20 ಲಕ್ಷ ಕೋಟಿಯಲ್ಲಿರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ‘ಸೊನ್ನೆ’?: ಮೋದಿ ಪ್ಯಾಕೇಜ್ ಟೀಕಿಸಿದ ಸಿದ್ದರಾಮಯ್ಯ

ಅಪ್ಪಟ ಸುಳ್ಳು, ಅತಿರಂಜಿತ ವಿಷಯಗಳನ್ನೇ ಮುಂದಿಟ್ಟುಕೊಂಡು ಜನರನ್ನು ವಂಚಿಸುವ ಆಡಳಿತದ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿಯವರ ಕೊರೋನ ಪರಿಹಾರ ಪ್ಯಾಕೇಜ್ ನಮ್ಮ ಮುಂದಿದೆ. ಹೀಗಾಗಿ 20 ಲಕ್ಷ ಕೋಟಿಯಲ್ಲಿರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ‘ಸೊನ್ನೆ’ ಸಿಗಲಿದೆ ಎನ್ನುವುದು ಈಗ ಮೂಡಿರುವ ಪ್ರಶ್ನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮ

Published: 21st May 2020 06:16 PM  |   Last Updated: 21st May 2020 06:16 PM   |  A+A-


Ex CM Siddaramaiah in New Indian Express office Bengaluru

ಸಿದ್ದರಾಮಯ್ಯ

Posted By : Lingaraj Badiger
Source : UNI

ಬೆಂಗಳೂರು: ಅಪ್ಪಟ ಸುಳ್ಳು, ಅತಿರಂಜಿತ ವಿಷಯಗಳನ್ನೇ ಮುಂದಿಟ್ಟುಕೊಂಡು ಜನರನ್ನು ವಂಚಿಸುವ ಆಡಳಿತದ ಮುಂದುವರಿದ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿಯವರ ಕೊರೋನ ಪರಿಹಾರ ಪ್ಯಾಕೇಜ್ ನಮ್ಮ ಮುಂದಿದೆ. ಹೀಗಾಗಿ 20 ಲಕ್ಷ ಕೋಟಿಯಲ್ಲಿರುವ 13 ಸೊನ್ನೆಗಳಲ್ಲಿ ಯಾರಿಗೆ ಯಾವ ‘ಸೊನ್ನೆ’ ಸಿಗಲಿದೆ ಎನ್ನುವುದು ಈಗ ಮೂಡಿರುವ ಪ್ರಶ್ನೆಯಾಗಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು, ಲಾಕ್‌ಡೌನ್‌ ಸಂದರ್ಭದಲ್ಲಿ ಕೇಂದ್ರ ಸರ್ಕಾರ ಘೋಷಿಸಿರುವ ಪ್ಯಾಕೇಜ್‌ನಿಂದ ಯಾವುದೇ ಲಾಭವಿಲ್ಲ ಎಂದು ಹೇಳಿದ್ದಾರೆ.

ನಿನ್ನೆ ಎಪಿಎಂಸಿ ಕಾಯ್ದೆ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ವೇಳೆಯೂ ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದ ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರ ಘೋಷಣೆ ಮಾಡಿರುವ 20 ಲಕ್ಷ ಕೋಟಿ ಪ್ಯಾಕೇಜ್ ಬೋಗಸ್ ಪ್ಯಾಕೇಜ್. ಪ್ಯಾಕೇಜ್‌ನ ಒಂದು ರೂಪಾಯಿ ಕೂಡ ಯಾರಿಗೂ ತಲುಪಿಲ್ಲ. ಒಬ್ಬ ಫಲಾನುಭವಿಗೂ ಒಂದು ಸಾವಿರ ರೂ. ಕೊಟ್ಟಿಲ್ಲ. ಬಜೆಟ್‌ನಲ್ಲಿರುವ ಯೋಜನೆಗಳನ್ನು ತಿರುಚಿ ಶಹಬ್ಬಾಶ್‌ಗಿರಿ ತೆಗೆದುಕೊಳ್ಳುವ ಪ್ರಯತ್ನವನ್ನು ಮೋದಿ ಮಾಡುತ್ತಿದ್ದಾರೆ. ಲಾಕ್‌ಡೌನ್‌ ಸಮಯದಲ್ಲಿ ಜನಹಿತ ಕಾಪಾಡುವಲ್ಲಿ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಸಂಪೂರ್ಣ ವಿಫಲವಾಗಿದೆ ಎಂದು ಆರೋಪಿಸಿದ್ದರು.

Stay up to date on all the latest ರಾಜಕೀಯ news with The Kannadaprabha App. Download now
facebook twitter whatsapp