ಚೀನಾದೊಂದಿಗಿನ ಗಡಿ ಪರಿಸ್ಥಿತಿ ಸರಿಪಡಿಸಲಾಗದಷ್ಟು ಮೀರಿ ಹೋಗಿದೆ: ಹೆಚ್ ಡಿ ದೇವೇಗೌಡ

ಭಾರತ-ಚೀನಾ ಗಡಿಭಾಗದಿಂದ ಸೇನಾಪಡೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲು ಎರಡೂ ದೇಶಗಳು ಒಪ್ಪಿಗೆ ಸೂಚಿಸಿ ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತಿಗೆ ಮುಂದಾಗಿರುವ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಗಡಿಯಲ್ಲಿ ಮುಂದಿನ ದಿನಗಳಲ್ಲಿ ಶಾಂತಿ ನೆಲೆಸಬಹುದು ಎಂಬ ನಿಲುವು ಮತ್ತು ಅಂದಾಜಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.
ಹೆಚ್ ಡಿ ದೇವೇಗೌಡ
ಹೆಚ್ ಡಿ ದೇವೇಗೌಡ

ಬೆಂಗಳೂರು: ಭಾರತ-ಚೀನಾ ಗಡಿಭಾಗದಿಂದ ಸೇನಾಪಡೆಗಳನ್ನು ಸಂಪೂರ್ಣವಾಗಿ ಹಿಂತೆಗೆದುಕೊಳ್ಳಲು ಎರಡೂ ದೇಶಗಳು ಒಪ್ಪಿಗೆ ಸೂಚಿಸಿ ಆ ನಿಟ್ಟಿನಲ್ಲಿ ಕಾರ್ಯಪ್ರವೃತ್ತಿಗೆ ಮುಂದಾಗಿರುವ ಸಂದರ್ಭದಲ್ಲಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಗಡಿಯಲ್ಲಿ ಮುಂದಿನ ದಿನಗಳಲ್ಲಿ ಶಾಂತಿ ನೆಲೆಸಬಹುದು ಎಂಬ ನಿಲುವು ಮತ್ತು ಅಂದಾಜಿನ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.

ಇಂದು ಭಾರತ-ಚೀನಾ ಗಡಿಭಾಗದ ಪರಿಸ್ಥಿತಿ ಸರಿಪಡಿಸಲಾಗದಷ್ಟು ಮೀರಿ ಹೋಗಿದೆ. ಇಲ್ಲಿ ನಾನು ಬೆಂಗಳೂರಿನಲ್ಲಿ ಕುಳಿತುಕೊಂಡು ಅಲ್ಲಿನ ವಾಸ್ತವ ಸ್ಥಿತಿಗತಿ ಬಗ್ಗೆ ಮಾತನಾಡಲು ಸಾಧ್ಯವಿಲ್ಲ. ಆದರೂ ಈ ವಿಷಯ ಕಗ್ಗಂಟಾಗಿ ಹೋಗಿರುವುದಂತೂ ಸತ್ಯ ಎಂದು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ಹೇಳಿದ್ದಾರೆ.

ಭಾರತೀಯ ಸೈನಿಕರ ಮೇಲೆ ದಾಳಿ ನಡೆಸಿ 20 ಮಂದಿ ಯೋಧರು ಹುತಾತ್ಮರಾಗಿರುವ ಬಗ್ಗೆ ಮಾತನಾಡಿದ ಅವರು, ಚೀನಾದ ಕೃತ್ಯ ಹೇಡಿತನದ್ದು, ಈ ಘರ್ಷಣೆ ಏಕಾಯಿತು, ಹೇಗಾಯಿತು ಎಂದು ಹಲವಾರು ಪ್ರಶ್ನೆಗಳು ಉದ್ಭವಿಸುತ್ತವೆ. ಎರಡೂ ದೇಶಗಳು ಮಾಡಿಕೊಂಡಿರುವ ನಿರ್ಧಾರಗಳ ಬಗ್ಗೆ ಪ್ರಶ್ನೆಗಳು ಏಳುತ್ತವೆ. ನಮ್ಮ ಸೈನಿಕರು ಖಾಲಿ ಕೈಯಲ್ಲಿ ಏಕೆ ಹೋದರು, ಆ ನಿರ್ಧಾರ ತೆಗೆದುಕೊಂಡವರು ಯಾರು, ಗುಪ್ತಚರ ಮಾಹಿತಿ ಪಡೆಯಲು ಮೊದಲು ಸಣ್ಣ ತಂಡವನ್ನು ಕಳುಹಿಸಬೇಕಾಗಿತ್ತಲ್ಲವೇ, ಹೀಗೆ ಹತ್ತಾರು ಪ್ರಶ್ನೆಗಳನ್ನು ಹುಟ್ಟುಹಾಕುವ ಈ ವಿಚಾರ ನಿಜಕ್ಕೂ ಗಂಭೀರವಾದದ್ದು ಎಂದರು.

ದೇವೇಗೌಡರು ಪ್ರಧಾನಿಯಾಗಿದ್ದಾಗ 1996ರಲ್ಲಿ ಎರಡೂ ದೇಶಗಳ ಮಧ್ಯೆ ಗಡಿಯಲ್ಲಿ ಯುದ್ಧ, ಸಂಘರ್ಷ ಮಾಡದೆ ಶಾಂತಿ ಸ್ಥಾಪನೆಗೆ ಮಾತುಕತೆ ಮೂಲಕ ಭಿನ್ನಾಭಿಪ್ರಾಯ ಬಗೆಹರಿಸಿಕೊಳ್ಳಲು ಒಪ್ಪಂದ ಮಾಡಿಕೊಳ್ಳಲಾಗಿತ್ತು. ಅದೇ ರೀತಿ ಒಪ್ಪಂದ ಪ್ರಕಾರ ಶಸ್ತ್ರಸಜ್ಜಿತವಾಗಿ ಯುದ್ಧ ಮಾಡುವಂತೆ ಕೂಡ ಇಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com