಾ ಆಯೋಗ) ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅಸಮಾಧಾನ ವ್ಯಕ್ತಪಡಿಸಿದ್ದಾರೆ.  

ಈ ಸಂಬಧ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಗುರುವಾರ ಪತ್ರ ಬರೆದಿರುವ ಅವರು, ‘ಮೌಲ್ಯಮಾಪನ ಆಗಿರುವ ಉತ್ತರ ಪತ್ರಿಕೆ ಪ್ರತಿ ಪಡೆದುಕೊಳ್ಳುವುದು ಅಭ್ಯರ್ಥಿಗಳ ಹಕ್ಕು’ ಎಂದು ಹೇಳಿದ್ದಾರೆ.ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರಿಗೆ ಗುರುವಾರ ಪತ್ರ ಬರೆದಿರುವ ಅವರು, 'ಮೌಲ್ಯಮಾಪನ ಆಗಿರುವ ಉತ್ತರ ಪತ್ರಿಕೆ ಪ್ರತಿ ಪಡೆದುಕೊಳ್ಳುವುದು ಅಭ್ಯರ್ಥಿಗಳ ಹಕ್ಕು' ಎಂದು ಹೇಳಿದ್ದಾರೆ.

ಮಾಹಿತಿ ಹಕ್ಕು ಕಾಯ್ದೆಯನ್ನೂ ಕೆಪಿಎಸ್‌ಸಿ ಸಮರ್ಪಕವಾಗಿ ಅನುಷ್ಠಾನ ಮಾಡುತ್ತಿಲ್ಲ ಎಂದೂ ಆಯೋಗ ಆಕ್ಷೇಪ ವ್ಯಕ್ತಪಡಿಸಿದೆ. ಆದರೂ, ಅಭ್ಯರ್ಥಿಗಳನ್ನು ಕೆಪಿಎಸ್‌ಸಿ ಅಲೆದಾಡಿಸಲಾಗುತ್ತಿದೆ' ಎಂದು ವಿವರಿಸಿದ್ದಾರೆ.'ನನ್ನನ್ನು ಭೇಟಿ ಮಾಡಿ ಅಳಲು ತೋಡಿಕೊಂಡಿರುವ ಅಭ್ಯರ್ಥಿಗಳು, ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ.

ಸುಪ್ರೀಂ ಕೋರ್ಟ್‌ ಆದೇಶ ಪಾಲಿಸಲು ಮತ್ತು ಮಾಹಿತಿ ಹಕ್ಕು ಕಾಯ್ದೆಯ ಸಮರ್ಪಕ ಅನುಷ್ಠಾನಕ್ಕೆ ಆದೇಶ ನೀಡಬೇಕು' ಎಂದು ಕೋರಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com