ರಾಜ್ಯ ವಿಧಾನ ಪರಿಷತ್ ಚುನಾವಣೆ ದಿನಾಂಕ ಪ್ರಕಟ, ಜೂನ್ 29ರಂದು ಮತದಾನ

ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು ಜೂನ್ 29ಕ್ಕೆ 7 ಸ್ಥಾನಕ್ಕಾಗಿ ಮತದಾನ ನಡೆಯಲಿದೆ. 
ರಾಜ್ಯ ವಿಧಾನ ಪರಿಷತ್ ಚುನಾವಣೆ ದಿನಾಂಕ ಪ್ರಕಟ, ಜೂನ್ 29ರಂದು ಮತದಾನ

ಬೆಂಗಳೂರು: ಕರ್ನಾಟಕ ರಾಜ್ಯ ವಿಧಾನ ಪರಿಷತ್ ಚುನಾವಣೆಗೆ ದಿನಾಂಕ ಪ್ರಕಟವಾಗಿದ್ದು ಜೂನ್ 29ಕ್ಕೆ 7 ಸ್ಥಾನಕ್ಕಾಗಿ ಮತದಾನ ನಡೆಯಲಿದೆ.

ಚುನಾವಣಾ ಆಯೋಗ ವಿಧಾನ ಪರಿಷತ್ ಚುನಾವಣೆ ದಿನಾಂಕ ನಿಗದಿಪಡಿಸಿ ಆದೇಶ ಹೊರಡಿಸಿದೆ. ಜೂನ್ 29ರಂದು ಮತದಾನ ನಡೆದು ಅಂದು ಸಂಜೆಯೇ ಫಲಿತಾಂಶ ಘೋಷಣೆಯಾಗಲಿದೆ.

ಜೂನ್ 11ಕ್ಕೆ ಅಧಿಸೂಚನೆ ಹೊರಬೀಳಲಿದ್ದು ಜೂನ್ 18 ನಾಮಪತ್ರ ಸಲ್ಲಿಕೆಗೆ ಕಡೇ ದಿನವಾಗಿರಲಿದೆ/

ಜೂನ್ 19 ನಾಮಪತ್ರಗಳ ಪರಿಶೀಲನೆ ನಡೆದರೆ 22 ನಾಮಪತ್ರ ಹಿಂಪಡೆಯಲು ಕಡೇ ದಿನ. 29ರಂದು ಮತದಾನ ನೆರವೇರಲಿದೆ.

ವಿಧಾನ ಸಭೆಯಿಂದ ಆಯ್ಕೆಗೊಂಡ ಪರಿಷತ್ ಸದಸ್ಯರಾದ ನಜೀರ್‌ ಅಹಮ್ಮದ್‌, ಜಯಮ್ಮ, ಎಂ.ಸಿ. ವೇಣುಗೋಪಾಲ್‌, ಎನ್‌.ಎಸ್‌. ಬೋಸರಾಜು, ಎಚ್‌.ಎಂ. ರೇವಣ್ಣ, ಟಿ.ಎ. ಸರವಣ ಹಾಗೂ ಡಿ.ಯು. ಮಲ್ಲಿಕಾರ್ಜುನ ಅವರುಗಳ ಅವಧಿ ಪೂರ್ಣವಾಗುವ ಹಿನ್ನೆಲೆ ಆ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಸಂಖ್ಯಾಬಲ ಆಧಾರವನ್ನು ಹಿನ್ನೆಲೆಯಾಗಿಟ್ಟು ಹೇಳಿದರೆ ಬಿಜೆಪಿ 4, ಕಾಂಗ್ರೆಸ್ 2, ಜೆಡಿಎಸ್ 1 ಸ್ಥಾನವನ್ನು ತಮ್ಮದಾಗಿಸಿಕೊಳ್ಳಲಿದೆ.

ಇದಕ್ಕೆ ಮುನ್ನ ಶಿಕ್ಷಕರ ಕ್ಷೇತ್ರ ಮತ್ತು ಪದವೀಧರ ಕ್ಷೇತ್ರಗಳ ಚುನಾವಣೆ ಮುಂದೂಡಿ ಚುನಾವಣಾ ಆಯೋಗ ಆದೇಶ ಹೊರಡಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com