ದೇಶವನ್ನು ಲಾಕ್ ಡೌನ್ ಮಾಡದೆ ಪ್ರಧಾನಿ ಮೋದಿಗೆ ಬೇರೆ ದಾರಿಯಿಲ್ಲ: ಸಿಎಂ ಯಡಿಯೂರಪ್ಪ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 21 ದಿನಗಳ ದೇಶವನ್ನು ಸಂಪೂರ್ಣವಾಗಿ ಲಾಕ್ ಡೌನ್ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಬಿಎಸ್ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ

ಬೆಂಗಳೂರು: ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು 21 ದಿನಗಳ ದೇಶವನ್ನು ಸಂಪೂರ್ಣವಾಗಿ ಲಾಕ್ ಡೌನ್ ಘೋಷಣೆ ಮಾಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ರಾಜ್ಯದ ಜನತೆಯಲ್ಲಿ ಮನವಿ ಮಾಡಿಕೊಂಡಿದ್ದಾರೆ.

ಪ್ರಧಾನಿಗೆ ಈ ಕ್ರಮ ಬಿಟ್ಟು ಮತ್ಯಾವುದೇ ದಾರಿ ಇರಲಿಲ್ಲ ಎಂದು ತಮ್ಮ ಪತ್ರಿಕಾ ಪ್ರಕಟಣೆಯಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ತಿಳಿಸಿದ್ದಾರೆ.

ಪ್ರಧಾನಿ ದೇಶವನ್ನು ಉದ್ದೇಶಿಸಿ ಭಾಷಣದ ಬಳಿಕ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ, 21 ದಿನಗಳ ಕಾಲ ಮನೆಯಲ್ಲಿ ಇರುವಂತೆ ಮನವಿ ಮಾಡಿ ದೇಶದ ಜನತೆಯ ರಕ್ಷಣೆಗೆ ಪ್ರಧಾನಿ ಪಣ ತೊಟ್ಟಿದ್ದಾರೆ. ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ಪ್ರಧಾನಿಯವರಿಗೆ ಈ ಕ್ರಮ ಬಿಟ್ಟರೆ ಬೇರೊಂದು ಮಾರ್ಗ ಅವರ ಮುಂದಿರಲಿಲ್ಲ.

ಪ್ರಧಾನಿ ಮೋದಿ ಅವರು ಮಾರ್ಚ್ 25ರಿಂದ ಏಪ್ರಿಲ್ 14ರವರೆಗೆ ಇಡೀ ಭಾರತವನ್ನೇ ಲಾಕ್ ಡೌನ್ ಮಾಡಿ ಐತಿಹಾಸಿಕ ನಿರ್ಧಾರ ಕೈಗೊಂಡಿದ್ದಾರೆ. 

ಭಾರತದಲ್ಲಿ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ 519ಕ್ಕೇರಿದೆ. ಇಂದು ಹೊಸದಾಗಿ 20 ಪ್ರಕರಣಗಳು ಪತ್ತೆಯಾಗಿದ್ದು ಒಟ್ಟಾರೆ 10 ಮಂದಿ ಸಾವನ್ನಪ್ಪಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com