ರಾಜ್ಯಸಭೆ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ: ಕೋರೆ-ಕತ್ತಿಗೆ ಸಿಗದ ಟಿಕೆಟ್

ಬಳ್ಳಾರಿ ಬಿಜೆಪಿ ವಿಭಾಗದ ಪ್ರಬಾರಿ ಆಗಿರುವ ಅಶೋಕ್ ಗಸ್ತಿ, ಬೆಳಗಾವಿ ಬಿಜೆಪಿ ವಿಭಾಗದ ಪ್ರಭಾರಿ ಈರಣ್ಣ ಕಡಾಡಿ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. 
ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ
ಅಶೋಕ್ ಗಸ್ತಿ ಮತ್ತು ಈರಣ್ಣ ಕಡಾಡಿ

ಬೆಂಗಳೂರು: ರಾಜ್ಯಸಭೆ ಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಹೆಸರು ಪ್ರಕಟಿಸಿದ್ದು, ಉತ್ತರ ಕರ್ನಾಟಕದ ಅಭ್ಯರ್ಥಿಗಳಿಗೆ ಮಣೆ ಹಾಕಿದೆ.

ಬಳ್ಳಾರಿ ಬಿಜೆಪಿ ವಿಭಾಗದ ಪ್ರಬಾರಿ ಆಗಿರುವ ಅಶೋಕ್ ಗಸ್ತಿ, ಬೆಳಗಾವಿ ಬಿಜೆಪಿ ವಿಭಾಗದ ಪ್ರಭಾರಿ ಈರಣ್ಣ ಕಡಾಡಿ ಅವರಿಗೆ ಬಿಜೆಪಿ ಟಿಕೆಟ್ ಘೋಷಿಸಿದೆ. ಜೂನ್ 19 ರಂದು ನಡೆಯುವ ನಾಲ್ಕು ರಾಜ್ಯಸಭೆ ಚುನಾವಣೆ ನಡೆಯಲಿದ್ದು, ಕಾಂಗ್ರೆಸ್ ಮತ್ತು ಜೆಡಿಎಸ್ ಈಗಾಗಲೇ ಅಭ್ಯರ್ಥಿಗಳನ್ನು ಘೋಷಿಸಿದೆ.

ರಾಯಚೂರಿನವರಾದ ಅಶೋಕ್ ಗಸ್ತಿ ಸವಿತಾ ಸಮಾಜಕ್ಕೆ ಸೇರಿದವರು. ಹಾಗೂ ಬೆಳಗಾವಿಯವರಾದ ಈರಣ್ಣ ಕಡಾಡಿ ಲಿಂಗಾಯತ ಸಮುದಾಯಕ್ಕೆ ಸೇರಿದವರಾಗಿದ್ದಾರೆ. ವಿಶೇಷ ಅಂದರೆ ಇವರಿಬ್ಬರು ಉತ್ತರ ಕರ್ನಾಟಕಕ್ಕೆ ಸೇರಿದವರು.

ರಾಜ್ಯ ಸಭೆ ಚುನಾವಣೆ ಟಿಕೆಟ್ ನ ಪ್ರಬಲ ಆಕಾಂಕ್ಷಿಗಳಾಗಿದ್ದ ಹಾಲಿ ಸದಸ್ಯ ಪ್ರಭಾಕರ ಕೋರೆ ಮತ್ತು ರಮೇಶ್ ಕತ್ತಿ ಮತ್ತು ಪ್ರಕಾಶ್ ಶೆಟ್ಟಿ ಅವರಿಗೆ ಟಿಕೆಟ್ ಕೈತಪ್ಪಿದೆ, ವಿಧಾನಸಭೆಯಲ್ಲಿ 117 ಶಾಸಕರ ಬಲ ಹೊಂದಿರುವ ಬಿಜೆಪಿ 2 ಸ್ಥಾನದಲ್ಲಿ ಸುಲಭವಾಗಿ ಜಯಗಳಿಸಲಿದೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com