ಕೊರೋನಾ ಆರ್ಥಿಕ ಸಂಕಷ್ಟ: ಒಂದು ವರ್ಷ ಆಸ್ತಿ ತೆರಿಗೆ ಮನ್ನಾ ಮಾಡಿ; ರಾಜ್ಯ ಸರ್ಕಾರಕ್ಕೆ ಡಿಕೆಶಿ ಒತ್ತಾಯ

ಕೊರೋನಾ ವೈರಸ್ ನಿಂದಾಗಿ ರಾಜ್ಯದ ಜನತೆ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರ ಮೇಲಿನ ಹಣಕಾಸಿನ ಹೊರೆಯನ್ನು ಇಳಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಆಸ್ತಿ ತೆರಿಗೆಯನ್ನು ಮನ್ನಾ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. 
ಡಿಕೆ.ಶಿವಕುಮಾರ್
ಡಿಕೆ.ಶಿವಕುಮಾರ್

ಬೆಂಗಳೂರು: ಕೊರೋನಾ ವೈರಸ್ ನಿಂದಾಗಿ ರಾಜ್ಯದ ಜನತೆ ಆರ್ಥಿಕ ಸಂಕಷ್ಟವನ್ನು ಎದುರಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರ ಮೇಲಿನ ಹಣಕಾಸಿನ ಹೊರೆಯನ್ನು ಇಳಿಸಲು ರಾಜ್ಯ ಸರ್ಕಾರ ಎಲ್ಲಾ ರೀತಿಯ ಆಸ್ತಿ ತೆರಿಗೆಯನ್ನು ಮನ್ನಾ ಮಾಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ.ಶಿವಕುಮಾರ್ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಒತ್ತಾಯಿಸಿದ್ದಾರೆ. 

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಕೊರೋನಾ ವೈರಸ್ ನಿಂದಾಗಿ ಕಳೆದ 4 ತಿಂಗಳುಗಳಿಂದ ಸರಿಯಾಗಿ ಕೆಲಸವಲ್ಲದೇ ರಾಜ್ಯದ ಜನತೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಅವರ ಮೇಲಿನ ಆರ್ಥಿಕ ಹೊರೆಯನ್ನು ಇಳಿಸುವ ಜವಾಬ್ದಾರಿ ಸರ್ಕಾರದ ಮೇಲಿದೆ. ಹೀಗಾಗಿ ಮಾನವೀಯತೆಯ ದೃಷ್ಟಿಯಿಂದ ಒಂದು ವರ್ಷ ರಾಜ್ಯದಲ್ಲಿ ಎಲ್ಲಾ ರೀತಿಯ ಆಸ್ತಿ ತೆರಿಗೆಯನ್ನು ಮನ್ನಾ ಮಾಡಬೇಕೆಂದು ಹೇಳಿದ್ದಾರೆ. 

ನಗರ ಸ್ಥಳೀಯ ಸಂಸ್ಥೆ ಹಾಗೂ ಗ್ರಾಮ ಪಂಚಾಯತಿಗಳಲ್ಲೂ ಆಸ್ತಿ ತೆರಿಗೆಯನ್ನು ವಸೂಲಿ ಮಾಡಬಾರದು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ. 

ಕೊರೋನಾದಿಂದಾಗಿ ಕಳೆದ 4 ತಿಂಗಳಿಂದ ರಾಜ್ಯದಲ್ಲಿ ಭಾಗಶಃ ಲಾಕ್ಡೌನ್ ಜಾರಿಯಲ್ಲಿತ್ತು. ಆದ್ದರಿಂದ ಜನ ಉದ್ಯೋಗವಿಲ್ಲದೇ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದಾರೆ. ಅಸಂಖ್ಯಾತ ಜನ ಬೆಂಗಳೂರು ಸೇರಿ ವಿವಿಧ ನಗರಗಳಿಂದ ವಾಪಸ್ ಆಗಿದ್ದು, ನೆಲೆ ಕಂಡುಕೊಳ್ಳುವ ಪ್ರಯ್ನ ಮಾಡುತ್ತಿದ್ದಾರೆ. ಈ ಸಂದರ್ಭದಲ್ಲಿ ಆಸ್ತಿ ತೆರಿಗೆ ಮನ್ನಾ ಮಾಡಿದರೆ ಜನರಿಗೆ ಅನುಕೂಲವಾಗಲಿದೆ ಎಂದು ತಿಳಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com