ಕೊರೋನಾ ನಿಯಂತ್ರಣಕ್ಕಾಗಿ ಖರ್ಚಾದ ಹಣ ಎಷ್ಟು? ರಾಜ್ಯ ಸರ್ಕಾರದ ವಿರುದ್ಧ 'ಲೆಕ್ಕಕೊಡಿ' ಅಭಿಯಾನ ಪ್ರಾರಂಭಿಸಿದ ಸಿದ್ದರಾಮಯ್ಯ

ಕೊರೋನಾ ವಿರುದ್ಧ ಹೋರಾಡಲು ಸಲಕರಣೆಗಳು, ಪಿಪಿಇ ಕಿಟ್ ಗಳ ಖರೀದಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಸಾಮಾಜಿಕ ತಾಣದಲ್ಲಿ "ಲೆಕ್ಕ ಕೊಡಿ" ಅಭಿಯಾನ ಪ್ರಾರಂಭಿಸಿದ್ದಾರೆ.

Published: 11th July 2020 03:48 PM  |   Last Updated: 11th July 2020 03:48 PM   |  A+A-


ಸಿದ್ದರಾಮಯ್ಯ

Posted By : Raghavendra Adiga
Source : Online Desk

ಬೆಂಗಳೂರು: ಕೊರೋನಾ ವಿರುದ್ಧ ಹೋರಾಡಲು ಸಲಕರಣೆಗಳು, ಪಿಪಿಇ ಕಿಟ್ ಗಳ ಖರೀದಿಯಲ್ಲಿ ರಾಜ್ಯ ಬಿಜೆಪಿ ಸರ್ಕಾರ ಭ್ರಷ್ಟಾಚಾರ ನಡೆಸಿದೆ ಎಂದು ಆರೋಪಿಸಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇದೀಗ ಸಾಮಾಜಿಕ ತಾಣದಲ್ಲಿ "ಲೆಕ್ಕ ಕೊಡಿ" ಅಭಿಯಾನ ಪ್ರಾರಂಭಿಸಿದ್ದಾರೆ.

ಕೋವಿಡ್-19 ನಿಯಂತ್ರಣಕ್ಕಾಗಿ ಖರ್ಚು ಮಾಡಿದ ಹಣದ ಲೆಕ್ಕ ಕೊಡುವಂತೆ ಸಿದ್ದರಾಮಯ್ಯ ಯಡಿಯೂರಪ್ಪ ಸರ್ಕಾರವನ್ನು ಒತ್ತಾಯಿಸಿದ್ದಾರೆ. ಈ ಸಂಬಂಧ ವೀಡಿಯೋ ಸಂದೇಶ ನೀಡಿರುವ ಅವರು "ಕೊರೊನಾ ನಿಯಂತ್ರಣದ ಉದ್ದೇಶಕ್ಕಾಗಿ ಖರ್ಚು ಮಾಡಿದ ಹಣದ ಲೆಕ್ಕ ಕೊಡಿ. ಲೆಕ್ಕ ಕೇಳುವುದು ರಾಜ್ಯದ ಜನತೆಯ ಹಕ್ಕು!! ಲೆಕ್ಕ ಕೊಡುವುದು ನಿಮ್ಮ ಕರ್ತವ್ಯ!! #100PercentCorruptSarkar #LekkaKodi" ಎಂದು ಟ್ವೀಟ್ ಮಾಡಿದ್ದಾರೆ.

ಇದಲ್ಲದೆ "ಕೊರೊನಾ ನಿಯಂತ್ರಣದಲ್ಲಿ‌ ನಡೆದಿರುವ ಭ್ರಷ್ಟಾಚಾರದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ #LekkaKodi ಎಂಬ ಹ್ಯಾಷ್ ಟ್ಯಾಗ್‌ನೊಂದಿಗೆ ರಾಜ್ಯ ಸರ್ಕಾರದ ವಿರುದ್ಧ ವಿಡಿಯೋ ಅಭಿಯಾನ ಶುರು ಮಾಡಲಾಗಿದೆ.

"ನಮ್ಮ ಪಕ್ಷದ ಎಲ್ಲ ಶಾಸಕರು, ಸಂಸದರು, ಕಾರ್ಯಕರ್ತರು ವಿಡಿಯೊ ಮಾಡಿ, ಶೇರ್ ಮಾಡುವ ಮೂಲಕ ಇದರಲ್ಲಿ ಭಾಗವಹಿಸಬೇಕೆಂದು‌ ವಿನಂತಿ." 
#LekkaKodi ಎಂದು ರಾಜ್ಯದ ಕಾಂಗ್ರೆಸ್ ನಾಯಕರಿಗೆ ಸೂಚಿಸಿದ್ದಾರೆ. 

 

 

ಇನ್ನು "ಪಿಪಿಇ ಕಿಟ್‌, ಮಾಸ್ಕ್‌, ಸ್ಯಾನಿಟೈಸರ್‌, ಥರ್ಮಲ್‌ ಸ್ಕ್ಯಾನರ್‌, ಫುಡ್‌ ಇದಕ್ಕಾಗಿ ಖರ್ಚು ಮಾಡಿದ್ದೆಷ್ಟು..? ಕೊರೊನಾ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ನೀಡಿದ ಅನುದಾನ ಎಷ್ಟು..? ಕೊರೊನಾ ಸಂತ್ರಸ್ತರ ಆರೈಕೆಗೆ ಖರ್ಚು ಮಾಡಿದ್ದೆಷ್ಟು ?" ಎಂದು ಸರ್ಕಾರಕ್ಕೆ ಪ್ರಶ್ನೆ ಕೇಳಿದ್ದಾರೆ. 

 

 

Stay up to date on all the latest ರಾಜಕೀಯ news
Poll
Online education learning

ಆನ್‌ಲೈನ್ ಕಲಿಕೆಯ ಪ್ರಯೋಗವು ಶಿಕ್ಷಣ ವ್ಯವಸ್ಥೆಯನ್ನು ಸುಧಾರಿಸುತ್ತದೆ ಎಂದು ಹಾರ್ವರ್ಡ್ ಪ್ರಾಧ್ಯಾಪಕರೊಬ್ಬರು ಹೇಳಿದ್ದಾರೆ. ನೀವು ಏನಂತೀರಿ?


Result
ಸರಿ
ತಪ್ಪು
ಗೊತ್ತಿಲ್ಲ
flipboard facebook twitter whatsapp