120 ಅಡಿ ಎತ್ತರದ ವಿವೇಕಾನಂದರ ಪ್ರತಿಮೆ ಸ್ಥಾಪನೆ: ಕಾಂಗ್ರೆಸ್-ಬಿಜೆಪಿ ಜಟಾಪಟಿ

ಗುಜರಾತ್‌ನಲ್ಲಿರುವ ಸರ್ದಾರ್‌ ವಲ್ಲಭ ಬಾಯ್‌ ಪ್ರತಿಮೆ ಮಾದರಿಯಲ್ಲಿ ಆನೇಕಲ್ ಸಮೀಪ ಮುತ್ಯಾಲಮಡುವಿನಲ್ಲಿ 120 ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆ ನಿರ್ಮಿಸಲು ಉದ್ದೇಶಿಸಲಾಗಿದೆ’ ಎಂದು ವಸತಿ ಸಚಿವ ಸೋಮಣ್ಣ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಆಕ್ಷೇಪಿಸಿದೆ.
ಸ್ವಾಮಿ ವಿವೇಕಾನಂದ
ಸ್ವಾಮಿ ವಿವೇಕಾನಂದ

ಬೆಂಗಳೂರು: ಗುಜರಾತ್‌ನಲ್ಲಿರುವ ಸರ್ದಾರ್‌ ವಲ್ಲಭ ಬಾಯ್‌ ಪ್ರತಿಮೆ ಮಾದರಿಯಲ್ಲಿ ಆನೇಕಲ್ ಸಮೀಪ ಮುತ್ಯಾಲಮಡುವಿನಲ್ಲಿ 120 ಅಡಿ ಎತ್ತರದ ಸ್ವಾಮಿ ವಿವೇಕಾನಂದರ ಪ್ರತಿಮೆ ನಿರ್ಮಿಸಲು ಉದ್ದೇಶಿಸಲಾಗಿದೆ’ ಎಂದು ವಸತಿ ಸಚಿವ ಸೋಮಣ್ಣ ನೀಡಿರುವ ಹೇಳಿಕೆಗೆ ಕಾಂಗ್ರೆಸ್ ಆಕ್ಷೇಪಿಸಿದೆ.

ಮುತ್ಯಾಲಮಡುವಿನಲ್ಲಿ 180 ಎಕರೆ ಜಮೀನಿದ್ದು, ಈ ಪ್ರದೇಶವನ್ನು ಪ್ರವಾಸೋದ್ಯಮ ಕೇಂದ್ರವಾಗಿ ಅಭಿವೃದ್ಧಿಪಡಿಸಲು ಉದ್ದೇಶಿಸಲಾಗಿದೆ. ರಾಷ್ಟ್ರೀಯ ಉದ್ಯಾನ ಬನ್ನೇರುಘಟ್ಟದಿಂದ 10ರಿಂದ 12 ಕಿ.ಮೀ ದೂರದಲ್ಲಿ ಈ ಜಾಗವಿದೆ. ಪ್ರತಿಮೆ ನಿರ್ಮಾಣ ಯೋಜನೆ ಪ್ರಾಥಮಿಕ ಹಂತದಲ್ಲಿದೆ. ಹೀಗಾಗಿ, ಎಷ್ಟು ವೆಚ್ಚ ತಗಲಬಹುದೆಂಬ ಬಗ್ಗೆ ಅಂತಿಮಗೊಂಡಿಲ್ಲ‘ ಎಂದು ತಿಳಿಸಿದ್ದಾರೆ.

ಬೆಂಗಳೂರಿನಿಂದ ಸುಮಾರು 40 ಕಿಮೀ ದೂರದಲ್ಲಿರುವ ಪಿಯರ್ಲ್ ವ್ಯಾಲಿ ಬಳಿಯ ಮುತ್ಯಾಲ ಮಡು ಜಲಪಾತ ಬಳಿ ವಿವೇಕಾನಂದರ ವಿಗ್ರಹ ಸ್ಥಾಪನೆ ವಿಚಾರ ಹೊಸ ಯೋಜನೆ ಅಲ್ಲ,  ಇದು ಹಳೇಯ ಯೋಜನೆ, ಕೆಎಚ್ ಬಿ ಲೇಔಟ್ ಅಭಿವೃದ್ಧಿಯ ವೇಳೆ ಪ್ರವಾಸಿಗರನ್ನು ಆಕರ್ಷಿಸಲು ಈ ಯೋಜನೆಗೆ ನಿರ್ಧರಿಸಲಾಗಿತ್ತು ಎಂಜದು ಸೋಮಣ್ಣ ಸ್ಪಷ್ಟೀಕರಿಸಿದ್ದಾರೆ.

ಈ ಬಗ್ಗೆ ಆಕ್ಷೇಪ ವ್ಯಕ್ತಪಡಿಸಿರುವ ಕೆಪಿಸಿಸಿ ನಿಯೋಜಿತ ಅಧ್ಯಕ್ಷ ಡಿ.ಕೆ. ಶಿವಕುಮಾರ್, ಸ್ವಾಮಿ ವಿವೇಕಾನಂದರ ಪ್ರತಿಮೆ ನಿರ್ಮಿಸಲು ನಮ್ಮ ವಿರೋಧವಿಲ್ಲ. ಆದರೆ, ಈ ಕೊರೋನಾ ಸಂಕಷ್ಟಕರ ಪರಿಸ್ಥಿತಿಯಲ್ಲಿ ಪ್ರತಿಮೆ ನಿರ್ಮಿಸುವುದು ಸರಿಯಲ್ಲ ಎಂದು ಹೇಳಿದ್ದಾರೆ. ರಾಜ್ಯದಲ್ಲಿ ಕೊರೋನಾ ಪರಿಸ್ಥಿತಿ ತೀರಾ ಹದಗೆಟ್ಟಿದೆ. ರಾಜ್ಯ ಸರ್ಕಾರದ ಆರ್ಥಿಕ ಸ್ಥಿತಿಯೂ ಚೆನ್ನಾಗಿಲ್ಲ. ಹೀಗಾಗಿ, ಸರ್ಕಾರ ಮೊದಲು ಆ ಬಗ್ಗೆ ಗಮನ ನೀಡಲಿ. ಈ ಕೊರೋನಾ ಸಂಕಷ್ಟ ಮುಗಿದ ಬಳಿಕ ವಿವೇಕಾನಂದ ಪ್ರತಿಮೆ ನಿರ್ಮಾಣ ಮಾಡಲಿ ಎಂದಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com