ದಳಪತಿಗಳ ಕೋಟೆಯಲ್ಲಿ ರಾಜಿನಾಮೆ ಪರ್ವ: ಜೆಡಿಎಸ್ ಗೆ ರಮೇಶ್ ಬಾಬು ಗುಡ್ ಬೈ!
ಆಗ್ನೇಯ ಪದವೀಧರರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಇಂದು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.
Published: 07th March 2020 01:43 PM | Last Updated: 07th March 2020 01:43 PM | A+A A-

ರಮೇಶ್ ಬಾಬು
ಬೆಂಗಳೂರು: ಆಗ್ನೇಯ ಪದವೀಧರರ ಕ್ಷೇತ್ರದಿಂದ ಜೆಡಿಎಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ರಮೇಶ್ ಬಾಬು ಇಂದು ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿರುವುದಾಗಿ ಅಧಿಕೃತವಾಗಿ ಘೋಷಿಸಿದ್ದಾರೆ.
ರಮೇಶ್ ಬಾಬು ಈಗಾಗಲೇ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರಿಗೆ ರಾಜೀನಾಮೆ ಪತ್ರ ರವಾನೆ ಮಾಡಿದ್ದಾರೆ.
ಪಕ್ಷದಲ್ಲಿ ಪ್ರಾಮಾಣಿಕರಿಗೆ ಸರಿಯಾದ ಅವಕಾಶ ಸಿಗಲಿಲ್ಲ. ಪೂರ್ಣಾವಧಿಗೂ ಅವಕಾಶ ಇಲ್ಲ. ಕಾರ್ಯಕರ್ತರಿಗೂ ಸಹ ಯಾವುದೇ ಅವಕಾಶ ಸಿಗುತ್ತಿಲ್ಲ. ಜೆಡಿಎಸ್ ದಿನೇ ದಿನೇ ರಾಜಕೀಯ ಗುಣ ಕಳೆದುಕೊಳ್ಳುತ್ತಿದೆ" ಎಂದು ಹೇಳಿದರು.
ಪಕ್ಷದ ಜವಾಬ್ದಾರಿಗಳನ್ನು ಸಮರ್ಥವಾಗಿ ನಿರ್ವಹಿಸಿದರೂ ಒಂದು ಪೂರ್ಣ ಅವಧಿಗೆ ವಿಧಾನಪರಿಷತ್ತಿನ ಸದಸ್ಯನಾಗಿ ಕಾರ್ಯನಿರ್ವಹಿಸುವ ಅವಕಾಶ ದೊರೆಯಲಿಲ್ಲ ಮತ್ತು ಇತರ ಕಾರಣಗಳಿಂದ ತಾನು ರಾಜೀನಾಮೆ ನೀಡುತ್ತಿರುವುದಾಗಿ ರಮೇಶ್ ಬಾಬು ಅವರು ಬಿಡುಗಡೆ ಮಾಡಿರುವ ರಾಜೀನಾಮೆ ಪತ್ರದಲ್ಲಿ ತಿಳಿಸಿದ್ದಾರೆ.