ಕೋವಿಡ್ 19 : ಕಾಂಗ್ರೆಸ್ ಶಾಸಕ, ಸಂಸದರಿಂದ ತಲಾ 1 ಲಕ್ಷ ರೂ. ದೇಣಿಗೆ – ಡಿ.ಕೆ. ಶಿವಕುಮಾರ್

ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದ ಪ್ರತಿಯೊಬ್ಬ ಕಾಂಗ್ರೆಸ್ ಶಾಸಕರು ಮತ್ತು ಸಂಸದರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.
ಸಿದ್ದರಾಮಯ್ಯ - ಡಿಕೆ ಶಿವಕುಮಾರ್
ಸಿದ್ದರಾಮಯ್ಯ - ಡಿಕೆ ಶಿವಕುಮಾರ್

ಬೆಂಗಳೂರು: ಕೊರೋನಾ ಮಹಾಮಾರಿ ಸೋಂಕು ನಿಯಂತ್ರಣಕ್ಕಾಗಿ ರಾಜ್ಯದ ಪ್ರತಿಯೊಬ್ಬ ಕಾಂಗ್ರೆಸ್ ಶಾಸಕರು ಮತ್ತು ಸಂಸದರು ತಲಾ ಕನಿಷ್ಠ 1 ಲಕ್ಷ ರೂ. ದೇಣಿಗೆ ನೀಡಲಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರು ತಿಳಿಸಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಶುಕ್ರವಾರ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಆರ್ ಎಸ್ಎಸ್ ಹಾಗೂ ಬಿಜೆಪಿಯವರ ತರಹ ಬೀದಿಗಿಳಿದು ವಸೂಲಿ ಮಾಡುವುದಿಲ್ಲ. ಈ ರೀತಿ ಹಣ ಹಾಗೂ ದವಸ ಧಾನ್ಯ ಸಂಗ್ರಹಿಸಲು ನಮ್ಮ ಪಕ್ಷ ಪ್ರೋತ್ಸಾಹ ನೀಡುವುದಿಲ್ಲ ಎಂದರು.

ನಮ್ಮ ಪಕ್ಷದ ಶಾಸಕರುಗಳು ಕೆಪಿಸಿಸಿ ರಿಲೀಫ್ ಫಂಡ್ ಗೆ ತಲಾ ಒಂದು ಲಕ್ಷ ಕೊಡಲೇಬೇಕು, ಇನ್ನೂ ಸಾಮರ್ಥ್ಯ ಇರುವವರು ಹೆಚ್ಚು ಕೊಡಬಹುದು ಎಂದರು.

ಕೊರೋನಾ ಸೋಂಕು ನಿಯಂತ್ರಣ ವಿಚಾರವಾಗಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಇತರೆ ನಾಯಕರುಗಳು ರಾಷ್ಟ್ರ ಮಟ್ಟದಲ್ಲಿ ಸರ್ಕಾರಕ್ಕೆ ಸಹಕಾರ ನೀಡುತ್ತಿದ್ದಾರೆ. ರಾಜ್ಯದಲ್ಲಿ ನಾವೂ ಕೂಡ ಸರ್ಕಾರದ ಜತೆ ನಿಲ್ಲುತ್ತೇವೆ. ನಮ್ಮಲ್ಲಿ ಯಾವುದೇ ರೀತಿಯ ಭಿನ್ನಾಭಿಪ್ರಾಯವಿಲ್ಲ. ಸರ್ಕಾರ ತೆಗೆದುಕೊಂಡಿರುವ ಅನೇಕ ಕಾರ್ಯಕ್ರಮ, ಘೋಷಣೆಗಳಿಗೆ ನಮ್ಮಿಂದ ಸಂಪೂರ್ಣ ಸಹಕಾರವಿರುತ್ತದೆ ಎಂದರು.

ಕಳೆದ ನಾಲ್ಕೈದು ದಿನಗಳಿಂದ ರಾಜ್ಯದಲ್ಲಿ ಪೊಲೀಸ್ ದೌರ್ಜನ್ಯ ಹೆಚ್ಚಾಗಿದೆ. ಇದನ್ನು ನಮ್ಮ ಪಕ್ಷ ಖಂಡಿಸುತ್ತದೆ. ಹೀಗೆ ವರ್ತನೆ ಮಾಡಿದ ಪೊಲೀಸರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕರ್ಫ್ಯೂ ನೆಪ ಮಾಡಿಕೊಂಡು ದೌರ್ಜನ್ಯ ಮಾಡುವುದನ್ನು ನಿಲ್ಲಿಸಬೇಕು ಎಂದು ಡಿಕೆಶಿ ಸರ್ಕಾರಕ್ಕೆ ಒತ್ತಾಯಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com