ಮಾಜಿ ಸಿಎಂ ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ ಭದ್ರತೆ ವಾಪಸ್!

ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ನೀಡಿದ್ದ ಪೈಲಟ್‌ ವಾಹನ ಸೇವೆಯನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದುಕೊಂಡಿದ್ದು, ಕೇವಲ ಎಸ್ಕಾರ್ಟ್‌ ಮಾತ್ರ ಮುಂದುವರಿಸಿದೆ.
ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ
ಸಿದ್ದರಾಮಯ್ಯ ಮತ್ತು ಕುಮಾರಸ್ವಾಮಿ

ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ಮತ್ತು ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ನೀಡಿದ್ದ ಪೈಲಟ್‌ ವಾಹನ ಸೇವೆಯನ್ನು ರಾಜ್ಯ ಸರ್ಕಾರ ವಾಪಸ್‌ ಪಡೆದುಕೊಂಡಿದ್ದು, ಕೇವಲ ಎಸ್ಕಾರ್ಟ್‌ ಮಾತ್ರ ಮುಂದುವರಿಸಿದೆ.

ಸರ್ಕಾರದ ಈ ನಿರ್ಧಾರವನ್ನು ವಿರೋಧಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ, ತನಗೆ ಝಡ್‌ ಶ್ರೇಣಿಯ ಭದ್ರತೆ ಮುಂದುವರಿಸು ವಂತೆ ಮುಖ್ಯ ಮಂತ್ರಿ ಯಡಿಯೂರಪ್ಪ ಅವರಿಗೆ ಮನವಿ ಮಾಡಿದ್ದಾರೆ. 

ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದ್ದು, ಯಾವ ಕಾರಣಕ್ಕೆ ಭದ್ರತೆ ವಾಪಸ್‌ ಪಡೆಯಲಾಗಿದೆ ಎಂಬ ಬಗ್ಗೆ ಗೃಹ ಸಚಿವರಾಗಲಿ, ನಗರ ಪೊಲೀಸ್‌ ಆಯುಕ್ತರಾಗಲಿ ಮಾಹಿತಿ ನೀಡುತ್ತಿಲ್ಲ ಎಂದು ಹೇಳಿದ್ದಾರೆ. ಜತೆಗೆ

ಇತ್ತೀಚೆಗಷ್ಟೇ ಝಡ್‌ ಪ್ಲಸ್‌ ಭದ್ರತೆ ಇದ್ದದ್ದನ್ನು ಝಡ್‌ಗೆ ಇಳಿಸಲಾಗಿತ್ತು. ಅನಂತರ ಎಸ್ಕಾರ್ಟ್‌ ಸೇವೆಗೆ ಒದಗಿಸ ಲಾಗಿದ್ದ ಇನ್ನೋವಾ ಕ್ರಿಸ್ಟಾ ವಾಹನವನ್ನು ವಾಪಸ್‌ ಪಡೆದು 2.61 ಲಕ್ಷ ಕಿ.ಮೀ. ಸಂಚರಿಸಿರುವ ಸ್ಕಾರ್ಪಿಯೋ ವಾಹನ ನೀಡಲಾಗಿದೆ. ಅದು ಎಲ್ಲೆಂದರಲ್ಲಿ ಕೆಟ್ಟು ನಿಲ್ಲುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ವಿವಿಐಪಿ ಭದ್ರತೆಯ ದೃಷ್ಟಿಯಿಂದ ಮಾಜಿ ಮುಖ್ಯಮಂತ್ರಿಗಳಿಗೆ, ವಿಪಕ್ಷ ನಾಯಕರಿಗೆ ಪೈಲಟ್‌ ಮತ್ತು ಎಸ್ಕಾರ್ಟ್‌ ಸೇವೆ ನೀಡಲಾಗುತ್ತದೆ. 
 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com