ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರಲು ಬಂದಿದ್ದರು, ಬುದ್ಧಿವಾದ ಹೇಳಿ ಕಳಿಸಿದ್ದೆ: ಡಿಕೆಶಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜಕೀಯದಲ್ಲಿ ಹೊಸಬಾಂಬ್ ವೊಂದನ್ನು ಸಿಡಿಸಿದ್ದಾರೆ. ಮೇಲ್ಮನೆ ಸ್ಥಾನಕ್ಕೇರುವ ಮೊದಲು ಬಿಜೆಪಿಯ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದ್ದರು ಎಂದು ಹೇಳಿಕೆ ನೀಡಿದ್ದಾರೆ. 
ಸಿ.ಪಿ. ಯೋಗೀಶ್ವರ್ ಡಿ.ಕೆ.ಶಿವಕುಮಾರ್
ಸಿ.ಪಿ. ಯೋಗೀಶ್ವರ್ ಡಿ.ಕೆ.ಶಿವಕುಮಾರ್

ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ರಾಜಕೀಯದಲ್ಲಿ ಹೊಸಬಾಂಬ್ ವೊಂದನ್ನು ಸಿಡಿಸಿದ್ದಾರೆ. ಮೇಲ್ಮನೆ ಸ್ಥಾನಕ್ಕೇರುವ ಮೊದಲು ಬಿಜೆಪಿಯ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಗೆ ಸೇರಿಸಿಕೊಳ್ಳಿ ಎಂದು ಮನವಿ ಮಾಡಿದ್ದರು ಎಂದು ಹೇಳಿಕೆ ನೀಡಿದ್ದಾರೆ.

ಡಿ.ಕೆ.ಶಿ ಹಾಗೂ ಕುಮಾರಸ್ವಾಮಿ ಅನುಕೂಲಕ್ಕೆ ತಕ್ಕಂತೆ ರಾಜಕಾರಣ ಮಾಡುತ್ತಾರೆ ಎಂದು ಸಿ.ಪಿ.ಯೋಗೇಶ್ವರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿರುವ ಶಿವಕುಮಾರ್, ಹದಿನೈದು ದಿನಗಳ ಹಿಂದೆ ಸಿ.ಪಿ.ಯೋಗೇಶ್ವರ್, ತಮ್ಮನ್ನು ಭೇಟಿಯಾಗಿ ಯಡಿಯೂರಪ್ಪ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುತ್ತಾರೆ. 

ಹೀಗಾಗಿ ಕಾಂಗ್ರೆಸ್ ಸೇರಲು ಇಚ್ಛಿಸಿದ್ದೇನೆ. ಪಕ್ಷಕ್ಕೆ ಸೇರ್ಪಡೆ ಮಾಡಿಕೊಳ್ಳುವಂತೆ ಮನವಿ ಮಾಡಿದ್ದರು. ಇದಕ್ಕೆ ಒಪ್ಪದ ತಾವು ಬಿಜೆಪಿಯಲ್ಲಿಯೇ ನಿಯತ್ತಾಗಿ ಇರುವುಂತೆ ತಿಳಿಹೇಳಿದ್ದೆ. ಆದರೆ ಈಗ ಏಕೆ ನಮ್ಮ ಬಗ್ಗೆ ಹೀಗೆ ಮಾತನಾಡಿದ್ದಾರೆಯೋ ಗೊತ್ತಿಲ್ಲ. ಆಗ ಮನವಿ ಮಾಡಿ ಈಗ ನನ್ನ ವಿರುದ್ಧ ಮಾತನಾಡುತ್ತಿರುವ ಸಿ.ಪಿ.ಯೋಗೇಶ್ವರ್ ಗೆ ಬುದ್ಧಿ ಸ್ಥಿಮಿತದಲ್ಲಿ ಇಲ್ಲದಂತೆ ಕಾಣುತ್ತದೆ ಎಂದು ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com