ನಮ್ಮ ಶಾಸಕರನ್ನು ಭೇಟಿ ಮಾಡಲು ಅವಕಾಶ ನೀಡುವವರೆಗೆ ಉಪವಾಸ ಸತ್ಯಾಗ್ರಹ ಮಾಡುತ್ತೇನೆ: ದಿಗ್ವಿಜಯ್ ಸಿಂಗ್ 

ಮಧ್ಯಪ್ರದೇಶದಿಂದ ಕರೆತಂದು ಇಲ್ಲಿ ಕೂಡಿಹಾಕಿರುವ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ಅವಕಾಶ ನೀಡುವವರೆಗೆ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ. ಬಿಜೆಪಿಯ ಸೆರೆಯಲ್ಲಿರುವ ಶಾಸಕರನ್ನು ಭೇಟಿ ಮಾಡಲು ಅವಕಾಶ ನೀಡಬೇಕು ಎಂದು ಮಧ್ಯ ಪ್ರದೇಶದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.
ನಮ್ಮ ಶಾಸಕರನ್ನು ಭೇಟಿ ಮಾಡಲು ಅವಕಾಶ ನೀಡುವವರೆಗೆ ಉಪವಾಸ ಸತ್ಯಾಗ್ರಹ ಮಾಡುತ್ತೇನೆ: ದಿಗ್ವಿಜಯ್ ಸಿಂಗ್ 

ಬೆಂಗಳೂರು: ಮಧ್ಯಪ್ರದೇಶದಿಂದ ಕರೆತಂದು ಇಲ್ಲಿ ಕೂಡಿಹಾಕಿರುವ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ಅವಕಾಶ ನೀಡುವವರೆಗೆ ಉಪವಾಸ ಸತ್ಯಾಗ್ರಹ ನಡೆಸುತ್ತೇನೆ ಎಂದು ಮಧ್ಯ ಪ್ರದೇಶದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್ ಪ್ರತಿಕ್ರಿಯಿಸಿದ್ದಾರೆ.

ಅವರು ಇಂದು ಬೆಂಗಳೂರಿನ ಯಲಹಂಕ ಬಳಿಯ ರಮಡ ರೆಸಾರ್ಟ್ ನಲ್ಲಿ ವಾಸ್ತವ್ಯ ಹೂಡಿರುವ ಮಧ್ಯ ಪ್ರದೇಶದ ಬಂಡಾಯ ಕಾಂಗ್ರೆಸ್ ಶಾಸಕರನ್ನು ಭೇಟಿ ಮಾಡಲು ಬಂದಿದ್ದರು. ಆದರೆ ಪೊಲೀಸರು ಒಳಗೆ ಹೋಗಲು ಅವಕಾಶ ನೀಡಲಿಲ್ಲ. ಇದರಿಂದ ಹೊರಗೆ ಕೆಲ ಕಾಂಗ್ರೆಸ್ ಮುಖಂಡರ ಜೊತೆ ಸೇರಿ ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಪೊಲೀಸರು ಪರಿಸ್ಥಿತಿಯನ್ನು ನಿಯಂತ್ರಿಸಲು ನಾಯಕರನ್ನು ವಶಕ್ಕೆ ತೆಗೆದುಕೊಂಡು ಪೊಲೀಸ್ ಠಾಣೆಗೆ ಕರೆದೊಯ್ದರು.

ಇದಕ್ಕೂ ಮುನ್ನ ಮಾತನಾಡಿದ ದಿಗ್ವಿಜಯ್ ಸಿಂಗ್, ಬಳಿಕ ಮಾತನಾಡಿದ ದಿಗ್ವಿಜಯ್ ಸಿಂಗ್, ಕಾಂಗ್ರೆಸ್ ಶಾಸಕರನ್ನು 10 ರಿಂದ 25 ಕೋಟಿ ರೂ ನೀಡಿ ಖರೀದಿಸಲಾಗಿದೆ. ಇನ್ನುಳಿದ ಕಾಂಗ್ರೆಸ್ ಶಾಸಕರಿಗೂ ಸಹ ಬಿಜೆಪಿಯಿಂದ ಆಮೀಷ ಒಡ್ಡಲಾಗಿದೆ. ಕಾಂಗ್ರೆಸ್ ನಿಂದ ಗೆದ್ದು ಇದೀಗ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವಂತಹ ಪರಿಸ್ಥಿತಿಯನ್ನು ಬಿಜೆಪಿ ನಾಯಕರು ಸೃಷ್ಟಿಸಿದ್ದಾರೆ. ಇದು ಪ್ರಜಾಪ್ರಭುತ್ವ ವ್ಯವಸ್ಥೆಯ ಅಣಕ ಎಂದು ಟೀಕಿಸಿದರು.

ನಾನು ಮಧ್ಯ ಪ್ರದೇಶದಿಂದ ರಾಜ್ಯಸಭಾ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದು ಈ ತಿಂಗಳ 26ರಂದು ಚುನಾವಣೆ ನಡೆಯುತ್ತಿದೆ. ನಮ್ಮ ಶಾಸಕರನ್ನು ಇಲ್ಲಿ ಸೆರೆಯಲ್ಲಿಡಲಾಗಿದೆ. ಅವರಲ್ಲಿ ನಾನು ಮಾತನಾಡಬೇಕು ಎಂದರು.

ನಮ್ಮ ಜೀವಕ್ಕೆ ಬೆದರಿಕೆಯಿದೆ, ನಮಗೆ ಭದ್ರತೆ ಕೊಡಿ ಎಂದು ಮಧ್ಯಪ್ರದೇಶದ ಬಂಡಾಯ ಶಾಸಕರು ಕೇಳಿರುವುದರಿಂದ ನಾವು ಮಧ್ಯೆ ಪ್ರವೇಶಿಸಿದ್ದೇವೆ ಪೊಲೀಸರು ಹೇಳುತ್ತಿದ್ದಾರೆ. 

We have been taken to the local DCP office by Bengaluru police.

I demand that we must be allowed to meet our MLAs , who are in BJP’s captivity.

I announce my Hunger Strike, till we are allowed to meet our MLAs.

We live in Democracy, not Dictatorship.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com