ರಾಜಸ್ಥಾನದ ರಾಜಕೀಯ ಬೆಳವಣಿಗೆಗೆ ನಾವೇ ಮಾದರಿ, ಇದಕ್ಕಾಗಿ ನಾನು ಹೆಮ್ಮೆ ಪಡುತ್ತೇನೆ: ಎಚ್. ವಿಶ್ವನಾಥ್

ರಾಜಸ್ಥಾನದ ಇಂದಿನ ರಾಜಕೀಯ ಬೆಳವಣಿಗೆಗೆ ನಾವೇ ಕಾರಣ. ನಾವು ಹುಟ್ಟಿ ಹಾಕಿದ ಸಂಸ್ಕೃತಿಯಿಂದ ಇಷ್ಟೆಲ್ಲಾ ಬೆಳವಣಿಗೆಗಳು ಆಗುತ್ತಿವೆ, ಇದಕ್ಕಾಗಿ ನಾನು ಹೆಮ್ಮೆ ಪಡುತ್ತೇನೆ  ಎಂದು ಮಾಜಿ ಸಚಿವ ಹೆಚ್​.ವಿಶ್ವನಾಥ್ ಹೇಳಿದ್ದಾರೆ.
ವಿಶ್ವನಾಥ್
ವಿಶ್ವನಾಥ್

ಮೈಸೂರು: ರಾಜಸ್ಥಾನದ ಇಂದಿನ ರಾಜಕೀಯ ಬೆಳವಣಿಗೆಗೆ ನಾವೇ ಕಾರಣ. ನಾವು ಹುಟ್ಟಿ ಹಾಕಿದ ಸಂಸ್ಕೃತಿಯಿಂದ ಇಷ್ಟೆಲ್ಲಾ ಬೆಳವಣಿಗೆಗಳು ಆಗುತ್ತಿವೆ, ಇದಕ್ಕಾಗಿ ನಾನು ಹೆಮ್ಮೆ ಪಡುತ್ತೇನೆ  ಎಂದು ಮಾಜಿ ಸಚಿವ ಹೆಚ್​.ವಿಶ್ವನಾಥ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ರಾಜಸ್ಥಾನದಲ್ಲಿ ರಾಜಕೀಯ ಬೆಳವಣಿಗೆ ನಾವೆ ಮಾದರಿ. ಆಡಳಿತ ಪಕ್ಷದ ವಿರುದ್ದ ಸೆಡ್ಡು ಹೊಡೆದಿದ್ದು ಮೊದಲು ಕರ್ನಾಟಕದಲ್ಲೆ, ಸಂವಿಧಾನ ದಲ್ಲಿ ಇಂತಹ ಸ್ವಾತಂತ್ರ್ಯ ಹೋರಾಟದ ಮಾದರಿಯ ಹೋರಾಟ ನಡೆಯಬೇಕು. ಇದರಿಂದ ಜನತಂತ್ರ ವ್ಯವಸ್ಥೆಗೆ ಒಂದು ಬೆಲೆ ಬರುತ್ತದೆ ಎಂದು ಹೇಳುವ ಮೂಲಕ ತಮ್ಮ ಆಪರೇಷನ್ ಕಮಲದ ನಡೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಒಬ್ಬ ಜನಪ್ರತಿನಿಧಿಯನ್ನ ಅಷ್ಟು ಸುಲಭವಾಗಿ ಕಡೆಗಣಿಸಬಾರದು. ಇತ್ತೀಚೆಗೆ ವಿರೋಧ ಪಕ್ಷದಿಂದ ಆಡಳಿತ ಪಕ್ಷಕ್ಕೆ ಯಾರೂ ಹೋಗುತ್ತಿಲ್ಲ. ಆಡಳಿತ ಪಕ್ಷದಿಂದಲೇ ವಿರೋಧ ಪಕ್ಷದ ಕಡೆಗೆ ಹೋಗುತ್ತಿದ್ದಾರೆ. ಅದು ಪಕ್ಷಾಂತವರಲ್ಲ, ಅದು ಶಿಕ್ಷೆ ನೀಡುವಂತ ಅಪರಾಧವು ಅಲ್ಲ. ರಾಜಸ್ಥಾನದ ರಾಜಕೀಯ ಬೆಳವಣಿಗೆ ಬಗ್ಗೆ ದೇಶದ್ಯಾಂತ ಚರ್ಚೆ ಆಗಬೇಕು ಎಂದು ವಿಶ್ವನಾಥ್ ಹೇಳಿದರು.

ಈಗಾಗಲೇ ಕಾಂಗ್ರೆಸ್‌ನಲ್ಲಿ ಯುವ ನಾಯಕತ್ವ ದಮನ ಮಾಡಲಾಗುತ್ತಿದೆ. ರಾಹುಲ್ ‌ಗಾಂಧಿ ವಯಸ್ಸಿನ ಯುವಕರನ್ನ ತುಳಿಯುವ ಕೆಲಸ ಆಗುತ್ತಿದೆ. ಮಧ್ಯ ಪ್ರದೇಶದಲ್ಲಿ ಸಿಂಧ್ಯಾ, ರಾಜಸ್ಥಾನದಲ್ಲಿ ಸಚಿನ್ ಪೈಲೆಟ್.  ಈ ಇಬ್ಬರೂ ಯುವಕರು ಜಾತ್ಯತೀತ ಮನಸ್ಥಿತಿ ಉಳ್ಳವರು. ಕಾಂಗ್ರೆಸ್‌ಗಾಗಿ ದುಡಿದವರು ಈ ಯುವಕರು. ಇವರನ್ನು ತುಳಿಯುವ ಕೆಲಸ ಕಾಂಗ್ರೆಸ್ ನಡೆದಿದೆ ಎಂದು ವಿಶ್ವನಾಥ್ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com