ರಾಜ್ಯಸಭೆ ಚುನಾವಣೆ: ಖರ್ಗೆ, ದೇವೇಗೌಡ ಬಹುತೇಕ ಖಚಿತ, ಪ್ರಭಾಕರ ಕೋರೆಗೆ ಮತ್ತೊಂದು ಅವಕಾಶ ಸಾಧ್ಯತೆ

ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಈ ತಿಂಗಳ 19 ರಂದು ನಡೆಯಲಿರುವ ದೈವಾರ್ಷಿಕ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿಗಳು ಸ್ಪರ್ಧಿಸಲಿದ್ದು, ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ  ಖರ್ಗೆ ಮೇಲ್ಮನೆ ಪ್ರವೇಶಿಸುವುದು ಬಹತೇಕ ಖಚಿತವಾಗಿದೆ. 
ಖರ್ಗೆ-ದೇವೇಗೌಡ (ಸಂಗ್ರಹ ಚಿತ್ರ)
ಖರ್ಗೆ-ದೇವೇಗೌಡ (ಸಂಗ್ರಹ ಚಿತ್ರ)

ಬೆಂಗಳೂರು: ರಾಜ್ಯ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಈ ತಿಂಗಳ 19 ರಂದು ನಡೆಯಲಿರುವ ದೈವಾರ್ಷಿಕ ಚುನಾವಣೆಯಲ್ಲಿ ಈ ಬಾರಿ ಘಟಾನುಘಟಿಗಳು ಸ್ಪರ್ಧಿಸಲಿದ್ದು, ಇದೇ ಮೊದಲ ಬಾರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹಾಗೂ ಹಿರಿಯ ಕಾಂಗ್ರೆಸ್ ಮುಖಂಡ ಮಲ್ಲಿಕಾರ್ಜುನ  ಖರ್ಗೆ ಮೇಲ್ಮನೆ ಪ್ರವೇಶಿಸುವುದು ಬಹತೇಕ ಖಚಿತವಾಗಿದೆ. 

ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆ ಅವರನ್ನು ರಾಜ್ಯಸಭೆಗೆ ಕಳುಹಿಸಲು ಕಾಂಗ್ರೆಸ್ ಹೈಕಮಾಂಡ್ ತೀರ್ಮಾನಿಸಿದ್ದು, ಇದೇ ಸಂದರ್ಭದಲ್ಲಿ ಎಚ್ ಡಿ ದೇವೇಗೌಡರನ್ನು ಸಹ ಬೆಂಬಲಿಸಲು ಚಿಂತನೆ ನಡೆಸಿದೆ. ರಾಜ್ಯಸಭೆಯಲ್ಲಿ ಪ್ರತಿಪಕ್ಷಗಳ ಧ್ವನಿ ಗಟ್ಟಿಗೊಳಿಸಲು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ  ಉದ್ದೇಶವಾಗಿದೆ. ಇದು ದೇವೇ ಗೌಡರಿಗೆ ವರದಾನವಾಗಲಿದೆ. ಇನ್ನು ಸೋಲಿಲ್ಲದ ಸರದಾರ ಎಂದು ಗುರುತಿಸಿಕೊಂಡಿದ್ದ ಖರ್ಗೆ ಕಳೆದ ಲೋಕಸಭೆ ಚುನಾವಣೆಯಲ್ಲಿ ಪರಾಭವಗೊಂಡಿದ್ದರು. ಮೇಲ್ಮನೆಗೆ ಇದೇ ಮೊದಲ ಬಾರಿಗೆ ಸ್ಪರ್ಧಿಸುತ್ತಿದ್ದಾರೆ. ದೇವೇಗೌಡ ಅವರು ಸಹ ಖರ್ಗೆ ಅವರಂತೆ ಸೋತಿದ್ದು, ಮೊದಲ  ಬಾರಿಗೆ ಮೇಲ್ಮನೆಗೆ ಸ್ಪರ್ಧಿಸಲು ಅಣಿಯಾಗುತ್ತಿದ್ದಾರೆ. ಬಿಜೆಪಿಯಲ್ಲಿ ಪ್ರಭಾಕರ ಕೋರೆ ಅವರಿಗೆ ಮತ್ತೊಂದು ಅವಧಿಗೆ ಅವಕಾಶ ನೀಡಲು ಚಿಂತನೆ ನಡೆದಿದೆ. ಇನ್ನೊಂದು ಸ್ಥಾನಕ್ಕೆ ಯುವ ಹಾಗೂ ಡಾರ್ಕ್ ಹಾರ್ಸ್ ಗಾಗಿ ಪಕ್ಷದ ವರಿಷ್ಠರು ಹುಡುಕಾಟ ನಡೆಸುತ್ತಿದ್ದಾರೆ. ಆರ್.ಎಸ್.ಎಸ್. ಹಿನ್ನೆಲೆಯ ವ್ಯಕ್ತಿಯೊಬ್ಬರನ್ನು  ರಾಜ್ಯಸಭೆಗೆ ಕಳುಹಿಸುವ ಸಾಧ್ಯತೆಯಿದೆ. 

ರಾಜ್ಯಸಭೆ ಸ್ಥಾನಕ್ಕಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಮೇಲೆ ಒತ್ತಡ ಹೇರುತ್ತಿರುವ ರಮೇಶ್ ಕತ್ತಿ ಸೇರಿದಂತೆ ಯಾರಿಗೂ ಅವಕಾಶ ಸಿಗುವ ಸಾಧ್ಯತೆಗಳು ಕ್ಷೀಣಿಸಿವೆ. ವರಿಷ್ಠರು ಯಾರಿಗೂ ಸೊಪ್ಪು ಹಾಕುವುದಿಲ್ಲ ಎಂದು ಬಿಜೆಪಿ ಮೂಲಗಳು ಹೇಳಿವೆ. ಈಗಿರುವ ಸಂಖ್ಯಾಬಲದ ಆಧಾರದ ಮೇಲೆ  ಕಾಂಗ್ರೆಸ್ ಗೆ 1, ಬಿಜೆಪಿಗೆ 2 ಸ್ಥಾನಗಳು ದೊರೆಯುವುದು ಬಹುತೇಕ ಖಚಿತವಾಗಿದ್ದು, ಮತ್ತೊಂದು ಸ್ಥಾನಕ್ಕಾಗಿ ಕಾಂಗ್ರೆಸ್ – ಜೆಡಿಎಸ್ ನಡುವೆ ಹೊಂದಾಣಿಕೆ ಮಾಡಿಕೊಳ್ಳಬೇಕಾದ ಅನಿವಾರ್ಯತೆ ಎದುರಾಗಲಿದೆ.  ಜೆಡಿಎಸ್ ನ ಕುಪೇಂದ್ರ ರೆಡ್ಡಿ, ಬಿಜೆಪಿಯ ಪ್ರಭಾಕರ್ ಕೋರೆ, ಕಾಂಗ್ರೆಸ್ ನ ರಾಜೀವ್ ಗೌಡ,  ಬಿ.ಕೆ.ಹರಿಪ್ರಸಾದ್ ನಿವೃತ್ತಿಯಾಗುತ್ತಿದ್ದಾರೆ. ಇವರ ಸ್ಥಾನಗಳಿಗೆ ಈಗ ಚುನಾವಣೆ ನಡೆಯಲಿದೆ. ನಾಮ ಪತ್ರ ಸಲ್ಲಿಕೆಗೆ ಜೂನ್ ೯ ಕೊನೆಯ ದಿನವಾಗಿದ್ದು, ರಾಜಕೀಯ ಚಟುವಟಿಕೆ ಗರಿಗೆದರಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com