ಕೋವಿಡ್-19 ಉಸ್ತುವಾರಿ ಶ್ರೀರಾಮುಲು ಬದಲಿಗೆ ಸುಧಾಕರ್‌ಗೆ!

ಲಾಕ್ ಡೌನ್ ನಡುವೆಯೂ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೆ ಇದ್ದು ಸೋಂಕು ಹರಡುವಿಕೆ ಹಾಗೂ ನಿಯಂತ್ರಿಸುವ ಉದ್ದೇಶದಿಂದ ಕೋವಿಡ್ 19 ಉಸ್ತುವಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರಿಗೆ ವಹಿಸಲಾಗಿದೆ.
ಕೆ. ಸುಧಾಕರ್-ಶ್ರೀರಾಮುಲು
ಕೆ. ಸುಧಾಕರ್-ಶ್ರೀರಾಮುಲು

ಬೆಂಗಳೂರು: ಲಾಕ್ ಡೌನ್ ನಡುವೆಯೂ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೆ ಇದ್ದು ಸೋಂಕು ಹರಡುವಿಕೆ ಹಾಗೂ ನಿಯಂತ್ರಿಸುವ ಉದ್ದೇಶದಿಂದ ಕೋವಿಡ್ 19 ಉಸ್ತುವಾರಿಯನ್ನು ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ್ ಅವರಿಗೆ ವಹಿಸಲಾಗಿದೆ.

ಆರೋಗ್ಯ ಇಲಾಖೆ ವ್ಯಾಪ್ತಿಯಲ್ಲಿ ಸಾಂಕ್ರಾಮಿಕ ರೋಗಗಳ ನಿಭಾವಣೆ ಹಾಗೂ ನಿಯಂತ್ರಣದ ಹೊಣೆ ಇರುತ್ತಿತ್ತು. ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರಿಗೆ ಇದ್ದ ಜವಾಬ್ದಾರಿಯನ್ನು ಹಿಂಪಡೆದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಈ ಹೊಣೆಯನ್ನು ಸುಧಾಕರ್ ಗೆ ವಹಿಸುವಂತೆ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದರು. ಇದರನ್ವಯ ರಾಜ್ಯಪಾಲ ವಜುಭಾಯಿ ವಾಲಾ ಮಂಗಳವಾರ ಆದೇಶ ಹೊರಡಿಸಿದ್ದಾರೆ.

ಮಗಳ ಮದುವೆ ಇದ್ದ ಕಾರಣ ಶ್ರೀರಾಮುಲು ಅಲ್ಲಿ ಸಕ್ರಿಯರಾಗಿದ್ದರಿಂದ ಸುಧಾಕರ್ ಅವರೇ ಸೋಂಕು ಹರಡುವಿಕೆ ತಡೆಗೆ ಸಂಬಂಧಪಟ್ಟ ಚಟುವಟಿಕೆಗಳ ಮೇಲುಸ್ತುವಾರಿ ವಹಿಸಿದ್ದರು. ಕೊರೋನಾ ವೈರಸ್ ಸೋಂಕು ತಡೆ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡುವಾಗಲೂ ಸಿದ್ಧತೆ ಇಲ್ಲದೆ ಬರುತ್ತಿದ್ದ ರಾಮುಲು ತಪ್ಪು ಮಾಹಿತಿ ನೀಡಿ, ಗೊಂದಲ ಮೂಡಿಸಿದ ಪ್ರಕರಣಗಳು ನಡೆದಿತ್ತು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com