ಶಾಸಕಾಂಗ ಸಮಿತಿಯ ಎಲ್ಲಾ ಸಭೆಗಳನ್ನು ರದ್ದುಗೊಳಿಸಿ: ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ

ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಿರುವ ಬೆನ್ನಲ್ಲೇ ವಿಧಾನ ಮಂಡಲ ಶಾಸಕಾಂಗ ಸಮಿತಿ ಸಭೆಗಳನ್ನು ರದ್ದುಗೊಳಿಸುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ.

Published: 14th July 2020 09:40 AM  |   Last Updated: 14th July 2020 09:40 AM   |  A+A-


Vishweswhara hegde kageri

ವಿಶ್ವೇಶ್ವರ ಹೆಗಡೆ ಕಾಗೇರಿ

Posted By : Shilpa D
Source : The New Indian Express

ಬೆಂಗಳೂರು: ಕೊರೋನಾ ಸೋಂಕು ನಿಯಂತ್ರಣಕ್ಕಾಗಿ ಬೆಂಗಳೂರು ಮತ್ತು ಗ್ರಾಮಾಂತರ ಜಿಲ್ಲೆಗಳಲ್ಲಿ ಲಾಕ್ ಡೌನ್ ಘೋಷಣೆ ಮಾಡಿರುವ ಬೆನ್ನಲ್ಲೇ ವಿಧಾನ ಮಂಡಲ ಶಾಸಕಾಂಗ ಸಮಿತಿ ಸಭೆಗಳನ್ನು ರದ್ದುಗೊಳಿಸುವಂತೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ್ದಾರೆ.

ಮುಂದಿನ ಆದೇಶ ಬರುವವರೆಗೂ ಯಾವುದೇ ಸಮಿತಿ ಸಭೆ ನಡೆಸದಂತೆ  ವಿಧಾನಸಭೆ ಕಾರ್ಯದರ್ಶಿ ಎಂಕೆ ವಿಶಾಲಾಕ್ಷಿ ಸುತ್ತೋಲೆ ಹೊರಡಿಸಿದ್ದಾರೆ.

ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಕೋವಿಡ್ -19 ಹಣವನ್ನು ಸರ್ಕಾರ ದುರುಪಯೋಗಪಡಿಸಿಕೊಂಡಿದೆ ಮತ್ತು ಭ್ರಷ್ಟಾಚಾರದ ಆರೋಪಗಳನ್ನು ತನಿಖೆ ನಡೆಸುತ್ತಿಲ್ಲ ಸಾರ್ವಜನಿಕ ಖಾತೆಗಳ ಸಮಿತಿಯನ್ನು ಸ್ಥಗಿತಗೊಳಿಸಿದೆ ಎಂದು  ಕಾಂಗ್ರೆಸ್ ಆರೋಪಿಸುತ್ತಿರುವ ಸಮಯದಲ್ಲೇ ಸ್ಪೀಕರ್ ಈ ಆದೇಶ ಹೊರಡಿಸಿದ್ದಾರೆ.

Stay up to date on all the latest ರಾಜಕೀಯ news
Poll
school

ರಾಷ್ಟ್ರೀಯ ಶಿಕ್ಷಣ ನೀತಿ-2020: 5 ನೇ ತರಗತಿಯವರೆಗೆ ವಿದ್ಯಾರ್ಥಿಗಳಿಗೆ ಮಾತೃಭಾಷೆಯಲ್ಲಿ ಕಲಿಸುವ ಪ್ರಸ್ತಾಪವನ್ನು ನೀವು ಬೆಂಬಲಿಸುತ್ತೀರಾ?


Result
ಹೌದು
ಇಲ್ಲ
ಗೊತ್ತಿಲ್ಲ
flipboard facebook twitter whatsapp