ರಾಜರಾಜೇಶ್ವರಿ ನಗರ ಉಪ ಚುನಾವಣೆಗಿನ್ನೂ ಅಭ್ಯರ್ಥಿ ಅಂತಿಮವಾಗಿಲ್ಲ: ಜೆಡಿಎಸ್

ಬಾಕಿ ಉಳಿದಿರುವ ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತಿದೆ ಎನ್ನಲಾಗಿತ್ತು. ಆದರೆ ಮೈತ್ರಿ ವಿಚಾರವನ್ನು ಜೆಡಿಎಸ್ ತಳ್ಳಿಹಾಕಿದ್ದು, ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಅಭ್ಯರ್ಥಿ ಅಂತಿಮವಾಗಿಲ್ಲ ಎಂದು ಸ್ಪಷ್ಟಪಡಿಸಿದೆ.
ಜೆಡಿಎಸ್ ಲೋಗೋ
ಜೆಡಿಎಸ್ ಲೋಗೋ

ಬೆಂಗಳೂರು: ಬಾಕಿ ಉಳಿದಿರುವ ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಕಾಂಗ್ರೆಸ್ ಜೊತೆ ಹೊಂದಾಣಿಕೆ ಮಾಡಿಕೊಂಡು ಜೆಡಿಎಸ್ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುತ್ತಿದೆ ಎನ್ನಲಾಗಿತ್ತು. ಆದರೆ ಮೈತ್ರಿ ವಿಚಾರವನ್ನು ಜೆಡಿಎಸ್ ತಳ್ಳಿಹಾಕಿದ್ದು, ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಅಭ್ಯರ್ಥಿ ಅಂತಿಮವಾಗಿಲ್ಲ ಎಂದು ಸ್ಪಷ್ಟಪಡಿಸಿದೆ.

ಈ ವಿಷಯವಾಗಿ ಕೆಲವು ಕಿಡಿಗೇಡಿಗಳು, ಜೆಡಿಎಸ್ ಬೆಂಬಲಿತ ಕಾಂಗ್ರೆಸ್ ಅಭ್ಯರ್ಥಿಯಾಗಿ ಹನುಮಂತರಾಯಪ್ಪ ಎಂದು ಅಪ-ಪ್ರಚಾರ ಮಾಡುತ್ತಿದ್ದು, ನಮ್ಮ ಪಕ್ಷದ ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತಿದ್ದಾರೆ ಎಂದು ಬೆಂಗಳೂರು ಘಟಕ ಜೆಡಿಎಸ್ ಅಧ್ಯಕ್ಷ ಪ್ರಕಾಶ್ ಆರೋಪಿಸಿದ್ದಾರೆ.

ಜೆಡಿಎಸ್ ಪಕ್ಷದ ವರಿಷ್ಠರು, ಕಾರ್ಯಕರ್ತರೊಡನೆ ಸಮಾಲೋಚಿಸಿ ಸೂಕ್ತ ಅರ್ಹ ಅಭ್ಯರ್ಥಿಯನ್ನು ಉಪಚುನಾವಣೆ ಕಣ್ಣಕ್ಕೆ ಆಯ್ಕೆ ಮಾಡಲಿದ್ದು, ಕಾರ್ಯಕರ್ತರುಗಳ ಯಾವುದೇ ರೀತಿಯ ಗೊಂದಲಕ್ಕೊಳಗಾಗಬಾರದೆಂದು ಮನವಿ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com