'ಸತ್ತವರ ದೇಹ ಮುಟ್ಟಲು ಹೆದರುವ ಸರ್ಕಾರ ಸೋಂಕಿತರು ಬಳಸಿದ ಬೆಡ್ ಗಳನ್ನು ವಿದ್ಯಾರ್ಥಿಗಳಿಗೆ ನೀಡುವುದು ಸರಿಯೇ?'

ಕೋವಿಡ್-19 ಸೋಂಕಿತರು ಬಳಸಿದ ಹಾಸಿಗೆಗಳನ್ನು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಇದರ ವಿರುದ್ಧ ಆಂದೋಲನ ಆರಂಭಿಸುವುದಾಗಿ   ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಎಚ್ಚರಿಕೆ ನೀಡಿದ್ದಾರೆ.
ಶಿವಕುಮಾರ್
ಶಿವಕುಮಾರ್

ಬೆಂಗಳೂರು: ಕೋವಿಡ್-19 ಸೋಂಕಿತರು ಬಳಸಿದ ಹಾಸಿಗೆಗಳನ್ನು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ನೀಡಲು ಸರ್ಕಾರ ನಿರ್ಧರಿಸಿದೆ. ಇದರ ವಿರುದ್ಧ ಆಂದೋಲನ ಆರಂಭಿಸುವುದಾಗಿ   ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್  ಎಚ್ಚರಿಕೆ ನೀಡಿದ್ದಾರೆ.

ಕೊರೋನಾ ಪರಿಸ್ಥಿತಿ ನಿರ್ವಹಣೆಯಲ್ಲಿ ಸರ್ಕಾರದ ವೈಫಲ್ಯ ಮತ್ತು ಕೋವಿಡ್-19 ಚಿಕಿತ್ಸಾ ಸಲಕರಣೆ ಖರೀದಿಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಸೇರಿದಂತೆ ರಾಜ್ಯಾದ್ಯಂತ ಸೋಂಕಿತರ ಪರದಾಟ ಮತ್ತಿತರ ವಿಚಾರಗಳ ಬಗ್ಗೆ ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಸಭೆ ನಡೆಸಿದರು. 

ಕೆಪಿಸಿಸಿ ಕಚೇರಿಯಲ್ಲಿ ನಡೆದ ಈ ಸಭೆಯಲ್ಲಿ ಹಿರಿಯ ಮುಖಂಡರು, ಕಾಂಗ್ರೆಸ್ ಕೋವಿಡ್ ಕಾರ್ಯಪಡೆ ಹಾಗೂ ವೈದ್ಯ ಘಟಕದ ಪ್ರತಿನಿಧಿಗಳು ಭಾಗಿಯಾಗಿದ್ದರು. ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್​, ಸರ್ಕಾರ 10 ಸಾವಿರವೋ 20 ಸಾವಿರವೋ ಹಾಸಿಗೆಗಳನ್ನು ಖರೀದಿಸುತ್ತಿದೆ. ಮೊದಲು ಒಂದಕ್ಕೆ ಮೂರರಷ್ಟು ದರ ನಿಗದಿ ಮಾಡಿ ಬಾಡಿಗೆ ಎಂದು ಹೇಳಿದ್ದರು. ಈಗ ಖರೀದಿ ಮಾಡಿದ್ದಾರೆ,. ಇದನ್ನು ಕೋವಿಡ್ ಸೋಂಕಿತರು ಬಳಸಿದ ನಂತರ ಹಾಸ್ಟೆಲ್ ವಿದ್ಯಾರ್ಥಿಗಳಿಗೆ
ನೀಡಲಿದ್ದೇವೆ ಎಂದು ಹೇಳುತ್ತಿವೆ ಎಂದರು. 

ಅಧಿಕಾರಿಗಳು ನೀಡಿದ ಈ ಸಲಹೆಯನ್ನು ಸರ್ಕಾರ ಒಪ್ಪಿದೆ. ಅದಕ್ಕೆ ನನ್ನ ಬಳಿ ದಾಖಲೆಗಳಿವೆ. ಈ ದೇಶದಲ್ಲಿ ವಿದ್ಯಾವಂತಿಕೆ, ಬುದ್ಧಿವಂತಿಕೆ ಇಲ್ಲದಿದ್ದರೂ ಪರವಾಗಿಲ್ಲ. ಆದರೆ ಪ್ರಜ್ಞಾವಂತಿಕೆ ಇರಬೇಕು. ಸೋಂಕಿನಿಂದ ಸತ್ತವರ ದೇಹವನ್ನು ಮುಟ್ಟಲು ಹಿಂದೆ ಮುಂದೆ ನೋಡುತ್ತಿರುವ ಈ ಸರ್ಕಾರ, ಅವರು ಬಳಸಿದ ಹಾಸಿಗೆಯನ್ನು ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಕೊಡುವುದು ಎಷ್ಟು ಸರಿ? ಎಂದು  ಪ್ರಶ್ನಿಸಿದರು.

ನಮ್ಮ ಹಳ್ಳಿ ಮಕ್ಕಳಿಗೆ ಹೇಗೆ ನೀಡುತ್ತಾರೆ? ಇವರಿಗೇನಾದರೂ ಬುದ್ಧಿ ಇದೆಯೇ? ಇವರು ಎಂತೆಂಥ ಸಲಹೆಗಾರರು, ಅಧಿಕಾರಿಗಳನ್ನು ಇಟ್ಟುಕೊಂಡಿದ್ದಾರೆ. ಸರ್ಕಾರ ಹೇಗೆ ಆಡಳಿತ ನಡೆಸುತ್ತಿದೆ ಎಂಬುದಕ್ಕೆ ಇದು ಬಹುದೊಡ್ಡ ಸಾಕ್ಷಿ. ಯಾವುದೇ ಕಾರಣಕ್ಕೂ ನಾವು ಇದಕ್ಕೆಅವಕಾಶ ನೀಡುವುದಿಲ್ಲ ಎಂ‌ದು ಡಿಕೆಶಿ ಸವಾಲ್​ ಹಾಕಿದರು.

ಕೋವಿಡ್ ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಸರ್ಕಾರ ಸಂಪೂರ್ಣವಾಗಿ ವಿಫಲವಾಗಿದೆ ಎಂದು ಅವರು ಆರೋಪಿಸಿದರು. “ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ದೂರಿದ್ದಾರೆ.
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com