ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂನ್ 19 ರಂದು ಚುನಾವಣೆ: ಅಧಿಸೂಚನೆ ಜಾರಿ

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇದೇ 19ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ರಾಜ್ಯ ವಿಧಾನಸಭೆ ಕಾರ್ಯದರ್ಶಿ ಅವರು ಅಧಿಸೂಚನೆ ಹೊರಡಿಸಿದ್ದಾರೆ. 

Published: 02nd June 2020 06:15 PM  |   Last Updated: 02nd June 2020 07:06 PM   |  A+A-


Elections to 4 Rajyasabha seats from Karnataka on June 19: EC

ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಜೂ 19 ರಂದು ಚುನಾವಣೆ: ಅಧಿಸೂಚನೆ ಜಾರಿ

Posted By : srinivasrao
Source : UNI

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಇದೇ 19ರಂದು ನಡೆಯಲಿರುವ ದ್ವೈವಾರ್ಷಿಕ ಚುನಾವಣೆಗೆ ರಾಜ್ಯ ವಿಧಾನಸಭೆ ಕಾರ್ಯದರ್ಶಿ ಅವರು ಅಧಿಸೂಚನೆ ಹೊರಡಿಸಿದ್ದಾರೆ. 

ಬಿಜೆಪಿಯ ಪ್ರಭಾಕರ ಕೋರೆ, ಕಾಂಗ್ರೆಸ್ ನ ಬಿ.ಕೆ. ಹರಿಪ್ರಸಾದ್, ಎಂ.ವಿ. ರಾಜೀವ್ ಗೌಡ ಹಾಗೂ ಜೆಡಿಎಸ್ ನ ಡಿ. ಕುಪೇಂದ್ರರೆಡ್ಡಿ ಅವರ ನಿವೃತ್ತಿಯಿಂದ ತೆರವಾಗುತ್ತಿರುವ ಸ್ಥಾನಗಳಿಗೆ ಚುನಾವಣೆ ನಡೆಯಲಿದೆ ಎಂದು ವಿಧಾನಸಭೆ ಕಾರ್ಯದರ್ಶಿಯೂ ಆದ ಚುನಾವಣಾಧಿಕಾರಿ ಎಂ.ಕೆ. ವಿಶಾಲಾಕ್ಷಿ ತಿಳಿಸಿದ್ದಾರೆ. ಕೇಂದ್ರ ಚುನಾವಣಾ ಆಯೋಗದ ವೇಳಾಪಟ್ಟಿಗೆ ಅನುಗುನವಾಗಿ ಅಧಿಸೂಚನೆ ಜಾರಿಯಾಗಿದ್ದು, ಇಂದಿನಿಂದಲೇ ಉಮೇದುವಾರಿಕೆ ಸಲ್ಲಿಕೆ ಆರಂಭವಾಗಲಿದೆ. 

ನಾಮಪತ್ರ ಸಲ್ಲಿಸಲು ಇದೇ 9 ಕಡೆಯ ದಿನವಾಗಿದೆ. ಮರುದಿನ ಪರಿಶೀಲನೆ ನಡೆಯಲಿದ್ದು, 12 ರಂದು ನಾಮಪತ್ರ ಹಿಂಪಡೆಯಲು ಕಡೆ ದಿನವಾಗಿದೆ. ಜೂನ್ 19 ರಂದು ಬೆಳಿಗ್ಗೆ 9 ರಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದ್ದು, ಅದೇ ದಿನ ಫಲಿತಾಂಶ ಪ್ರಕಟವಾಗಲಿದೆ ಎಂದು ಕೆ.ಎಂ. ವಿಶಾಲಾಕ್ಷಿ ತಿಳಿಸಿದ್ದಾರೆ.

Stay up to date on all the latest ರಾಜಕೀಯ news
Poll
Narendra Singh Tomar

ಕೃಷಿ ಕಾನೂನು ಸಂಬಂಧ ರೈತರು ಮತ್ತು ಕೇಂದ್ರದ ನಡುವಣ ಬಿಕ್ಕಟ್ಟಿಗೆ ಹೊರಗಿನ ಶಕ್ತಿಗಳು ಕಾರಣ ಎಂದು ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್‌ ಹೇಳಿದ್ದಾರೆ.


Result
ಹೌದು
ಇಲ್ಲ
flipboard facebook twitter whatsapp