ಸ್ಪೀಕರ್, ಯತ್ನಾಳ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಅವರನ್ನು ಪಾಕಿಸ್ತಾನದ ಏಜೆಂಟ್ ಎಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ನಿರ್ದೇಶನ ನೀಡುವಂತ ಕೋರಿ ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಕಾಂಗ್ರೆಸ್ ಪಕ್ಷ ದೂರು ನೀಡಿದೆ. 
ಸ್ಪೀಕರ್, ಯತ್ನಾಳ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು
ಸ್ಪೀಕರ್, ಯತ್ನಾಳ್ ವಿರುದ್ಧ ರಾಜ್ಯಪಾಲರಿಗೆ ಕಾಂಗ್ರೆಸ್ ದೂರು

ಬೆಂಗಳೂರು: ಸ್ವಾತಂತ್ರ್ಯ ಹೋರಾಟಗಾರ ಹೆಚ್.ಎಸ್.ದೊರೆಸ್ವಾಮಿ ಅವರನ್ನು ಪಾಕಿಸ್ತಾನದ ಏಜೆಂಟ್ ಎಂದಿರುವ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿಯವರಿಗೆ ನಿರ್ದೇಶನ ನೀಡುವಂತ ಕೋರಿ ರಾಜ್ಯಪಾಲ ವಜುಭಾಯ್ ವಾಲಾ ಅವರಿಗೆ ಕಾಂಗ್ರೆಸ್ ಪಕ್ಷ ದೂರು ನೀಡಿದೆ. 

ದೂರು ನೀಡಿದ ಬಳಿಕ ವಿಧಾನಸಬೆಗೆ ತೆರೆಳಿದ ಕಾಂಗ್ರೆಸ್ ನಾಯಕರು, ಕಳೆದ ಎರಡು ದಿನಗಳಿಂದ ನಡೆಸಿದ್ದ ಧರಣಿಯನ್ನು ಕೈಬಿಟ್ಟು ಕಲಾಪದಲ್ಲಿ ಪಾಲ್ಗೊಂಡರು. 

ಬಸನಗೌಡ ಪಾಟೀಲ್ ಯತ್ನಾಳ್ ಅವರ ಸದಸ್ಯತ್ವ ರದ್ದುಗೊಳಿಸಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಸದಸ್ಯರು ಸೋಮವಾರ ಹಾಗೂ ಮಂಗಳವಾರ ಸದನದ ಬಾವಿಗಿಳಿದು ಪ್ರತಿಭಟಿಸಿದ್ದರು. ಈಬಗ್ಗೆ ನೋಟಿಸ್ ನೀಡಿದರೂ ಚರ್ಚೆಗೆ ಸ್ಪೀಕ್ರ ಕಾಗೇರಿಯವರು ಅನುಮತಿ ನೀಡದ ಹಿನ್ನೆಲೆಯಲ್ಲಿ ಬುಧವಾರ ಬೆಳಿಗ್ಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜ್ಯಪಾಲ ವಜುಭಾಯ್ ವಾಲಾ ಅವರನ್ನು ನಿಯೋಗ ಭೇಟಿ ಮಾಡಿತು. 

ಈ ವೇಳೆ ರಾಜ್ಯಪಾಲರಿಗೆ ನೀಡಿರುವ ದೂರಿನಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಅವಮಾನ ಮಾಡುವ ಮೂಲಕ ಯತ್ನಾಳ್ ಸಂವಿಧಾನದ ನಿಯಮ ಉಲ್ಲಂಘನೆ ಮಾಡಿದ್ದಾರೆ. 103 ವರ್ಷಗಳ ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಹಾಗೂ 1942ರಲ್ಲಿ ಸೆರೆವಾಸ ಅನುಭವಿಸಿದ್ದ ಗಾಂಧೀವಾದಿಗೆ ಪಾಕಿಸ್ತಾನದ ಏಜೆಂಟ್ ಹಾಗೂ ನಕಲಿ ಸ್ವಾತಂತ್ರ್ಯ ಹೋರಾಟಗಾರ ಎಂದು ಯತ್ನಾಳ್ ಹೇಳಿದ್ದಾರೆ. ಈ ಬಗ್ಗೆ ಚರ್ಚೆಗೆ ಸ್ಪೀಕರ್ ಅನುಮತಿ ನೀಡಿಲ್ಲ. ಅವರಿಗೆ ಸೂಕ್ತ ಕ್ರಮಕ್ಕೆ ನಿರ್ದೇಶಿಸಬೇಕೆಂದು ಮನವಿ ಮಾಡಿದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com