ಪದಗ್ರಹಣ ಕಾರ್ಯಕ್ರಮ; ಅಭಿಪ್ರಾಯ ಸಂಗ್ರಹಕ್ಕೆ ಮುಂದಾದ ಡಿ.ಕೆ.ಶಿವಕುಮಾರ್

ಜುಲೈ 2 ರಂದು ನಡೆಯಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ಸಂಬಂಧ ಪಕ್ಷದ ನಾಯಕರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಪದಗ್ರಹಣಕ್ಕೆ ಸ್ಪಂದನೆ ಹೇಗಿದೆ ಎಂಬುದನ್ನು ತಿಳಿಯಲು ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ.
ಡಿ.ಕೆ.ಶಿವಕುಮಾರ್
ಡಿ.ಕೆ.ಶಿವಕುಮಾರ್

ಬೆಂಗಳೂರು:  ಜುಲೈ 2 ರಂದು ನಡೆಯಲಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಪದಗ್ರಹಣ ಕಾರ್ಯಕ್ರಮ ಸಂಬಂಧ ಪಕ್ಷದ ನಾಯಕರು, ಕಾರ್ಯಕರ್ತರ ಅಭಿಪ್ರಾಯ ಸಂಗ್ರಹಿಸಿ ಪದಗ್ರಹಣಕ್ಕೆ ಸ್ಪಂದನೆ ಹೇಗಿದೆ ಎಂಬುದನ್ನು ತಿಳಿಯಲು ಸಮೀಕ್ಷೆ ನಡೆಸಲು ನಿರ್ಧರಿಸಲಾಗಿದೆ.

ಡಿ.ಕೆ.ಶಿವಕುಮಾರ್ ಖುದ್ದು ಸರ್ವೆ ನಡೆಸಲು ಮುಂದಾಗಿದ್ದು, ತಮ್ಮ ಆಪ್ತ ಬಳಗವನ್ನು ಎಲ್ಲ ಜಿಲ್ಲೆಗಳಿಗೆ ಕಳುಹಿಸಿದ್ದಾರೆ. ಪಕ್ಷದ ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿ ಪದಗ್ರಹಣಕ್ಕೆ ಸಿದ್ಧತೆ ನಡೆಸುವಂತೆ ಶಾಸಕಾಂಗ ಪಕ್ಷದ ಸಭೆಯಲ್ಲಿ ಸಿದ್ದರಾಮಯ್ಯ ಸೂಚನೆ ನೀಡಿದ್ದರಾದರೂ ಈ ಬಗ್ಗೆ ಡಿ.ಕೆ.ಶಿವಕುಮಾರೇ ಸ್ವತಃ ಆಸಕ್ತಿವಹಿಸಿ ಪದಗ್ರಹಣ ಕಾರ್ಯಕ್ರಮದ ಜಿಲ್ಲಾ ಮುಖಂಡರಿಂದ ತಯಾರಿ ಕುರಿತು ವರದಿ ತರಿಸಿಕೊಳ್ಳುತ್ತಿದ್ದಾರೆ.

ರಾಜ್ಯದ 10 ಸಾವಿರ ಸ್ಥಳಗಳಲ್ಲಿ ಪದಗ್ರಹಣ ಕಾರ್ಯಕ್ರಮ ನೇರಪ್ರಸಾರಕ್ಕೆ ಸಿದ್ಧತೆ ನಡೆದಿದೆಯಾದರೂ ಜಿಲ್ಲಾ ಮುಖಂಡರು ಇದನ್ನು ಗಂಭೀರವಾಗಿ ತೆಗೆದುಕೊಳ್ಳದಿರುವ ಬಗ್ಗೆ ಡಿ.ಕೆ ಶಿವಕುಮಾರ್ ಮಾಹಿತಿ ಕಲೆ ಹಾಕಿದ್ದು, ಪದಗ್ರಹಣ ಕಾರ್ಯಕ್ರಮ ಪಕ್ಷದ ಕಾರ್ಯಕ್ರಮ. ಪಕ್ಷ ಸಂಘಟನೆಯ ಕಾರ್ಯಕ್ರಮ. ಹೀಗಾಗಿ ಪಕ್ಷಕ್ಕಾಗಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಸೂಚನೆ ನೀಡಿದ್ದಾರೆ.

ರಾಜ್ಯದ ಎಲ್ಲ ಜಿಲ್ಲೆಗಳಿಂದ ಸಂಗ್ರಹಿಸಿದ ಮಾಹಿತಿಯ‌ ಮೇರೆಗೆ ಪದಗ್ರಹಣ ಕಾರ್ಯಕ್ರಮ ಸಂಬಂಧ ಡಿ.ಕೆ ಶಿವಕುಮಾರ್ ಇದೇ 22 ರಂದು ಮಾಜಿ ಪದಾಧಿಕಾರಿಗಳು, ಜಿಲ್ಲಾಧ್ಯಕ್ಷರ ಸಭೆ ಕರೆದಿದ್ದಾರೆ

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com