ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆ ಆನ್ ಲೈನ್ ನಲ್ಲಿ ಏಕೆ ನಡೆಸಬಾರದು: ಸ್ಪೀಕರ್ ಗೆ ಎಚ್.ಕೆ ಪಾಟೀಲ್ ಪ್ರಶ್ನೆ

ಮುಂದಿನ ಆದೇಶ ಹೊರಡಿಸುವವರೆಗೂ  ಎಲ್ಲಾ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಗಳನ್ನು ರದ್ದುಗೊಳಿಸಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ 8 ದಿನಗಳ ನಂತರ ಕಾಂಗ್ರೆಸ್ ಮುಖಂಡ ಎಚ್ ಕೆ ಪಾಟೀಲ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ.
ವಿಶ್ವೇಶ್ವರ ಹೆಗಜೆ ಕಾಗೇರಿ
ವಿಶ್ವೇಶ್ವರ ಹೆಗಜೆ ಕಾಗೇರಿ

ಬೆಂಗಳೂರು: ಮುಂದಿನ ಆದೇಶ ಹೊರಡಿಸುವವರೆಗೂ  ಎಲ್ಲಾ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಗಳನ್ನು ರದ್ದುಗೊಳಿಸಬೇಕು ಎಂದು ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಆದೇಶ ಹೊರಡಿಸಿದ 8 ದಿನಗಳ ನಂತರ ಕಾಂಗ್ರೆಸ್ ಮುಖಂಡ ಎಚ್ ಕೆ ಪಾಟೀಲ್ ಸ್ಪೀಕರ್ ಗೆ ಪತ್ರ ಬರೆದಿದ್ದಾರೆ.

ರಾಜ್ಯದಲ್ಲಿ ಕೊರೋನಾ ಚಿಕಿತ್ಸೆಗೆ ವೈದ್ಯಕೀಯ ಉಪಕರಣಗಳ ಖರೀದಿಯಲ್ಲಿ ಆಗಿದೆ ಎನ್ನಲಾಗಿರುವ ಅವ್ಯವಹಾರಗಳ ಹಿನ್ನೆಲೆಯಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯ ಸಭೆಯನ್ನು ಆನ್‌ಲೈನ್‌ ಮೂಲಕ ನಡೆಸಬೇಕು ಹಾಗೂ ಇ-ತಪಾಸಣೆಗಳಿಗೆ ಅವಕಾಶ ನೀಡಬೇಕು ಎಂದು ಆಗ್ರಹಿಸಿ ಎಚ್‌.ಕೆ ಪಾಟೀಲ್‌ ಅವರು ಸ್ಪೀಕರ್‌ ಗೆ ಪತ್ರದಲ್ಲಿ ತಿಳಿಸಿದ್ದಾರೆ.

ಕೊರೋನಾ ನಿರ್ವಹಣೆ ಹಾಗೂ ಪ್ರತಿಯೊಂದು ಹಂತದ ಖರೀದಿಯಲ್ಲಿ ಭ್ರಷ್ಟಾಚಾರದ ಆರೋಪ ಕೇಳಿಬರುತ್ತಿದೆ. ಚಿಕಿತ್ಸಾ ಸಾಮಗ್ರಿಗಳು ಕಳಪೆ ಗುಣಮಟ್ಟದವು ಎಂಬ ಆರೋಪವಿದೆ. ಈ ಕುರಿತಾಗಿ ದೂರುಗಳು ಕೇಳಿ ಬರುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್‌ ನಿರ್ವಹಣೆಯಲ್ಲಿ ಭ್ರಷ್ಟಾಚಾರ ಸಂದೇಹಗಳು ಬಲವಾಗುತ್ತಿವೆ ಎಂದು ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

ಇಂತಹ ಸಂದರ್ಭದಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿಯಂತಹ ಮಹತ್ವದ ಸಮಿತಿಯು ತನ್ನ ಕರ್ತವ್ಯದಿಂದ ವಿಮುಖವಾಗಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಸಭೆಗಳನ್ನು ನಡೆಸಬೇಕು. ಅಧಿಕಾರಿಗಳಿಂದ ವಿವರಣೆ ಪಡೆಯಬೇಕು. ತಪ್ಪಿತಸ್ಥರನ್ನು ಗುರುತಿಸಬೇಕು ಹಾಗೂ ಕ್ರಮ ಜರಗಿಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಕರ್ನಾಟಕ ಸರ್ಕಾರ ಇ ಆಡಳಿತ ವ್ಯವಸ್ಥೆಯಲ್ಲಿ ಮೊಬೈಲ್‌ kswan ವಿದ್ಯುನ್ಮಾನಚಾಲಿತ ವ್ಯವಸ್ಥೆ ಹೊಂದಿರುವ ವಾಹನದ ಮೂಲಕ ತಪಾಸಣೆ ಕೈಗೊಳ್ಳುವ ವ್ಯವಸ್ಥೆಯನ್ನು ಜಾರಿಗೆ ತಂದು ದಶಕ ಕಳೆದಿದೆ.ವಿಧಾನ ಮಂಡಲದ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಇಂತಹ ವಿಶಿಷ್ಟ ಸಂದರ್ಭದಲ್ಲಿ ಈ ಸೌಲಭ್ಯವನ್ನು ಉಪಯೋಗ ಮಾಡಬೇಕು ಎಂದು ಎಚ್‌ಕೆ ಪಾಟೀಲ್‌ ಒತ್ತಾಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com