ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗ ಮಾಡುತ್ತಿದೆ, ಪರಿಸ್ಥಿತಿ ನಿಭಾಯಿಸಲು ನಮಗೆ ಗೊತ್ತಿದೆ:ಡಿ ಕೆ ಶಿವಕುಮಾರ್ 

ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗಮಾಡುತ್ತಿದೆ. ನಮ್ಮದೇ ಆದ ರಾಜಕೀಯ ತಂತ್ರಗಳಿವೆ.ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬುದು ನಮಗೆ ತಿಳಿದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.

Published: 18th March 2020 09:20 AM  |   Last Updated: 18th March 2020 11:38 AM   |  A+A-


Posted By : Sumana Upadhyaya
Source : ANI

ಬೆಂಗಳೂರು: ಕರ್ನಾಟಕದಲ್ಲಿ ಬಿಜೆಪಿ ಸರ್ಕಾರ ಅಧಿಕಾರ ದುರುಪಯೋಗಮಾಡುತ್ತಿದೆ. ನಮ್ಮದೇ ಆದ ರಾಜಕೀಯ ತಂತ್ರಗಳಿವೆ.ಈ ಸಂದರ್ಭದಲ್ಲಿ ಪರಿಸ್ಥಿತಿಯನ್ನು ಹೇಗೆ ನಿಭಾಯಿಸಬೇಕು ಎಂಬುದು ನಮಗೆ ತಿಳಿದಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಹೇಳಿದ್ದಾರೆ.


ಇಂದು ಬೆಳಗ್ಗೆ ಬೆಂಗಳೂರಿನಲ್ಲಿ ಕಾಂಗ್ರೆಸ್ ನ ಹಿರಿಯ ನಾಯಕ ದಿಗ್ವಿಜಯ್ ಸಿಂಗ್ ಅವರನ್ನು ಪೊಲೀಸರು ವಶಪಡಿಸಿಕೊಂಡು ಠಾಣೆಗೆ ಕರೆದೊಯ್ದ ಸಂದರ್ಭದಲ್ಲಿ ಮಾತನಾಡಿದ ಡಿ ಕೆ ಶಿವಕುಮಾರ್, ಇಲ್ಲಿ ಅವರೊಬ್ಬರೇ ಅಲ್ಲ ಇರುವುದು. ನಾನು ಅವರ ಬೆಂಬಲಕ್ಕಿದ್ದೇನೆ. ಕಾನೂನು, ಸುವ್ಯವಸ್ಥೆ ಆದೇಶವನ್ನು ಸರ್ಕಾರ ಜಾರಿಗೆ ತರಬೇಕಾದ ಪರಿಸ್ಥಿತಿ ಬರಬಾರದು ಎಂದು ನಾನು ಸುಮ್ಮನಿದ್ದೇನೆ ಎಂದು ಧರಣಿ ನಿರತ ದಿಗ್ವಿಜಯ್ ಸಿಂಗ್ ಅವರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡ ಕ್ರಮದ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು.


ಶಾಸಕರನ್ನು ಭೇಟಿ ಮಾಡಿ ಸರ್ಕಾರಕ್ಕೆ ಬೆಂಬಲ ಕೊಡಿ ಎಂದು ಕೇಳಲು ರೆಸಾರ್ಟ್ ಒಳಗೆ ಹೋಗಲು ದಿಗ್ವಿಜಯ್ ಸಿಂಗ್ ಮನವಿ ಮಾಡಿದ್ದಾರೆ. ಆದರೆ ಪೊಲೀಸರು ನಿರಾಕರಿಸುವ ಮೂಲಕ ನಮ್ಮ ಹಕ್ಕನ್ನು ಕಿತ್ತುಕೊಂಡಿದ್ದಾರೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಇಂತಹ ಕ್ರಮ ಎಷ್ಟು ಸರಿ. ದಿಗ್ವಿಜಯ್ ಸಿಂಗ್ ಅವರು ನಮ್ಮ ಪಕ್ಷದ ಶಾಸಕರನ್ನು ಭೇಟಿ ಮಾಡಲು ಬಂದಿದ್ದಾರೆ. ಒಬ್ಬ ಶಾಸಕ ಅವರನ್ನು ಫೋನ್ ಮೂಲಕ ಸಂಪರ್ಕಿಸಿ ತಮ್ಮನ್ನು ಬಂಧನದಿಂದ ಬಿಡುಗಡೆ ಮಾಡುವಂತೆ ಅಲವತ್ತುಕೊಂಡಿದ್ದರು. ಹೀಗಿರುವಾಗ ಪೊಲೀಸರು ಅವರನ್ನು ತಡೆಯುವ ಅಧಿಕಾರವಿಲ್ಲ. ಇವರೆಲ್ಲಾ ಸಿಎಂ ಹೇಳಿದಂತೆ ಕೇಳುವುದರಿಂದ ನಾವು ಮೇಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡುತ್ತೇವೆ ಎಂದರು. 

ಇದಕ್ಕೂ ಮುನ್ನ ಕಳೆದ ರಾತ್ರಿ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂದಿಳಿದ ದಿಗ್ವಿಜಯ್ ಸಿಂಗ್ ಅವರನ್ನು ಡಿ ಕೆ ಶಿವಕುಮಾರ್ ಭರ್ಜರಿ ಸ್ವಾಗತ ನೀಡಿ ಮುಂದಿನ ಕಾರ್ಯವೈಖರಿ ಬಗ್ಗೆ ವಿಸ್ತ್ರೃತ ಚರ್ಚೆ ನಡೆಸಿದರು. ನಂತರ ಡಿ ಕೆ ಶಿವಕುಮಾರ್ ತಮ್ಮ ಸದಾಶಿವನಗರ ನಿವಾಸದಲ್ಲಿ ಕೆಪಿಸಿಸಿ ಮಾಜಿ ಅಧ್ಯಕ್ಷ ದಿನೇಶ್ ಗುಂಡೂರಾವ್, ರಿಜ್ವಾನ್ ಆರ್ಷದ್, ಕೃಷ್ಣ ಭೈರೇಗೌಡ, ಎನ್ ಎ ಹ್ಯಾರಿಸ್, ಭೈರತಿ ಸುರೇಶ್, ಅಖಂಡ ಶ್ರೀನಿವಾಸ್ ಮೂರ್ತಿ ಹಾಗೂ ಇತರರೊಂದಿಗೆ ಸಭೆ ನಡೆಸಿ ಮಧ್ಯಪ್ರದೇಶದ ಕಾಂಗ್ರೆಸ್ ಶಾಸಕರನ್ನು ರೆಸಾರ್ಟ್ ನಲ್ಲಿ ಕೂಡಿಹಾಕಿರುವುದರ ವಿರುದ್ಧ ನಡೆಸಬೇಕಾದ ಇಂದಿನ ಕ್ರಮಗಳ ಬಗ್ಗೆ ಚರ್ಚಿಸಿದ್ದರು. 

Stay up to date on all the latest ರಾಜಕೀಯ news
Poll
Farmers_ride_tractors1

ರೈತರು ದೆಹಲಿಯಲ್ಲಿ ತಮ್ಮ ಗಣರಾಜ್ಯೋತ್ಸವ ದಿನದ ಟ್ರಾಕ್ಟರ್ ರ್ಯಾಲಿಯನ್ನು ನಿಲ್ಲಿಸಬೇಕೇ?


Result
ಹೌದು
ಬೇಡ
flipboard facebook twitter whatsapp