ಪಕ್ಷದಲ್ಲಿ ಡಿ.ಕೆ.ಶಿವಕುಮಾರ್ ಮತ್ತು ಸಿದ್ದರಾಮಯ್ಯ ಬಣ ಇರುವುದು ಸತ್ಯ: ಸತೀಶ್ ಜಾರಕಿಹೊಳಿ‌

ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿ, ಸಿದ್ದರಾಮಯ್ಯ ಬಣ ಇರುವುದು ಸತ್ಯ ಆದ್ರೆ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು.
ಸತೀಶ್ ಜಾರಕಿಹೊಳಿ
ಸತೀಶ್ ಜಾರಕಿಹೊಳಿ

ಬೆಳಗಾವಿ: ಕಾಂಗ್ರೆಸ್ ಪಕ್ಷದಲ್ಲಿ ಡಿ.ಕೆ.ಶಿ, ಸಿದ್ದರಾಮಯ್ಯ ಬಣ ಇರುವುದು ಸತ್ಯ ಆದ್ರೆ ಪಕ್ಷದಲ್ಲಿ ಭಿನ್ನಾಭಿಪ್ರಾಯ ಇಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು.

ಕೆಪಿಸಿಸಿ ಕಾರ್ಯಾದ್ಯಕ್ಷರಾದ ಬಳಿಕ ಪ್ರಥಮ ಬಾರಿಗೆ ಬೆಳಗಾವಿಗೆ ಆಗಮಿಸಿದ ಸತೀಶ್ ಜಾರಕಿಹೊಳಿ ಕಾಂಗ್ರೆಸ್ ಕಚೇರಿಯಲ್ಲಿ ಮಾದ್ಯಮಗಳ ಜೊತೆ ಮಾತನಾಡಿದರು. 

ಡಿ.ಕೆ.ಶಿವಕುಮಾರ ಕಾಂಗ್ರೆಸ್ ಅಧ್ಯಕ್ಷರು. ಸಿದ್ದರಾಮಯ್ಯನವರು ಪ್ರಭಾವಿ ನಾಯಕರು. ಪಕ್ಷದಲ್ಲಿ ಈಗ ಮೂವರು ಕಾರ್ಯಾದ್ಯಕ್ಷರು ಇದ್ದಾರೆ. ದಲಿತ ಸಮುದಾಯದ ನಾಯಕರೊಬ್ಬರು ಕಾರ್ಯಾಧ್ಯಕ್ಷರಾಗಬೇಕು ಎಂಬ ಬೇಡಿಕೆ ಇದೆ ಎಲ್ಲರ ಸಮ್ಮುಖದಲ್ಲಿಯೇ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಪಕ್ಷ ಮುನ್ನಡೆಸುತ್ತೇವೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ‌ ಹೇಳಿದರು.

ಮನೆ ಎಂದ ಮೇಲೆ ಕೆಲವರಲ್ಲಿ ವೈಮನಸ್ಸು ಇರುವುದು ಸಹಜ. ಚುನಾವಣೆ ಸಂದರ್ಭದಲ್ಲಿ ಟಿಕೆಟ್ ಗಾಗಿ ಗುಂಪುಗಾರಿಕೆ ನಡೆಯುತ್ತದೆ. ಸಿದ್ದರಾಮಯ್ಯ ಬಣ, ಡಿ.ಕೆ.ಶಿವಕುಮಾರ ಬಣ ಇರುವುದು ಸತ್ಯ. ಆದರೆ ಪಕ್ಷದ ವಿಚಾರ ಬಂದಾಗ ಎಲ್ಲರೂ ಒಂದಾಗುತ್ತೇವೆ ಎಂದರು. ಚುನಾವಣೆಗೆ ಇನ್ನೂ ಮೂರು ವರ್ಷ ಬಾಕಿ ಇದೆ ಅಲ್ಲಿಯವರೆಗೆ ಪಕ್ಷವನ್ನು ಸಂಘಟಿಸಿ ಪಕ್ಷವನ್ನು ಅಧಿಕಾರಕ್ಕೆ ತರುವ ಪ್ರಯತ್ನ ಮಾಡುತ್ತೇವೆ ಎಂದರು.

ಬೆಳಗಾವಿಯಲ್ಲಿ ಗೋಕಾಕ ಸೇರಿದಂತೆ ‌ಮೂರು ಕ್ಷೇತ್ರದಲ್ಲಿ ಕಾಂಗ್ರೆಸ್ ವಂಚಿತವಾಗಿದೆ. ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿ ‌ಮುಖಮಾಡಿದ್ದಾರೆ. ಅದರಿಂದ ಯಾವುದೇ ನಷ್ಟವಾಗಿಲ್ಲ. ಉಪಚುನಾವಣೆಯಲ್ಲಿ ನಮ್ಮ‌ಶಕ್ತಿ ಪ್ರದರ್ಶ ಮಾಡಿದ್ದೇವೆ. ಇನ್ನೂ ಮೂರು ವರ್ಷ ಕಾಲಾವಕಾಶವಿದೆ. ಪಕ್ಷ ಬಲಪಡಿಸುವ ತಂತ್ರ ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಇದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಕಾಂಗ್ರೆಸ್ ಸಿಂಬಾಲ್ ಮೇಲೆ ಚುನಾವಣೆ ಎದುರಿಸುವ ಕುರಿತು ಸ್ಥಳೀಯ ನಾಯಕರ,ಕಾರ್ಯಕರ್ತರ ಅಭಿಪ್ರಾಯ ಆಲಿಸಿ ನಂತರ ತೀರ್ಮಾಣ ಕೈಗೊಳ್ಳುತ್ತೇವೆ ಎಂದು ಸತೀಶ ಜಾರಕಿಹೊಳಿ ಹೇಳಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com