ವಿಧಾನ ಪರಿಷತ್ ಚುನಾವಣೆ:ಅಭ್ಯರ್ಥಿಗಳ ಹೆಸರುಗಳನ್ನು ನಾಳೆ ಅಂತಿಮಗೊಳಿಸಲಿರುವ ಬಿಜೆಪಿ

ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲು ಬಿಜೆಪಿ ಕೋರ್ ಸಮಿತಿ ನಾಳೆ ಅಪರಾಹ್ನ 4 ಗಂಟೆಗೆ ಸಭೆ ಸೇರಲಿದ್ದು ಅಲ್ಲಿ ಸೂಚಿತ ಹೆಸರುಗಳನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಿದೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಶಿವಮೊಗ್ಗ: ವಿಧಾನಪರಿಷತ್ ಚುನಾವಣೆಗೆ ಅಭ್ಯರ್ಥಿಗಳ ಹೆಸರನ್ನು ಅಖೈರುಗೊಳಿಸಲು ಬಿಜೆಪಿ ಕೋರ್ ಸಮಿತಿ ನಾಳೆ ಅಪರಾಹ್ನ 4 ಗಂಟೆಗೆ ಸಭೆ ಸೇರಲಿದ್ದು ಅಲ್ಲಿ ಸೂಚಿತ ಹೆಸರುಗಳನ್ನು ಕೇಂದ್ರ ಚುನಾವಣಾ ಸಮಿತಿಗೆ ಕಳುಹಿಸಲಿದೆ ಎಂದು ಬಿಜೆಪಿ ಹಿರಿಯ ನಾಯಕ ಮತ್ತು ಗ್ರಾಮೀಣಾಭಿವೃದ್ಧಿ ಸಚಿವ ಕೆ ಎಸ್ ಈಶ್ವರಪ್ಪ ತಿಳಿಸಿದ್ದಾರೆ.

ಕಾಂಗ್ರೆಸ್ ಮತ್ತು ಜೆಡಿಎಸ್ ತೊರೆದು ಬಿಜೆಪಿ ಸೇರಿ ರಾಜ್ಯದಲ್ಲಿ ಪಕ್ಷ ಅಧಿಕಾರಕ್ಕೆ ಬರಲು ಕಾರಣಕರ್ತರಾದವರಿಗೆ ಈ ಬಾರಿ ವಿಧಾನ ಪರಿಷತ್ ಚುನಾವಣೆಗೆ ಸ್ಪರ್ಧಿಸಲು ಟಿಕೆಟ್ ಕೊಡುವ ಸಾಧ್ಯತೆ ಹೆಚ್ಚಳವಾಗಿದೆ. ಅಲ್ಲದೆ ದೀರ್ಘ ವರ್ಷಗಳಿಂದ ಪಕ್ಷಕ್ಕಾಗಿ ಶ್ರಮಿಸಿದ ಕಾರ್ಯಕರ್ತರನ್ನು ಕಡೆಗಣಿಸುವಂತಿಲ್ಲ. ಇಬ್ಬರಿಗೂ ಅವಕಾಶ ನೀಡಬೇಕಾದ ಅವಶ್ಯಕತೆಯಿದೆ ಎಂದು ಈಶ್ವರಪ್ಪ ಸುದ್ದಿಗಾರರಿಗೆ ತಿಳಿಸಿದ್ದಾರೆ.

ಈ ಬಾರಿ ಅಭ್ಯರ್ಥಿಗಳ ಆಯ್ಕೆ ರಾಜ್ಯದಲ್ಲಿ ಅಧಿಕಾರಕ್ಕೆ ಬರಲು ಕಾರಣರಾದವರಿಗೆ ಮತ್ತು ಕಾರ್ಯಕರ್ತರಿಗೆ ಇಬ್ಬರಿಗೂ ಸಮಾಧಾನ ತರಬಹುದೆಂದು ಭಾವಿಸಿದ್ದೇವೆ. ಪ್ರತಿಯೊಬ್ಬರಿಗೂ ಅವಕಾಶ ನೀಡುವ ಮೂಲಕ ಸರ್ಕಾರ ಮುಂದಿನ ಮೂರು ವರ್ಷಗಳ ಆಡಳಿತಾವಧಿಯನ್ನು ಪೂರ್ಣಗೊಳಿಸುವ ವಿಶ್ವಾಸವಿದೆ ಎಂದು ಹೇಳಿದರು.

ಸಾಮಾನ್ಯವಾಗಿ ಜಾತಿ ಮತ್ತು ಜಿಲ್ಲಾ ಪ್ರಾತಿನಿಧ್ಯ ಮೂಲಕ ವಿಧಾನ ಪರಿಷತ್ ನಲ್ಲಿ ಆಕಾಂಕ್ಷಿಗಳಿಗೆ ಟಿಕೆಟ್ ನೀಡುವುದು ಸಾಮಾನ್ಯ. ಕಾರ್ಯಕರ್ತರ ಜಾತಿಯನ್ನು ಬಿಜೆಪಿ ಪರಿಗಣಿಸುವುದಿಲ್ಲ, ಅವರ ಕೊಡುಗೆಗಳನ್ನು ಮಾತ್ರ ನೋಡುತ್ತದೆ ಎಂದು ಈಶ್ವರಪ್ಪ ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com