ಪರಿಸ್ಥಿತಿ ಹದಗೆಡುವ ಮುನ್ನವೇ ಎಚ್ಚೆತ್ತುಕೊಳ್ಳಿ; ಸಚಿವರು ಸಮನ್ವಯತೆಯಿಂದ ಕೆಲಸ ಮಾಡಿ: ಸರಕಾರಕ್ಕೆ ವಿರೋಧ ಪಕ್ಷ ಎಚ್ಚರಿಕೆ

ರಾಜ್ಯಾದ್ಯಂತ ಮಾಹಾಮಾರಿ ಕೊರೋನಾ ತನ್ನ ಅಟ್ಟಹಾಸ ಮುಂದುವರಿಸಿದ್ದು ಪರಿಸ್ಥಿತಿ ತೀರಾ ಹದಗೆಡುವ ಮನ್ನ ಸರ್ಕಾರ ಎಚ್ಚೆತ್ತುಕೊಂಡು ಸರಿಯಾದ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷಗಳು ಆಗ್ರಹಿಸಿವೆ.
ಕಾಂಗ್ರೆಸ್ ಶಾಸಕರು
ಕಾಂಗ್ರೆಸ್ ಶಾಸಕರು

ಬೆಂಗಳೂರು: ರಾಜ್ಯಾದ್ಯಂತ ಮಾಹಾಮಾರಿ ಕೊರೋನಾ ತನ್ನ ಅಟ್ಟಹಾಸ ಮುಂದುವರಿಸಿದ್ದು ಪರಿಸ್ಥಿತಿ ತೀರಾ ಹದಗೆಡುವ ಮನ್ನ ಸರ್ಕಾರ ಎಚ್ಚೆತ್ತುಕೊಂಡು ಸರಿಯಾದ ಕ್ರಮ ಕೈಗೊಳ್ಳಬೇಕೆಂದು ರಾಜ್ಯ ಸರ್ಕಾರಕ್ಕೆ ವಿರೋಧ ಪಕ್ಷಗಳು ಆಗ್ರಹಿಸಿವೆ.

ಇದು ಟೀಕೆಯಲ್ಲ ವ್ಯವಸ್ಥೆಯಲ್ಲಿ ನಾವು ವಿಫಲರಾಗಿದ್ದೇವೆ ಎಂದು ಮಾಜಿ ಸ್ಪೀಕರ್ ಕೆಆರ್ ರಮೇಶ್ ಕುಮಾರ್ ಬೇಸರ ವ್ಯಕ್ತ ಪಡಿಸಿದ್ದಾರೆ.

ಲಭ್ಯವಿರುವ ಸಂಪನ್ಮೂಲ ಬಳಸಿಕೊಂಡು ಖಾಸಗಿ ಸಹಯೋಗದೊಂದಿಗೆ ವಾರ್ಡ್ ಮಟ್ಟದಲ್ಲಿ ಸೌಲಭ್ಯ ಕಲ್ಪಿಸಬೇಕು. ಕೊರೋನಾ ರೋಗಿಗಳಿಗೆ ಚಿಕಿತ್ಸೆ ನೀಡದ ಹಾಗೂ ದುಬಾರಿ ಬಿಲ್ ಮಾಡುವ ಆಸ್ಪತ್ರೆಗಳ ವಿರುದ್ಧ ಕ್ರಿಮಿನಲ್ ಕೇಸ್ ದಾಖಲಿಸಬೇಕೆಂದು ಆಗ್ರಹಿಸಿದ್ದಾರೆ.

ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರ್ಯಾಂಡಮ್ ಟೆಸ್ಟ್ ಪ್ರಮಾಣವನ್ನು ಹೆಚ್ಚಿಸಬೇಕು ಎಂದು ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಹೇಳಿದ್ದಾರೆ. ಮತ್ತಷ್ಟು ಕಠಿಣವಾಗಿ ಲಾಕ್ ಡೌನ್ ಹೇರಬೇಕು, ನಗರದ ಹೊರವಲಯದಲ್ಲಿ ಕೋವಿಡ್ ಕೇರ್ ಸೆಂಟರ್ ತೆರೆದು ಚಿಕಿತ್ಸಾ ಸೌಲಭ್ಯ ನೀಡಬೇಕೆಂದು, ಮಾಜಿ ಗೃಹ ಸಚಿವ ರಾಮಲಿಂಗಾ ರೆಡ್ಡಿ ಒತ್ತಾಯಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಬೆನ್ನಲ್ಲೇ ರಾಜ್ಯದ ಇತರೆಡೆಗೆ ಜನರಿಗೆ ಪ್ರಯಾಣ ಮಾಡುವ ಅವಕಾಶ ನೀಡಿ ಸರ್ಕಾರ ತಪ್ಪು ಮಾಡಿದೆ ಎಂದು ಶಾಸಕ ದಿನೇಶ್ ಗುಂಡೂರಾವ್ ಹೇಳಿದ್ದಾರೆ, ಅಂತರಾಜ್ಯ ಸಂಚಾರ ರದ್ದುಗೊಳಿಸಬೇಕು,  ಎಲ್ಲರಿಗೂ ಪರೀಕ್ಷೆ ಕಡ್ಡಾಯಗೊಳಿಸಬೇಕು, ಬೆಡ್ ಗಳ ಸಂಖ್ಯೆಯನ್ನು ಹೆಚ್ಚಿಸಬೇಕು ಐಸಿಯು ಮತ್ತು ವೆಂಟಿಲೇಟರ್ ಸಂಖ್ಯೆ ಹೆಚ್ಚಿಸಬೇಕು ಎಂದು ಹೇಳಿದ್ದಾರೆ.

ಸರಿಯಾದ ಚಿಕಿತ್ಸೆ ಸಿಗದೇ ಹಲವೆಡೆ ಜನ ಸಾಯುತ್ತಿರುವ ಬಗ್ಗೆ ಉಲ್ಲೇಖಿಸಿರುವ ದಿನೇಶ್ ಗುಂಡೂರಾವ್ ಸರ್ಕಾರದ ಸಚಿವರುಗಳ ಸಮನ್ವಯ ಸಾಧಿಸಿಕೊಂಡು  ಕೆಲಸ ಮಾಡಬೇಕು, ಆದರೆ ದುರಾದೃಷ್ಟವಶಾತ್ ಆ ರೀತಿಯ ಕೆಲಸ ನಡೆಯುತ್ತಿಲ್ಲ ಎಂದು ಹೇಳಿದ್ದಾರೆ.

ಸಾರ್ವಜನಿಕ ಜೀವನದಲ್ಲಿ ರಾಜಕೀಯ ಮತ್ತು ಸಂಸದೀಯ ಪ್ರಜಾಪ್ರಭುತ್ವದಲ್ಲಿ ಕೇವಲ ಅಧಿಕಾರವಲ್ಲ, ಜವಾಬ್ದಾರಿಯೂ ಇರುತ್ತದೆ, ನನಗೆ ಅಧಿಕಾರ ಸಿಕ್ಕಿದೆ ಎಂದು ನಾನು ಭಾವಿಸಿದರೆ, ನಾನು ನನ್ನ ಜನರ ಮೇಲೆ ವಿಶ್ವಾಸಘಾತುಕತನ ಮಾಡುತ್ತಿದ್ದೇನೆ ಎಂದು ಅರ್ಥ, ನನ್ನ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕತೆಯಿಂದ ನಿರ್ವಹಿಸುತ್ತೇನೆ ಎಂದು ಹೇಳುವ ನಮ್ರತೆ ನನಗೆ ಇರಬೇಕು ಈಶ್ವರ್ ಖಂಡ್ರೆ ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com