ಹೆಚ್ ಡಿ ದೇವೇಗೌಡರ ಸರಳ ಹುಟ್ಟುಹಬ್ಬ: ಪ್ರಧಾನಿ ಮೋದಿ ಸೇರಿ ಹಲವು ಗಣ್ಯರಿಂದ ಶುಭ ಹಾರೈಕೆ

ಇಂದು ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ನಾಯಕ ಹೆಚ್. ಡಿ ದೇವೇಗೌಡ ಅವರಿಗೆ 88ನೇ ಹುಟ್ಟುಹಬ್ಬದ ಸಂಭ್ರಮ. ಕೊರೋನಾ ಸೋಂಕು ನಿಯಂತ್ರಣ ಉದ್ದೇಶದಿಂದ ಸಾಮಾಜಿಕ ಅಂತರ ನಿಯಮದಿಂದಾಗಿ ದೇವೇಗೌಡರು ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.

Published: 18th May 2020 11:34 AM  |   Last Updated: 18th May 2020 11:37 AM   |  A+A-


HDDEVEGOWDA_PM_MODI1

ಎಚ್. ಡಿ. ದೇವೇಗೌಡ ಹುಟ್ಟುಹಬ್ಬ, ಪ್ರಧಾನಿ ಮೋದಿ

Posted By : Nagaraja AB
Source : UNI

ಬೆಂಗಳೂರು: ಇಂದು ಮಾಜಿ ಪ್ರಧಾನಿ ಜೆಡಿಎಸ್ ರಾಷ್ಟ್ರೀಯ ನಾಯಕ ಹೆಚ್. ಡಿ ದೇವೇಗೌಡ ಅವರಿಗೆ 88ನೇ ಹುಟ್ಟುಹಬ್ಬದ ಸಂಭ್ರಮ. ಕೊರೋನಾ ಸೋಂಕು ನಿಯಂತ್ರಣ ಉದ್ದೇಶದಿಂದ ಸಾಮಾಜಿಕ ಅಂತರ ನಿಯಮದಿಂದಾಗಿ ದೇವೇಗೌಡರು ಈ ಬಾರಿ ತಮ್ಮ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.

ಮನೆಯ ಸದಸ್ಯರೊಂದಿಗೆ ಕೇಕ್ ಕತ್ತರಿಸಿ ಮನೆಯಲ್ಲಿಯೇ ಕಾಲಕಳೆಯುತ್ತಿದ್ದಾರೆ.ಹಿರಿಯ ರಾಜಕಾರಣಿಯ ಹುಟ್ಟುಹಬ್ಬಕ್ಕೆ ಪ್ರಧಾನಿ ನರೇಂದ್ರ ಮೋದಿ ಶುಭಕೋರಿ, ದೇವರು ಸುದೀರ್ಘ ಆರೋಗ್ಯ ಹಾಗೂ ಆಯಶ್ಸು ಕೊಡಲೆಂದು ಹಾರೈಸಿ ಟ್ವೀಟ್ ಮಾಡಿದ್ದಾರೆ.

ಇನ್ನು ಟ್ವೀಟ್ ಮೂಲಕ ತಂದೆಯ ಜನ್ಮದಿನಕ್ಕೆ ಶುಭಾಶಯ ಕೋರಿದ ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿ, ದೇಶದ ಅತ್ಯುನ್ನತ, ಅಸಾಮಾನ್ಯ ಹುದ್ದೆಯನ್ನು ಸಾಮಾನ್ಯನೂ ಅಲಂಕರಿಸಬಹುದು ಎಂಬುದು ಭಾರತದ ಪ್ರಜಾಪ್ರಭುತ್ವದ ಸೌಂದರ್ಯ. ಈ ಮಾತನ್ನು, ಹಳ್ಳಿಯ ಮಣ್ಣಿಂದ ಬಂದು, ರಾಷ್ಟ್ರೀಯ ಪಕ್ಷದ ಹಿನ್ನೆಲೆ ಇಲ್ಲದೇ ಸಾಧಿಸಿ ತೋರಿಸಿದ ನೀವು ನಮಗೆಲ್ಲಾ ಮಾದರಿ. ಬದ್ಧತೆ, ಛಲ, ಪರಿಶ್ರಮ, ಹೋರಾಟ ಮತ್ತು ನಾಡಿಗೆ ಹೆಗ್ಗುರುತಾಗಿರುವ ಅವರ ಜನ್ಮದಿನಕ್ಕೆ ಶುಭಾಶಯಗಳು ಎಂದಿದ್ದಾರೆ.

 

Stay up to date on all the latest ರಾಜಕೀಯ news with The Kannadaprabha App. Download now
Poll
Priyanka gandhi

ಪ್ರಿಯಾಂಕಾ ಗಾಂಧಿಯನ್ನು ಉತ್ತರ ಪ್ರದೇಶದಲ್ಲಿ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಕಾಂಗ್ರೆಸ್ ಘೋಷಿಸಬೇಕೇ?


Result
ಹೌದು
ಬೇಡ
ಗೊತ್ತಿಲ್ಲ
flipboard facebook twitter whatsapp