ಸಿಎಎ ಕುರಿತು ಕಾಂಗ್ರೆಸ್ ಹಿಂದು, ಮುಸ್ಲಿಮರ ನಡುವೆ ಒಡಕು ಮೂಡಿಸುತ್ತಿದೆ: ನಳಿನ್ ಕುಮಾರ್ ಕಟೀಲ್

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದನಿ ಎತ್ತುವ ಮೂಲಕ ಕಾಂಗ್ರೆಸ್ ಹಿಂದು ಹಾಗೂ ಮುಸ್ಲಿಮರ ನಡುವೆ ಒಡಕು ಮೂಡಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ ಹೇಳಿದ್ದಾರೆ. 
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್

ಹಾಸನ: ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ದನಿ ಎತ್ತುವ ಮೂಲಕ ಕಾಂಗ್ರೆಸ್ ಹಿಂದು ಹಾಗೂ ಮುಸ್ಲಿಮರ ನಡುವೆ ಒಡಕು ಮೂಡಿಸುತ್ತಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಭಾನುವಾರ ಹೇಳಿದ್ದಾರೆ. 

ಕಲಬುರಗಿ ಜಿಲ್ಲಾ ನೂತನ ಅಧ್ಯಕ್ಷರಾಗಿ ಹೆಚ್.ಕೆ.ಸುರೇಶ್ ಅವರು ಅಧಿಕಾರ ಸ್ವೀಕಾರ ಮಾಡಿದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿರುವ ಅವರು, ಸುಳ್ಳು ಹೇಳಿಕೆಯನ್ನು ನೀಡುವ ಮೂಲಕ ನಿರ್ದಿಷ್ಟ ಸಮುದಾಯದ ಜನರನ್ನು ಪ್ರಚೋದಿಸುವ ನಾಯಕರ ಬಗ್ಗೆ ಜನರಿಗೆ ಚೆನ್ನಾಗಿ ತಿಳಿದಿದೆ. ದೇಶದ ಹಿತಾಸಕ್ತಿಗಾಗಿಯೇ ವಿನಃ ಸಮುದಾಯದ ವಿರುದ್ಧ ಕೇಂದ್ರ ಸರ್ಕಾರ ಸಿಎಎ ಜಾರಿಗೆ ತಂದಿಲ್ಲ ಎಂದು ಹೇಳಿದ್ದಾರೆ. 

ಭಾರತದ ಅಲ್ಪಸಂಖ್ಯಾತರ ಮೇಲೆ ಸಿಎಎ ಯಾವುದೇ ಕಾರಣಕ್ಕೂ ಪರಿಣಾಮ ಬೀರುವುದಿಲ್ಲ. ದೆಹಲಿ ಹಿಂಸಾಚಾರದ ಹಿಂದೆ ಕಾಂಗ್ರೆಸ್ ಮಾಸ್ಟರ್ ಮೈಂಡ್ ಇದೆ ಎಂದು ತಿಳಿಸಿದ್ದಾರೆ. 

ಇದೇ ವೇಳೆ ಜೆಡಿಎಸ್ ನಾಯಕರ ವಿರುದ್ದ ಕಿಡಿಕಾರಿದ ಅವರು, ರಾಜ್ಯದ ಹಿತಾಸಕ್ತಿಗಳಿಗೆ ವಿರುದ್ಧವಾಗಿ ರಾಜವಂಸದ ರಾಜಕೀಯಕ್ಕೆ ಜೆಡಿಎಸ್ ಪ್ರಾಮುಖ್ಯತೆಯನ್ನು ನೀಡಿದೆ. ಕುಮಾರಸ್ವಾಮಿಯವರು ಅತ್ಯಂತ ಕೆಟ್ಟ ರಾಜಕೀಯ ಮಾಡುತ್ತಿದ್ದು, ಇತರೆ ಸಂಘಟನೆಗಳ ಬಗ್ಗೆ ಟೀಕೆ ಮಾಡುವ ಯಾವುದೇ ನೈತಿಕ ಹಕ್ಕು ಅವರಿಗಿಲ್ಲ ಎಂದಿದ್ದಾರೆ. 

ರಾಜ್ಯದ ಮುಖ್ಯಮಂತ್ರಿಗಳಾಗಿದ್ದಾಗ ಕುಮಾರಸ್ವಾಮಿ ಹಾಗೂ ಸಿದ್ದರಾಮಯ್ಯ ಉತ್ತಮ ಆಡಳಿತ ನೀಡುವಲ್ಲಿ ವಿಫಲರಾಗಿದ್ದಾರೆ. ಹಾಸನ ಜಿಲ್ಲೆಯಲ್ಲಿ ಭವಿಷ್ಯದಲ್ಲಿ ನಡೆಯುವ ಚುನಾವಣೆ ವೇಳೆ ಜೆಡಿಎಸ್ ಪಕ್ಷವನ್ನು ಕಿತ್ತೊಗೆಯಿರಿ. ಜೆಡಿಎಸ್ ಹಾಗೂ ಕಾಂಗ್ರೆಸ್ ನಾಯಕರ ವೈಫಲ್ಯಗಳನ್ನು ಬಿಜೆಪಿ ಸ್ಥಳೀಯ ನಾಯಕರು ಜನರ ಮನೆ ಬಾಗಿಲಿಗೆ ತೆರಳಿ  ವಿವರಣ ನೀಡಲಿದ್ದಾರೆಂದಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com