ವಲಸೆ ಕಾರ್ಮಿಕರ ವಿಚಾರದಲ್ಲಿ ಮಾನವೀಯತೆಯಿಂದ ವರ್ತಿಸಿ: ಖಂಡ್ರೆ

ಜನ ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ, ಇರುವಾಗಲೇ ಬದುಕು ಕಲ್ಪಿಸುವುದು ಸರ್ಕಾರದ ಕರ್ತವ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.
ಈಶ್ವರ್ ಖಂಡ್ರೆ (ಸಂಗ್ರಹ ಚಿತ್ರ)
ಈಶ್ವರ್ ಖಂಡ್ರೆ (ಸಂಗ್ರಹ ಚಿತ್ರ)

ಬೆಂಗಳೂರು: ಜನ ಸತ್ತ ಮೇಲೆ ಪರಿಹಾರ ಕೊಡುವುದು ಸಾಧನೆಯಲ್ಲ, ಇರುವಾಗಲೇ ಬದುಕು ಕಲ್ಪಿಸುವುದು ಸರ್ಕಾರದ ಕರ್ತವ್ಯ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಹೇಳಿದ್ದಾರೆ.

ತಮ್ಮ ಬೆಂಗಳೂರಿನ ನಿವಾಸದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಕ್ಕೆ ಮರಳಲಿಚ್ಛಿಸುವ ಕನ್ನಡಿಗರಿಗೆ ಸರ್ಕಾರದಿಂದ ಅನ್ಯಾಯವಾಗಿದೆ. ಲಾಕ್ ಡೌನ್ ಅವಧಿಯಲ್ಲಿ ದುಡಿಯುವ ಕೈಗೆ ಕೆಲಸ ಇಲ್ಲದೆ ಸರ್ಕಾರ ಅಥವಾ ದಾನಿಗಳು ನೀಡುವ ದವಸ ಧಾನ್ಯಕ್ಕೆ ಕೈಯೊಡ್ಡಲು  ಮನಸ್ಸು ಒಪ್ಪದೆ ಸಾವಿರಾರು ಸ್ವಾಭಿಮಾನಿ ಕಾರ್ಮಿಕರು ತಮ್ಮ ತಮ್ಮ ಊರಿಗೆ ಮರಳಲು ಉತ್ಸುಕರಾಗಿದ್ದು, ಇವರ ವಿಚಾರದಲ್ಲಿ ಸರ್ಕಾರ ಮಾನವೀಯತೆಯಿಂದ ವರ್ತಿಸಬೇಕು ಎಂದಿದ್ದಾರೆ.

ಹೊರ ರಾಜ್ಯಗಳಲ್ಲಿ ಹೋಗಿ ದುಡಿಯುತ್ತಿರುವ ಲಕ್ಷಾಂತರ ಕನ್ನಡಿಗರ ಪೈಕಿ ಪ್ರಸ್ತುತ 91,077ಕ್ಕೂ ಹೆಚ್ಚು ಜನರು ರಾಜ್ಯಕ್ಕೆ ಮರಳಲು ಸೇವಾ ಸಿಂಧು ಪೋರ್ಟಲ್ ನಲ್ಲಿ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದಾರೆ. ಆದರೆ ಸರ್ಕಾರ ಈವರೆಗೆ 706 ಜನರಿಗೆ ಅನುಮತಿ ನೀಡಿದೆ. ಇನ್ನೂ 51,241  ಕ್ಕೂ ಹೆಚ್ಚು ಅರ್ಜಿ ವಿಲೇವಾರಿ ಮಾಡದೆ ಸರ್ಕಾರ ವಿಳಂಬ ಮಾಡುತ್ತಿದೆ. ಕೆಲವು ಅರ್ಜಿಗಳು ಜಿಲ್ಲಾಧಿಕಾರಿಗಳ ಬಳಿಯೇ ಇದೆ ಮತ್ತೆ ಕೆಲವು ನೋಡಲ್ ಅಧಿಕಾರಿಗಳ ಬಳಿ ಇವೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com